Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:2 - ಕನ್ನಡ ಸತ್ಯವೇದವು J.V. (BSI)

2 ಸರ್ವಾಂಗಹೋಮಪಶುವನ್ನು ವಧಿಸುವ ಸ್ಥಳದಲ್ಲೇ ಪ್ರಾಯಶ್ಚಿತ್ತ ಯಜ್ಞಪಶುವನ್ನೂ ವಧಿಸಬೇಕು. ಯಾಜಕನು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸರ್ವಾಂಗಹೋಮಪಶುವನ್ನು ವಧಿಸುವ ಸ್ಥಳದಲ್ಲೇ ಪ್ರಾಯಶ್ಚಿತ್ತಯಜ್ಞದ ಪಶುವನ್ನು ವಧಿಸಬೇಕು. ಯಾಜಕನು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದಹನ ಬಲಿಪ್ರಾಣಿಯನ್ನು ವಧಿಸಿದ ಸ್ಥಳದಲ್ಲೇ ಈ ಪ್ರಾಯಶ್ಚಿತ್ತ ಬಲಿಪ್ರಾಣಿಯನ್ನು ವಧಿಸಬೇಕು. ಯಾಜಕನು ಅದರ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯಾಜಕನು ಸರ್ವಾಂಗಹೋಮ ಸಮರ್ಪಣೆಗಳ ಪಶುವನ್ನು ವಧಿಸುವ ಸ್ಥಳದಲ್ಲಿಯೇ ದೋಷಪರಿಹಾರಕ ಪಶುವನ್ನು ವಧಿಸಬೇಕು. ಬಳಿಕ ಯಾಜಕನು ದೋಷಪರಿಹಾರಕ ಯಜ್ಞದ ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಪ್ರಾಯಶ್ಚಿತ್ತದ ಬಲಿಯನ್ನು ವಧಿಸಬೇಕು. ಅದರ ರಕ್ತವನ್ನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:2
22 ತಿಳಿವುಗಳ ಹೋಲಿಕೆ  

ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಲಿಗೆ ಎದುರಾಗಿರುವ ಯಜ್ಞವೇದಿಗೆ ಸುತ್ತಲೂ ಎರಚಬೇಕು.


ನೀನು ಆರೋನನಿಗೂ ಅವನ ವಂಶದವರಿಗೂ ಹೀಗೆ ಆಜ್ಞಾಪಿಸು - ದೋಷಪರಿಹಾರಕ ಯಜ್ಞನಿಯಮಗಳು. ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನೂ ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು.


ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರಕಡೆ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಚೊಚ್ಚಲಮಕ್ಕಳನ್ನು ಸಂಹರಿಸುವವನು ಇಸ್ರಾಯೇಲ್ಯರನ್ನು ಮುಟ್ಟದಂತೆ ಅವನು ಪಸ್ಕವೆಂಬ ಊಟವನ್ನೂ ರಕ್ತಪ್ರೋಕ್ಷಣಾಚಾರವನ್ನೂ ನೇವಿುಸಿದ್ದು ನಂಬಿಕೆಯಿಂದಲೇ.


ಹೆಬ್ಬಾಗಿಲ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮಪಶು, ದೋಷಪರಿಹಾರಕಯಜ್ಞಪಶು, ಪ್ರಾಯಶ್ಚಿತ್ತಯಜ್ಞಪಶು ಇವುಗಳನ್ನು ವಧಿಸುತ್ತಿದ್ದರು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಮಕಿತರಾಗುವರು; ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು; ಏಕಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದ ವಿಷಯವನ್ನು ಗ್ರಹಿಸಿಕೊಳ್ಳುವರು.


ಅವನು ಎಷ್ಟು ದಿನಗಳವರೆಗೆ ತನನ್ನು ಪ್ರತಿಷ್ಠಿಸಿಕೊಂಡಿದ್ದನೋ ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು; ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರುಷದ ಕುರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದದರಿಂದ ಕಳೆದುಹೋದ ದಿನಗಳು ವ್ಯರ್ಥವಾದವು.


ಆಗ ದೋಷಪರಿಹಾರಾರ್ಥವಾದ ಆ ಪಕ್ಷಿಯ ರಕ್ತದಲ್ಲಿ ಸ್ವಲ್ಪವನ್ನು ಯಜ್ಞವೇದಿಯ ಪಕ್ಕಕ್ಕೆ ಚಿವಿುಕಿಸಿ ವಿುಕ್ಕ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹಿಂಡಬೇಕು. ಅದು ದೋಷಪರಿಹಾರಕಯಜ್ಞ.


ಅವನು ಅದರ ತಲೆಯ ಮೇಲೆ ಕೈಯಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಧಳದಲ್ಲೇ ಅದನ್ನು ದೋಷಪರಿಹಾರಾರ್ಥವಾಗಿ ವಧಿಸಬೇಕು.


ಅವನು ಅದರ ತಲೆಯ ಮೇಲೆ ಕೈಯಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು.


ಅವನು ಆ ಹೋತದ ತಲೆಯ ಮೇಲೆ ಕೈಯಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕಯಜ್ಞ.


ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು.


ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಬಾಗಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು;


ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನಗೆ ಯೆಹೋವನು ಒಲಿಯುವಂತೆ ದೇವದರ್ಶನದ ಗುಡಾರದ ಬಾಗಲಿಗೆ ಅದನ್ನು ತರಬೇಕು.


ಕುರಿಯನ್ನು ಕೊಡುವದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು ಸರ್ವಾಂಗಹೋಮವಾಗಿ ಒಂದನ್ನೂ ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನೂ ಯೆಹೋವನಿಗೆ ಸಮರ್ಪಿಸಬೇಕು.


ಮತ್ತು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ವಸ್ತುಗಳನ್ನು ಅಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು.


ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವದು.


ದೋಷಪರಿಹಾರಕಯಜ್ಞಪಶುವನ್ನೂ ಸರ್ವಾಂಗಹೋಮಪಶುವನ್ನೂ ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಯಾಕಂದರೆ ದೋಷಪರಿಹಾರಕಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು; ಅದು ಮಹಾಪರಿಶುದ್ಧವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು