Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:27 - ಕನ್ನಡ ಸತ್ಯವೇದವು J.V. (BSI)

27 ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲಾ ಪರಿಶುದ್ಧವಾಗುವದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ಪ್ರಾಣಿಯ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು, ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರ ಸ್ಥಳದಲ್ಲೇ ಒಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಪಾಪಪರಿಹಾರಕ ಯಜ್ಞದ ಮಾಂಸವು ತಗಲಿದ ವಸ್ತುವೂ ಪವಿತ್ರವಾಗುತ್ತದೆ; ಮುಟ್ಟುವ ವ್ಯಕ್ತಿಯೂ ಪವಿತ್ರವಾಗುವನು. “ಚಿಮಿಕಿಸಲ್ಪಟ್ಟ ರಕ್ತದಲ್ಲಿ ಸ್ವಲ್ಪ ರಕ್ತವು ಯಾರ ಬಟ್ಟೆಯ ಮೇಲಾದರೂ ಬಿದ್ದರೆ, ನೀವು ಆ ಬಟ್ಟೆಗಳನ್ನು ಪವಿತ್ರಸ್ಥಳದಲ್ಲಿ ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅದರ ಮಾಂಸವನ್ನು ಮುಟ್ಟಿದ್ದೆಲ್ಲವೂ ಪರಿಶುದ್ಧವಾಗಿರುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಉಡುಪಿನ ಮೇಲೆ ಬಿದ್ದರೆ, ಅದನ್ನು ಚಿಮುಕಿಸಿದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:27
11 ತಿಳಿವುಗಳ ಹೋಲಿಕೆ  

ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿವಿುತ್ತವಾಗಿ ದೋಷಪರಿಹಾರಕಾಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿಪರಿಶುದ್ಧವಾಗಿರಬೇಕು; ಯಜ್ಞವೇದಿಗೆ ಸೋಂಕಿದ್ದೆಲ್ಲವು ಪರಿಶುದ್ಧವಾಗಿರಬೇಕು.


ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮಗೆ ಎಂಥ ತಹತಹವನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸ್ಥಾಪಿಸುವದಕ್ಕೆ ಎಷ್ಟೋ ಪ್ರಯಾಸಪಟ್ಟಿರಿ, ಎಷ್ಟೋ ಮನೋವ್ಯಥೆಯನ್ನು ಅನುಭವಿಸಿದಿರಿ; ಎಂಥ ಭಯವನ್ನು ಎಂಥ ಹಂಬಲವನ್ನು ತೋರಿಸಿದಿರಿ; ಮಾನಹಾನಿಗಾಗಿ ಎಷ್ಟೋ ರೋಷಪಟ್ಟು ಶಿಕ್ಷೆಮಾಡಿದಿರಿ. ನೀವು ಆ ಕಾರ್ಯಕ್ಕೆ ಸೇರಿದವರಲ್ಲವೆಂಬದನ್ನು ಎಲ್ಲಾ ವಿಧದಲ್ಲಿಯೂ ತೋರಿಸಿದಿರಿ.


ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.


ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ನೆಟ್ಟಗಾಗುವೆನು ಎಂದು ಮನಸ್ಸಿನಲ್ಲಿ ಅಂದುಕೊಂಡು ಹಿಂದಿನಿಂದ ಬಂದು ಆತನ ಉಡುಪಿನ ಗೊಂಡೆಯನ್ನು ಮುಟ್ಟಿದಳು.


ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನು ಇಲ್ಲವೆ ಗುಗ್ಗರಿಯನ್ನು ಅಥವಾ ದ್ರಾಕ್ಷಾರಸವನ್ನು ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವವೋ ಎಂದು ಧರ್ಮವಿಧಿಯನ್ನು ವಿಚಾರಿಸು. [ಪ್ರವಾದಿಯು ಹಾಗೆ ವಿಚಾರಿಸಲು] ಯಾಜಕರು ಇಲ್ಲವೆಂದು ಉತ್ತರ ಕೊಟ್ಟರು.


ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವದೋ ಆ ವಸ್ತುವು ಅಶುದ್ಧವಾಗಿರುವದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಗೋಣಿಯಾಗಲಿ ಅದು ಎಂಥದಾದರೂ ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಸಾಯಂಕಾಲದವರೆಗೂ ಅಶುದ್ಧವಾಗಿರುವದು; ತರುವಾಯ ಶುದ್ಧಿಯಾಗುವದು.


ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ನಿಮ್ಮಸಂತತಿಯವರಿಗೂ ಸಲ್ಲತಕ್ಕದ್ದೆಂಬದು ಶಾಶ್ವತ ನಿಯಮ. ಆ ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವದು.


ಅದರ ಪೀಠ ಇವುಗಳನ್ನೆಲ್ಲಾ ಅಭಿಷೇಕಿಸಿ ಅವು ಅತಿ ಪರಿಶುದ್ಧವಾಗುವಂತೆ ಪ್ರತಿಷ್ಠಿಸಬೇಕು. ಅವುಗಳಿಗೆ ಸೋಂಕಿದೆಲ್ಲವು ಪರಿಶುದ್ಧವಾಗಿರುವದು.


ಆತನನ್ನು - ನಿನ್ನ ಉಡುಪಿನ ಗೊಂಡೆಯನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು. ಮುಟ್ಟಿದವರೆಲ್ಲರು ಸ್ವಸ್ಥರಾದರು.


ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನದೆ ಬೆಂಕಿಯಲ್ಲಿ ಸುಟ್ಟುಬಿಡಬೇಕು. ಶುದ್ಧರಾಗಿರುವವರೆಲ್ಲರೂ [ಯಜ್ಞಪಶುವಿನ] ಮಾಂಸವನ್ನು ತಿನ್ನಬಹುದು.


ಅವರು ಹೊರಗಣ ಪ್ರಾಕಾರಕ್ಕೆ ಅಂದರೆ ಅಲ್ಲಿನ ಜನರ ಬಳಿಗೆ ಹೊರಡುವಾಗ ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗಲಿಸಿ ಅವರನ್ನು ಪರಿಶುದ್ಧರಾಗಮಾಡದಂತೆ ಅವುಗಳನ್ನು ತೆಗೆದು ಪರಿಶುದ್ಧವಾದ ಕೋಣೆಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಹಾಕಿಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು