Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:23 - ಕನ್ನಡ ಸತ್ಯವೇದವು J.V. (BSI)

23 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ನೀವು ಎತ್ತು ಕುರಿ ಆಡುಗಳ ಕೊಬ್ಬನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನೀವು ಎತ್ತು, ಕುರಿ ಮತ್ತು ಆಡುಗಳ ಕೊಬ್ಬನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಇಸ್ರಯೇಲರಿಗೆ ಹೀಗೆ ಆಜ್ಞೆ ಮಾಡು:- ನೀವು ಎತ್ತು, ಕುರಿ ಹಾಗು ಆಡುಗಳ ಕೊಬ್ಬನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಇಸ್ರೇಲರಿಗೆ ಹೀಗೆ ಹೇಳು: ನೀವು ದನಗಳ, ಕುರಿಗಳ ಅಥವಾ ಹೋತಗಳ ಕೊಬ್ಬನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ನೀವು ಎತ್ತು ಇಲ್ಲವೆ ಕುರಿ ಇಲ್ಲವೆ ಮೇಕೆಗಳ ಕೊಬ್ಬನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:23
11 ತಿಳಿವುಗಳ ಹೋಲಿಕೆ  

ದುಂದೌತಣ ಕುಡಿಕತನಗಳಲ್ಲಿಯಾಗಲಿ ಕಾಮ ವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚುಗಳಲ್ಲಿಯಾಗಲಿ ಕಾಲಕಳೆಯದೆ ಹಗಲು ಹೊತ್ತಿಗೆ ತಕ್ಕಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವದಾದರೆ ಜೀವಿಸುವಿರಿ.


ಯಾಕಂದರೆ ಈ ಜನರ ಹೃದಯವು ಕೊಬ್ಬಿತು; ಇವರ ಕಿವಿ ಮಂದವಾಯಿತು; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ; ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಮಾಡಿಕೊಂಡಿದ್ದಾರೆ ಎಂಬದೇ.


ನನ್ನ ಪ್ರಜೆಗಳಾದ ಇಸ್ರಾಯೇಲ್ಯರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದೇಕೆ? ನೀನು ನನ್ನನ್ನು ಗೌರವಿಸುವದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವದು ಸರಿಯೋ?


ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಅವರು ಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ? ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ.


ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಲಿನ ಮುಂದಿರುವ ಯಜ್ಞವೇದಿಗೆ ಎರಚಿ ಅವುಗಳ ಕೊಬ್ಬನ್ನು ಹೋಮಮಾಡಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡಬೇಕು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ಅದೇ ಮೇರೆಗೆ ನಿಮ್ಮ ಕುರಿದನಗಳ ಚೊಚ್ಚಲುಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿವಸ ಆ ಮರಿ ತಾಯಿಯ ಹತ್ತಿರ ಇರಲಿ; ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು