Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:17 - ಕನ್ನಡ ಸತ್ಯವೇದವು J.V. (BSI)

17 ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ ಅದು ಅವನಿಗೆ ತಿಳಿಯದೆಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ, ಅದು ಅವನಿಗೆ ತಿಳಿಯದೆ ಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ನಿಮ್ಮಲ್ಲಿ ಯಾರಾದರು ಸರ್ವೇಶ್ವರನು ವಿಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ಮಾಡಿ ದೋಷಕ್ಕೆ ಒಳಗಾದರೆ, ಅದು ಅವರಿಗೆ ತಿಳಿಯದೆ ಹೋದರೂ, ಅವರು ಅದರಿಂದ ಅಪರಾಧಿಯಾಗಿ ತಮ್ಮ ಪಾಪಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದಾದರೊಂದನ್ನು ಮಾಡಿ ದೋಷಕ್ಕೆ ಗುರಿಯಾಗಿದ್ದರೆ, ಅದು ಅವನಿಗೆ ತಿಳಿದಿಲ್ಲದಿದ್ದರೂ ಅವನು ಆ ಪಾಪಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಯಾರಾದರೂ ಯೆಹೋವ ದೇವರು ನಿಷೇಧಿಸಿದ ಆಜ್ಞೆಗಳಲ್ಲಿ ಯಾವುದನ್ನಾದರೂ ಮಾಡಿ, ಪಾಪಮಾಡಿದರೆ, ಅದು ಅವರಿಗೆ ತಿಳಿಯದಿದ್ದರೂ ಅವರು ಅಪರಾಧಿಯಾಗಿರುವರು ಮತ್ತು ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:17
11 ತಿಳಿವುಗಳ ಹೋಲಿಕೆ  

ನಿಮ್ಮ ದೇಶಸ್ಥರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


ಇಸ್ರಾಯೇಲ್ಯರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ


ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾವನು? ಮರೆಯಾದವುಗಳಿಂದ ನನ್ನನ್ನು ನಿರ್ಮಲಮಾಡು.


ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧಪ್ರಾಯಶ್ಚಿತ್ತಕ್ಕಾಗಿ ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ ಎರಡು ಅಥವಾ ಹೆಚ್ಚು ರೂಪಾಯಿ ಬಾಳುವದೆಂದು ನಿಮಗೆ ತೋರುವ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು.


ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


ತಿಳಿಯದೆ ಪೆಟ್ಟುಗಳಿಗೆ ಯೋಗ್ಯವಾದದ್ದನ್ನು ನಡಿಸಿದವನು ಸ್ವಲ್ಪ ಪೆಟ್ಟು ತಿನ್ನುವನು. ಯಾವನಿಗೆ ಬಹಳವಾಗಿ ಕೊಟ್ಟದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವದು; ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳುವರು.


ಸಂಶಯಪಟ್ಟು ಉಣ್ಣುವವನು ಸಂಶಯದಿಂದ ಉಣ್ಣುವ ಕಾರಣ ದೋಷಿಯಾಗಿದ್ದಾನೆ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.


ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ನಿಮಗೆ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವದು.


ಅವನು ಅಪರಾಧಿಯಾದದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು