ಯಾಜಕಕಾಂಡ 8:15 - ಕನ್ನಡ ಸತ್ಯವೇದವು J.V. (BSI)15 ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ ಯಜ್ಞವೇದಿಯನ್ನು ಶುದ್ಧಪಡಿಸಿ ವಿುಕ್ಕ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಹೀಗೆ ಯಜ್ಞವೇದಿಯ ನಿವಿುತ್ತ ದೋಷಪರಿಹಾರಕಾಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಿ ಬಲಿಪೀಠವನ್ನು ಪ್ರತಿಷ್ಠಿಸಿದನು. ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಟ್ಟನು. ಹೀಗೆ ಬಲಿಪೀಠದ ಬಗ್ಗೆ ದೋಷಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪವಿತ್ರೀಕರಿಸಿ ಪ್ರತಿಷ್ಠಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಬಳಿಕ ಮೋಶೆಯು ಹೋರಿಯನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ವೇದಿಕೆಯ ಎಲ್ಲಾ ಮೂಲೆಗಳಿಗೆ ರಕ್ತವನ್ನು ಹಚ್ಚಿದನು. ಹೀಗೆ ಮೋಶೆಯು ವೇದಿಕೆಯನ್ನು ಯಜ್ಞಗಳಿಗಾಗಿ ಶುದ್ಧಗೊಳಿಸಿ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದನು; ಜನರನ್ನು ಶುದ್ಧಿಮಾಡುವ ಯಜ್ಞಗಳನ್ನು ಸಮರ್ಪಿಸುವುದಕ್ಕಾಗಿ ವೇದಿಕೆಯನ್ನು ಪ್ರತಿಷ್ಠೆಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಅವನು ಅದನ್ನು ವಧಿಸಿದನು. ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಸುತ್ತಲೂ ಇರುವ ಕೊಂಬುಗಳ ಮೇಲೆ ತನ್ನ ಬೆರಳಿನಿಂದ ಹಚ್ಚಿ, ಬಲಿಪೀಠವನ್ನು ಶುದ್ಧೀಕರಿಸಿ, ಉಳಿದ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಅದನ್ನು ಪವಿತ್ರ ಮಾಡಿದನು. ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.