Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:36 - ಕನ್ನಡ ಸತ್ಯವೇದವು J.V. (BSI)

36 ಇಸ್ರಾಯೇಲ್ಯರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಯೆಹೋವನು [ಮೋಶೆಯ ಕೈಯಿಂದ] ಅವರನ್ನು ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲಿ ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಇಸ್ರಾಯೇಲರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಯೆಹೋವನು ಮೋಶೆಯ ಮುಖಾಂತರ ಕೈಯಿಂದ ಅವರನ್ನು ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲೇ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಇಸ್ರಯೇಲರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಸರ್ವೇಶ್ವರ ಅವರನ್ನು ಮೋಶೆಯ ಮುಖಾಂತರ ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲೇ ವಿಧಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಯೆಹೋವನು ಯಾಜಕರನ್ನು ಅಭಿಷೇಕಿಸಿದ ಸಮಯದಲ್ಲಿ ಆತನು ಯಾಜಕರಿಗೆ ಆ ಭಾಗಗಳನ್ನು ಕೊಡಬೇಕೆಂಬುದಾಗಿ ಇಸ್ರೇಲರಿಗೆ ಆಜ್ಞಾಪಿಸಿದನು. ಜನರು ಯಾಜಕರಿಗೆ ಆ ಭಾಗಗಳನ್ನು ಎಂದೆಂದಿಗೂ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:36
6 ತಿಳಿವುಗಳ ಹೋಲಿಕೆ  

ಅದರಲ್ಲಿ ಸ್ವಲ್ಪವನ್ನು ಆರೋನನ ತಲೆಯ ಮೇಲೆ ಹೊಯಿದು ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.


ಆಗ ಮೋಶೆ ಅಭಿಷೇಕತೈಲದಲ್ಲಿಯೂ ಯಜ್ಞವೇದಿಯ ಮೇಲಿದ್ದ ರಕ್ತದಲ್ಲಿಯೂ ಸ್ವಲ್ಪ ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿವಿುಕಿಸಿದನು. ಹೀಗೆ ಆರೋನನನ್ನೂ ಅವನ ವಸ್ತ್ರಗಳನ್ನೂ ಅವನ ಮಕ್ಕಳನ್ನೂ ಅವರ ವಸ್ತ್ರಗಳನ್ನೂ ಪ್ರತಿಷ್ಠಿಸಿದನು.


ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನಕೂಡದೆಂಬದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತ ನಿಯಮ.


ಇಸ್ರಾಯೇಲ್ಯರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವದಕ್ಕೂ ಧೂಪಹಾಕುವದಕ್ಕೂ ನನ್ನ ಸನ್ನಿಧಿಯಲ್ಲಿ ಏಫೋದನ್ನು ಧರಿಸಿಕೊಳ್ಳುವದಕ್ಕೂ ಆರಿಸಿಕೊಂಡು ಅವರಿಗೆ ಇಸ್ರಾಯೇಲ್ಯರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು.


ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆರೋನನೂ ಅವನ ಮಕ್ಕಳೂ ಸಾಯಂಕಾಲದಿಂದ ಉದಯದವರೆಗೂ ಯೆಹೋವನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರೂ ಅವರ ಸಂತತಿಯವರೂ ಈ ನಿಯಮವನ್ನು ಶಾಶ್ವತವಾಗಿ ಅನುಸರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು