ಯಾಜಕಕಾಂಡ 6:25 - ಕನ್ನಡ ಸತ್ಯವೇದವು J.V. (BSI)25 ನೀನು ಆರೋನನಿಗೂ ಅವನ ವಂಶದವರಿಗೂ ಹೀಗೆ ಆಜ್ಞಾಪಿಸು - ದೋಷಪರಿಹಾರಕ ಯಜ್ಞನಿಯಮಗಳು. ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನೂ ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಹೀಗೆ ಆಜ್ಞಾಪಿಸು, ‘ದೋಷಪರಿಹಾರಕ ಯಜ್ಞದ ನಿಯಮಗಳು: ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 “ನೀನು ಆರೋನನಿಗೂ ಅವನ ವಂಶಜರಿಗೂ ದೋಷಪರಿಹಾರಕ ಬಲಿ ನಿಯಮಗಳ ಬಗ್ಗೆ ಹೀಗೆ ಆಜ್ಞಾಪಿಸು: ದಹನ ಬಲಿಪ್ರಾಣಿಯನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಬಲಿಪ್ರಾಣಿಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ವಧಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ಆರೋನನಿಗೆ ಮತ್ತು ಅವನ ಪುತ್ರರಿಗೆ ಹೀಗೆ ಹೇಳು: ಪಾಪಪರಿಹಾರಕ ಯಜ್ಞದ ಕಟ್ಟಳೆ ಇದಾಗಿದೆ. ಸರ್ವಾಂಗಹೋಮ ಪಶುವು ವಧಿಸಲ್ಪಡುವ ಸ್ಥಳದಲ್ಲಿಯೇ ಪಾಪಪರಿಹಾರಕ ಯಜ್ಞಪಶುವು ಯೆಹೋವನ ಸನ್ನಿಧಿಯಲ್ಲಿ ವಧಿಸಲ್ಪಡಬೇಕು. ಅದು ಮಹಾ ಪವಿತ್ರವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ಆರೋನನಿಗೂ, ಅವನ ಪುತ್ರರಿಗೂ ಹೇಳು: ‘ಪಾಪ ಪರಿಹಾರದ ಬಲಿಯ ನಿಯಮವು ಇದೇ. ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯೂ ಯೆಹೋವ ದೇವರ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿ |