Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:19 - ಕನ್ನಡ ಸತ್ಯವೇದವು J.V. (BSI)

19 ಅವನು ಅಪರಾಧಿಯಾದದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಅಪರಾಧಿಯಾದುದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರು ಅಪರಾಧಿಗಳಾದುದರಿಂದ ಸರ್ವೇಶ್ವರನ ಸನ್ನಿಧಿಯಲ್ಲಿ ಈ ಪರಿಹಾರ ಬಲಿಯನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವನು ದೋಷಿಯಾದ್ದರಿಂದ ಯೆಹೋವನಿಗೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು ನಿಶ್ಚಯವಾಗಿ ಯೆಹೋವ ದೇವರ ವಿರುದ್ಧವಾಗಿ ಅಪರಾಧ ಮಾಡಿದ್ದಾನೆ, ಅದಕ್ಕಾಗಿ ಇದು ಪ್ರಾಯಶ್ಚಿತ್ತ ಬಲಿಯಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:19
10 ತಿಳಿವುಗಳ ಹೋಲಿಕೆ  

ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ನಿನ್ನಿಂದ ಏನು ಕದ್ದುಕೊಂಡಿದ್ದೇವೆ ಎಂದು ಕೇಳುತ್ತೀರೋ? ದಶಮಾಂಶ, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.


ನಿನಗೇ ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದಲ್ಲಾ.


ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ - ಇಸ್ರಾಯೇಲ್ಯರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ [ನಮ್ಮನ್ನು ನಾವು ತಿದ್ದಿಕೊಳ್ಳುವ] ನಿರೀಕ್ಷೆಯು ಇನ್ನೂ ಉಂಟು.


ಕುರಿಯನ್ನು ಕೊಡುವದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು ಸರ್ವಾಂಗಹೋಮವಾಗಿ ಒಂದನ್ನೂ ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನೂ ಯೆಹೋವನಿಗೆ ಸಮರ್ಪಿಸಬೇಕು.


ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ ಅದು ಅವನಿಗೆ ತಿಳಿಯದೆಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.


ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ನಿಮಗೆ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವದು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ಅವರು ಗಿಲ್ಯಾದಿನಲ್ಲಿದ್ದ ರೂಬೇನ್ಯರು, ಗಾದ್ಯರು ಮನಸ್ಸೆ ಕುಲದ ಅರ್ಧಜನರು ಇವರ ಬಳಿಗೆ ಬಂದು -


ಹೆಬ್ಬಾಗಿಲ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮಪಶು, ದೋಷಪರಿಹಾರಕಯಜ್ಞಪಶು, ಪ್ರಾಯಶ್ಚಿತ್ತಯಜ್ಞಪಶು ಇವುಗಳನ್ನು ವಧಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು