ಯಾಜಕಕಾಂಡ 7:38 - ಕನ್ನಡ ಸತ್ಯವೇದವು J.V. (BSI)38 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಆಜ್ಞೆಗಳನ್ನು ಕೊಟ್ಟನು. ಮೋಶೆ ಸೀನಾಯಿ ಅರಣ್ಯದಲ್ಲಿ - ಇಸ್ರಾಯೇಲ್ಯರು ಅರ್ಪಿಸಬೇಕಾದದ್ದನ್ನು ಯೆಹೋವನಿಗೆ ಸಮರ್ಪಿಸಬೇಕೆಂದು ಆಜ್ಞಾಪಿಸಿ ಅವರಿಗೆ ಮೇಲೆ ಕಂಡ ವಿಧಿಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಎಲ್ಲಾ ಆಜ್ಞೆಗಳನ್ನು ಕೊಟ್ಟನು. ಮೋಶೆ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರು ಅರ್ಪಿಸಬೇಕಾದ ಯಜ್ಞವನ್ನು ಯೆಹೋವನಿಗೆ ಸಮರ್ಪಿಸಬೇಕೆಂದು ಆಜ್ಞಾಪಿಸಿ ಅವರಿಗೆ ಮೇಲೆ ಕಂಡ ನಿಯಮಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಆಜ್ಞೆಗಳನ್ನು ಕೊಟ್ಟರು. ಸೀನಾಯಿ ಮರುಭೂಮಿಯಲ್ಲಿ ಇಸ್ರಯೇಲರು ಅರ್ಪಿಸಬೇಕಾದುದನ್ನು ಸರ್ವೇಶ್ವರನಿಗೆ ಅರ್ಪಿಸಬೇಕೆಂದು ಮೋಶೆ ಆಜ್ಞಾಪಿಸಿ ಮೇಲ್ಕಂಡ ವಿಧಿಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಯೆಹೋವನು ಮೋಶೆಗೆ ಆ ನಿಯಮಗಳನ್ನು ಸೀನಾಯಿ ಬೆಟ್ಟದಲ್ಲಿ ಕೊಟ್ಟನು. ಇಸ್ರೇಲರು ಯೆಹೋವನಿಗೆ ತಮ್ಮ ಯಜ್ಞಗಳನ್ನು ಅರ್ಪಿಸಬೇಕೆಂದು ಸೀನಾಯಿ ಮರುಭೂಮಿಯಲ್ಲಿ ಆಜ್ಞಾಪಿಸಿದ ದಿನದಲ್ಲಿ ಯೆಹೋವನು ಆ ನಿಯಮಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಇವುಗಳನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರು ತಮ್ಮ ಕಾಣಿಕೆಗಳನ್ನು ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಸೀನಾಯಿ ಮರುಭೂಮಿಯ ಸೀನಾಯಿ ಬೆಟ್ಟದಲ್ಲಿ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿ |