Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:5 - ಕನ್ನಡ ಸತ್ಯವೇದವು J.V. (BSI)

5 ಯಜ್ಞವೇದಿಯ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅದು ಪ್ರಾಯಶ್ಚಿತ್ತ ಯಜ್ಞವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅದು ಪ್ರಾಯಶ್ಚಿತ್ತ ಯಜ್ಞವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಲಿಪೀಠದ ಮೇಲೆ ಸರ್ವೇಶ್ವರನಿಗೆ ಹೋಮಮಾಡಬೇಕು. ಇದು ಪ್ರಾಯಶ್ಚಿತ್ತ ಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾಜಕನು ಅವುಗಳನ್ನು ವೇದಿಕೆಯ ಮೇಲೆ ಹೋಮ ಮಾಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿತವಾದ ಹೋಮವಾಗಿರುವುದು. ಅದು ದೋಷಪರಿಹಾರಕ ಯಜ್ಞವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಯಾಜಕನು ಅವುಗಳನ್ನು ಬೆಂಕಿಯಿಂದ ಯೆಹೋವ ದೇವರಿಗೆ ಸಮರ್ಪಿಸುವ ಬಲಿಪೀಠದ ಮೇಲೆ ಸುಡಬೇಕು. ಇದು ಪ್ರಾಯಶ್ಚಿತ್ತದ ಬಲಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:5
13 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ ಸ್ವೇಚ್ಫಾಭಿಲಾಷೆ ಸಹಿತ ಶಿಲುಬೆಗೆ ಹಾಕಿದವರು.


ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.


ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅದು ಸುಗಂಧ ಹೋಮರೂಪವಾಗಿ ಯೆಹೋವನಿಗೆ ಆಹಾರವಾಗಿರುವದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.


ಯಾಜಕನು ನೈವೇದ್ಯವನ್ನು ಸೂಚಿಸುವದಕ್ಕಾಗಿ ಆ ಉವ್ಮಿುಗೆಯಲ್ಲಿಯೂ ಎಣ್ಣೆಯಲ್ಲಿಯೂ ಸ್ವಲ್ಪಭಾಗವನ್ನು ತೆಗೆದುಕೊಂಡು ಧೂಪವೆಲ್ಲವನ್ನು ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಯೆಹೋವನಿಗೆ ಹೋಮಮಾಡಬೇಕು.


ಯಾಜಕನು ನೈವೇದ್ಯವನ್ನು ಸೂಚಿಸುವದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ಪ್ರತ್ಯೇಕಿಸಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದು.


ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಸೂಚಿಸುವದಕ್ಕಾಗಿ ಆ ಎಣ್ಣೆ ಬೆರಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನೂ ಧೂಪವೆಲ್ಲವನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದು.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆಸಿದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟು ಮಾಡುವ ಸರ್ವಾಂಗಹೋಮವಾಗಿದೆ.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮವಾಗಿದೆ.


ಕುರಿಯನ್ನು ಕೊಡುವದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು ಸರ್ವಾಂಗಹೋಮವಾಗಿ ಒಂದನ್ನೂ ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನೂ ಯೆಹೋವನಿಗೆ ಸಮರ್ಪಿಸಬೇಕು.


ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಕಾಳಿಜದ ಮೇಲೆ ಹುರುಳಿಕಾಯಿಗಳ ತನಕ ಇರುವ ಕೊಬ್ಬನ್ನೂ ತೆಗೆದು


ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.


ಆ ಯಜ್ಞಪಶುವಿನ ವಪೆಯನ್ನೂ ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು