Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:4 - ಕನ್ನಡ ಸತ್ಯವೇದವು J.V. (BSI)

4 ಅವನು ಆಯಾ ವಸ್ತುಗಳನ್ನೇ ಅಂದರೆ ಕದ್ದದ್ದನ್ನೂ ಮೋಸದಿಂದ ಪಡೆದದ್ದನ್ನೂ ತನ್ನ ವಶಕ್ಕೆ ತೆಗೆದುಕೊಂಡದ್ದನ್ನೂ ತಾನು ಕಂಡುಕೊಂಡದ್ದನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು ತನ್ನ ವಶಕ್ಕೆ ತೆಗೆದುಕೊಂಡದ್ದನ್ನು, ತಾನು ಕಂಡುಕೊಂಡದ್ದನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4-5 ಅಂಥವರು ಆಯಾ ವಸ್ತುಗಳನ್ನು, ಅಂದರೆ ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು, ತಮ್ಮ ವಶಕ್ಕೆ ತೆಗೆದುಕೊಂಡದ್ದನ್ನು ಪೂರ್ತಿಯಾಗಿ ಹಿಂದಕ್ಕೆ ತಂದುಕೊಡಬೇಕು. ಅದೂ ಅಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಸೇರಿಸಿಕೊಡಬೇಕು. ಅವರು ಪರಿಹಾರ ಮಾಡುವ ದಿನದಲ್ಲೆ ಅದನ್ನು ಅದರ ನಿಜವಾದ ಒಡೆಯನಿಗೆ ಹಿಂದಕ್ಕೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವನು ತಾನು ಕದ್ದದ್ದನ್ನಾಗಲಿ ಮೋಸದಿಂದ ತೆಗೆದುಕೊಂಡದ್ದನ್ನಾಗಲಿ ಅಡವು ಇಟ್ಟುಕೊಂಡದ್ದನ್ನಾಗಲಿ ಕಂಡುಕೊಂಡ ಅಥವಾ ಕಳೆದುಹೋದ ವಸ್ತುವನ್ನಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಪಾಪಮಾಡಿ, ಅಪರಾಧಿಯಾಗಿರುವುದರಿಂದ ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಇಲ್ಲವೆ ಅವನು ಮೋಸದಿಂದ ಪಡೆದ ವಸ್ತುವನ್ನೂ ಇಲ್ಲವೆ ಅವನ ವಶಕ್ಕೆ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ತಂದುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:4
20 ತಿಳಿವುಗಳ ಹೋಲಿಕೆ  

ಹೊಸ್ತಿಲಹಾರಿ ನುಗ್ಗಿ ಮೋಸಹಿಂಸೆಗಳಿಂದ ದೋಚಿದ್ದನ್ನು ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು.


ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರವಿುಸಿಕೊಳ್ಳುತ್ತಾರೆ, ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ; ಮನೆಯನ್ನೂ ಮನೆಯವನನ್ನೂ ಸ್ವಾಸ್ತ್ಯವನ್ನೂ ಸ್ವಾಸ್ತ್ಯದವನನ್ನೂ ತುಳಿದುಬಿಡುತ್ತಾರೆ.


ತಮ್ಮ ಉಪ್ಪರಿಗೆಗಳಲ್ಲಿ ಬಾಧೆಕೊಳ್ಳೆಗಳಿಂದ ಸಂಪಾದಿಸಿದ್ದನ್ನು ಕೂಡಿಸಿಟ್ಟುಕೊಂಡಿರುವವರು ನ್ಯಾಯವಾಗಿ ನಡೆಯಲು ಅರಿಯರು; ಇದು ಯೆಹೋವನ ನುಡಿ.


ಇವನ ತಂದೆಯೋ ಸ್ವಕುಲದವರನ್ನು ಬಹಳವಾಗಿ ಅರೆದು ಸುಲಿದು ಸ್ವಜನರ ನಡುವೆ ಕೆಟ್ಟದನ್ನು ನಡಿಸಿದ ಕಾರಣ ಇಗೋ, ತನ್ನ ಅಧರ್ಮದಿಂದಲೇ ಸಾಯುವನು.


ದೀನದರಿದ್ರರನ್ನು ಹಿಂಸಿಸಿ ಜನರ ಸೊತ್ತನ್ನು ಅಪಹರಿಸಿ ಸಾಲಗಾರನ ಒತ್ತೆಯನ್ನು ಬಿಗಿಹಿಡಿದು ವಿಗ್ರಹಗಳ ಕಡೆಗೆ ಕಣ್ಣೆತ್ತಿ ಅಸಹ್ಯಕಾರ್ಯವನ್ನು ಮಾಡಿ


ಮುಟ್ಟಿನ ಹೆಂಗಸನ್ನು ಸೇರದೆ ಯಾರನ್ನೂ ಹಿಂಸಿಸದೆ ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ ಯಾರ ಸೊತ್ತನ್ನೂ ಅಪಹರಿಸದೆ ಹಸಿದವನಿಗೆ ಅನ್ನವಿಕ್ಕಿ ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ


ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು; ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ.


ಮೇರೆಗಳನ್ನು ಸರಿಸಿಕೊಳ್ಳುವವರುಂಟು, ದನಕುರಿಗಳನ್ನು ಅಪಹರಿಸಿ ಸಾಕಿಕೊಳ್ಳುವವರಿದ್ದಾರೆ,


ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.


ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲಾತ್ಕಾರದಿಂದ ಸ್ವಾಧೀನಪಡಿಸಿಕೊಂಡದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು ಅಬೀಮೆಲೆಕನು -


ಪಶುವನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು; ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು.


ಪಶುವನ್ನು ಕೊಂದವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು.


ಅದಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಯೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು.


ಅಂದರೆ ಆ ದುಷ್ಟನು ಒತ್ತೆಯನ್ನು ಬಿಗಿಹಿಡಿಯದೆ ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು ಜೀವಾಧಾರವಾದ ವಿಧಿಗಳನ್ನು ಅನುಸರಿಸಿ ಸಕಲ ದುಷ್ಕರ್ಮಗಳಿಗೂ ದೂರನಾಗಿರುವ ಪಕ್ಷದಲ್ಲಿ ಸಾಯನು, ಬಾಳೇಬಾಳುವನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, [ಈ ಸೇವೆಯು] ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ಛೀಗುಟ್ಟುತ್ತೀರಿ; ಕಳವಿನ ಪಶುವನ್ನೂ ಕುಂಟಾದದ್ದನ್ನೂ ರೋಗಿಯಾದದ್ದನ್ನೂ ತಂದೊಪ್ಪಿಸುತ್ತೀರಿ; ಇಂಥ ನೈವೇದ್ಯವನ್ನು ತಂದೊಪ್ಪಿಸುತ್ತಿರುವಲ್ಲಿ ನಾನು ಅದನ್ನು ನಿಮ್ಮ ಕೈಯಿಂದ ಸ್ವೀಕರಿಸಲೋ; ಇದು ಯೆಹೋವನ ನುಡಿ.


ಕರುಳುಗಳಲ್ಲಿರುವ ಕಲ್ಮಶ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ ಕಟ್ಟಿಗೆಯ ಮೇಲಿರಿಸಿ ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.


ಅವರ ಹೊಲ, ದ್ರಾಕ್ಷೇತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ಶೇಕಡಾ ಇಷ್ಟೆಂದು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಈಹೊತ್ತೇ ಹಿಂದಕ್ಕೆ ಕೊಡಿರಿ ಎಂದು ಹೇಳಿದೆನು.


ಅವರು ಹೊರಗಣ ಪ್ರಾಕಾರಕ್ಕೆ ಅಂದರೆ ಅಲ್ಲಿನ ಜನರ ಬಳಿಗೆ ಹೊರಡುವಾಗ ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗಲಿಸಿ ಅವರನ್ನು ಪರಿಶುದ್ಧರಾಗಮಾಡದಂತೆ ಅವುಗಳನ್ನು ತೆಗೆದು ಪರಿಶುದ್ಧವಾದ ಕೋಣೆಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಹಾಕಿಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು