Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:18 - ಕನ್ನಡ ಸತ್ಯವೇದವು J.V. (BSI)

18 ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ನಿಮಗೆ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಂಥವರು ಪರಿಹಾರಕ್ಕಾಗಿ ಹಿಂಡಿನಿಂದ ಕಳಂಕರಹಿತವಾದ ಟಗರೊಂದನ್ನು ಅಥವಾ ಅದಕ್ಕೆ ಸರಿಸಮಾನವಾದುದನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವರು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಬೇಕು. ಆಗ ಅವರಿಗೆ ಕ್ಷಮೆ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವನು ಅಂಗದೋಷವಿಲ್ಲದ ಮತ್ತು ಸರಿಯಾದ ಬೆಲೆಬಾಳುವ ಟಗರನ್ನು ಯಾಜಕನ ಬಳಿಗೆ ತರಬೇಕು. ಟಗರು ದೋಷಪರಿಹಾರಕ ಯಜ್ಞವಾಗಿರುವುದು. ಹೀಗೆ ಯಾಜಕನು ತಿಳಿಯದೆ ಮಾಡಿದ ಪಾಪದಿಂದ ಅವನನ್ನು ಶುದ್ಧಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಲ್ಲದೆ ಅವನು ಹಿಂಡಿನೊಳಗಿಂದ ಕಳಂಕರಹಿತವಾದ ಒಂದು ಟಗರನ್ನು ನಿನ್ನ ಅಂದಾಜಿಗನುಸಾರ ಪ್ರಾಯಶ್ಚಿತ್ತ ಬಲಿಗಾಗಿ, ಯಾಜಕನ ಬಳಿಗೆ ತರಬೇಕು. ಯಾಜಕನು, ಅಜ್ಞಾನದಿಂದ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ, ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನಿಗೆ ಕ್ಷಮೆ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:18
10 ತಿಳಿವುಗಳ ಹೋಲಿಕೆ  

ಅವನು [ಅಭಿಷಿಕ್ತ ಯಾಜಕನ] ದೋಷಪರಿಹಾರಕಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವದು.


ಅವನು ಆ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದಕ್ಕಾಗಿ ಅಂಗೀಕಾರವಾಗುವದು.


ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ ಅದು ಅವನಿಗೆ ತಿಳಿಯದೆಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.


ಅವನು ಅಪರಾಧಿಯಾದದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು.


ಆ ಟಗರುಗಳಲ್ಲಿ ಒಂದನ್ನೂ ಆ ಸೇರು ಎಣ್ಣೆಯನ್ನೂ ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು; ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.


ಅವರೆಲ್ಲರೂ ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೋಸ್ಕರ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ ನೈವೇದ್ಯವಾಗಿ ಅದಕ್ಕೆ ನೇವಿುತವಾದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ದೋಷಪರಿಹಾರಕಯಜ್ಞವಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.


ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನಗೆ ಯೆಹೋವನು ಒಲಿಯುವಂತೆ ದೇವದರ್ಶನದ ಗುಡಾರದ ಬಾಗಲಿಗೆ ಅದನ್ನು ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು