Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:5 - ಕನ್ನಡ ಸತ್ಯವೇದವು J.V. (BSI)

5 ಬೇರೆ ಯಾವದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನೂ ಪೂರ್ತಿಯಾಗಿ ತಂದುಕೊಡಬೇಕಲ್ಲದೆ ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ಅದರ ನ್ಯಾಯವಾದ ಒಡೆಯನಿಗೆ ಹಿಂದಕ್ಕೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಬೇರೆ ಯಾವುದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನು ಪೂರ್ತಿಯಾಗಿ ತಂದುಕೊಡಬೇಕಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ನ್ಯಾಯವಾದ ಅದರ ಒಡೆಯನಿಗೆ ಹಿಂದಕ್ಕೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸುಳ್ಳಾಣೆ ಇಟ್ಟುಕೊಂಡ ವಸ್ತುವನ್ನಾಗಲಿ ಸಂಪೂರ್ಣವಾಗಿ ತಂದುಕೊಡಬೇಕು. ಅದರೊಂದಿಗೆ ಅದರ ಐದನೆಯ ಒಂದಂಶವನ್ನು ಹೆಚ್ಚಾಗಿ ತಂದುಕೊಡಬೇಕು. ದೋಷಪರಿಹಾರಕ ಯಜ್ಞವನ್ನು ಅರ್ಪಿಸುವ ದಿನದಲ್ಲಿಯೇ ನಿಜವಾದ ಯಜಮಾನನಿಗೆ ಇದನ್ನು ತಂದುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ, ಪಡೆದವುಗಳೆಲ್ಲವುಗಳನ್ನೂ ಕೂಡಿಸಿ, ಹಿಂದಕ್ಕೆ ಕೊಡಬೇಕು. ಪ್ರಾಯಶ್ಚಿತ್ತದ ಬಲಿ ಅರ್ಪಿಸುವ ದಿನದಲ್ಲಿ, ಅದರ ಯಜಮಾನನು ಯಾವನಾಗಿರುವನೋ, ಅವನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:5
16 ತಿಳಿವುಗಳ ಹೋಲಿಕೆ  

ಮತ್ತು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ವಸ್ತುಗಳನ್ನು ಅಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು.


ಆದರೆ ಜಕ್ಕಾಯನು ನಿಂತುಕೊಂಡು ಸ್ವಾವಿುಗೆ - ಸ್ವಾಮೀ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಎಳಕೊಂಡದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಎಂದು ಹೇಳಿದನು.


ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಬೇಕು ಅಂದನು.


ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ ಪೀಡಿಸಿದ್ದೂ ಲಂಚತೆಗೆದುಕೊಂಡು ಕುರುಡನಂತೆ ತೀರ್ಪುಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ ಅನ್ನಲು ಅವರು -


ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದು ವಿಷಯದಲ್ಲಿಯೂ, ಅದು ಎತ್ತು ಕತ್ತೆ ಕುರಿ ಬಟ್ಟೆಗಳ ವಿಷಯವಾದರೂ ಸರಿಯೇ ಕಳಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ ಸರಿಯೇ [ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು] ಇದು ತನ್ನದೆಂದು ಹೇಳುವ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುವನೋ ಅವನು ಆ ಮತ್ತೊಬ್ಬನಿಗೆ ಎರಡರಷ್ಟು ಕೊಡಬೇಕು.


ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ ಇಗೋ, ಇದ್ದೇನೆ, ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನೂ ಬೆರಳಸನ್ನೆಯನ್ನೂ ಕೆಡುಕಿನ ನುಡಿಯನ್ನೂ ಹೋಗಲಾಡಿಸಿ


ನೋಡಿರಿ, ಕೇಡಿನ ಬಂಧಗಳನ್ನು ಬಿಚ್ಚುವದು, ನೊಗದ ಕಣ್ಣಿಗಳನ್ನು ಕಳಚುವದು, ಜಜ್ಜಿಹೋದವರನ್ನು ಬಿಡುಗಡೆಮಾಡುವದು, ನೊಗಗಳನ್ನೆಲ್ಲಾ ಮುರಿಯುವದು,


ಒಬ್ಬನು ಹಣವನ್ನಾದರೂ ಒಡವೆಗಳನ್ನಾದರೂ ಕಾಪಾಡುವದಕ್ಕೆ ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ಮನುಷ್ಯನ ಮನೆಯಲ್ಲಿ ಕಳವಾಗಿ ಹೋದರೆ ಕಳ್ಳನು ಸಿಕ್ಕುವ ಪಕ್ಷಕ್ಕೆ ಎರಡರಷ್ಟು ಕೊಡಬೇಕು.


ಕದ್ದದ್ದು ಎತ್ತಾದರೂ ಕತ್ತೆಯಾದರೂ ಆಡುಕುರಿಯಾದರೂ ಸರಿಯೇ ಅದು ಜೀವದಿಂದಲೇ ಕಳ್ಳನ ಬಳಿಯಲ್ಲಿ ಸಿಕ್ಕಿದರೆ ಅವನು ಎರಡರಷ್ಟು ಈಡುಕೊಡಬೇಕು.


ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದುಕೊಂಡು ಕೊಯಿದರೆ ಇಲ್ಲವೆ ಮಾರಿದರೆ ಅವನು ಎತ್ತಿಗೆ ಪ್ರತಿಯಾಗಿ ಐದು ಎತ್ತುಗಳನ್ನು, ಕುರಿಗೆ ಪ್ರತಿಯಾಗಿ ನಾಲ್ಕು ಕುರಿಗಳನ್ನು ಕೊಡಬೇಕು.


ಅಂದರೆ ಆ ದುಷ್ಟನು ಒತ್ತೆಯನ್ನು ಬಿಗಿಹಿಡಿಯದೆ ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು ಜೀವಾಧಾರವಾದ ವಿಧಿಗಳನ್ನು ಅನುಸರಿಸಿ ಸಕಲ ದುಷ್ಕರ್ಮಗಳಿಗೂ ದೂರನಾಗಿರುವ ಪಕ್ಷದಲ್ಲಿ ಸಾಯನು, ಬಾಳೇಬಾಳುವನು.


ಆರೋನನು ಪ್ರತಿನಿತ್ಯವೂ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ


ನಮ್ಮ ಭೂವಿುಯ ಮತ್ತು ಎಲ್ಲಾ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತಿವರುಷವೂ ಯೆಹೋವನ ಆಲಯಕ್ಕೆ ತಂದುಕೊಡುವೆವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು