Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:14 - ಕನ್ನಡ ಸತ್ಯವೇದವು J.V. (BSI)

14 ಸಮರ್ಪಿಸಿದ ಪ್ರತಿಯೊಂದು ವಿಧವಾದ ಪದಾರ್ಥಗಳಲ್ಲಿಯೂ ಒಂದೊಂದನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅವು ವೇದಿಗೆ ಯಜ್ಞಪಶುವಿನ ರಕ್ತವನ್ನು ಎರಚಿದ ಯಾಜಕನಿಗೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಮರ್ಪಿಸಿದ ಪ್ರತಿಯೊಂದು ವಿಧವಾದ ಯಜ್ಞದ ಪದಾರ್ಥಗಳಲ್ಲಿಯೂ ಒಂದೊಂದನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಯಜ್ಞವೇದಿಗೆ ಯಜ್ಞಪಶುವಿನ ರಕ್ತವನ್ನು ಎರಚಿದ ಯಾಜಕನಿಗೆ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಮರ್ಪಿಸುವ ಪ್ರತಿಯೊಂದು ವಿಧವಾದ ಪದಾರ್ಥಗಳಲ್ಲಿಯೂ ಒಂದೊಂದನ್ನು ಸರ್ವೇಶ್ವರನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಪೀಠಕ್ಕೆ ಬಲಿಪ್ರಾಣಿಯ ರಕ್ತವನ್ನು ಚಿಮುಕಿಸಿದ ಯಾಜಕನಿಗೆ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸಮರ್ಪಿಸಲ್ಪಟ್ಟ ಪ್ರತಿಯೊಂದು ಪದಾರ್ಥಗಳಲ್ಲೂ ಒಂದೊಂದನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ಸಮಾಧಾನಯಜ್ಞದ ರಕ್ತವನ್ನು ಚಿಮಿಕಿಸುವ ಯಾಜಕನಿಗೆ ಇದು ಸಲ್ಲತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಕಾಣಿಕೆಯನ್ನಾಗಿ ಯೆಹೋವ ದೇವರಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದ್ದಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:14
10 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆ.


ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆ ಕಪ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿದನು.


ಯೆಹೋವನಿಗೋಸ್ಕರ ಕಪ್ಪವನ್ನು ತೆಗೆದುಕೊಂಡು ಆತನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕ ಎಲ್ಲಾಜಾರನಿಗೆ ಒಪ್ಪಿಸಬೇಕು.


ಅದು ಮಹಾಪರಿಶುದ್ಧವಾದದ್ದರಿಂದ ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.


ವಂಶಕ್ರಮದಿಂದ ಇಸ್ರಾಯೇಲ್ಯರಾಗಿರುವವರನ್ನು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಭಾಗಿಗಳಾಗಿದ್ದಾರಲ್ಲವೇ.


ಅವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ ವಿುಕ್ಕ ಲೇವಿಯರೊಂದಿಗೆ ಸಮವಾಗಿ ಭೋಗಿಸುವದಕ್ಕೆ ಬಾಧ್ಯನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು