Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:21 - ಕನ್ನಡ ಸತ್ಯವೇದವು J.V. (BSI)

21 ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳಿಸಿ ಮೋಶೆ ಆ ಟಗರನ್ನು ಯಜ್ಞವೇದಿಯ ಮೇಲೆ ಪೂರ್ತಿಯಾಗಿ ಹೋಮಮಾಡಿಬಿಟ್ಟನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದು ಅಗ್ನಿಯ ಮೂಲಕ ಯೆಹೋವನಿಗೆ ಸುಗಂಧಕರವಾದ ಸರ್ವಾಂಗಹೋಮವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಿಂದ ತೊಳೆದು, ಮೋಶೆ ಆ ಟಗರನ್ನು ಯಜ್ಞವೇದಿಯ ಮೇಲೆ ಪೂರ್ತಿಯಾಗಿ ಹೋಮ ಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಸರ್ವಾಂಗಹೋಮವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಿಂದ ತೊಳೆಯಿಸಿ ಆ ಟಗರನ್ನು ಬಲಿಪೀಠದ ಮೇಲೆ ಪೂರ್ತಿಯಾಗಿ ಹೋಮಮಾಡಿಬಿಟ್ಟನು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನು ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣವಾಗಿ ಬಲಿಪೀಠದ ಮೇಲೆ ಸುಟ್ಟನು. ಇದು ದಹನಬಲಿಯಾಗಿ ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸುವಾಸನೆಯ ಸಮರ್ಪಣೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:21
11 ತಿಳಿವುಗಳ ಹೋಲಿಕೆ  

ಕ್ರಿಸ್ತನು ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.


ಯಾಜಕನು ನೈವೇದ್ಯವನ್ನು ಸೂಚಿಸುವದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ಪ್ರತ್ಯೇಕಿಸಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದು.


ಅವನು ಆ ಪಕ್ಷಿಯನ್ನು ರೆಕ್ಕೆಗಳ ಸಂದುಗಳಲ್ಲಿ ಹರಿಯಬೇಕು, ಆದರೆ ರೆಕ್ಕೆಗಳನ್ನು ಪೂರಾ ಕಿತ್ತು ಹಾಕಕೂಡದು. ಅನಂತರ ಅವನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮವಾಗಿದೆ.


ಅದರ ಸುವಾಸನೆಯು ಯೆಹೋವನಿಗೆ ಗಮಗವಿುಸಲು ಆತನು ಹೃದಯದೊಳಗೆ - ಮನುಷ್ಯರ ಮನಸ್ಸಂಕಲ್ಪವು ಚಿಕ್ಕಂದಿನಿಂದಲೇ ಕೆಟ್ಟದ್ದು; ಆದರೂ ನಾನು ಇನ್ನು ಮೇಲೆ ಅವರ ನಿವಿುತ್ತವಾಗಿ ಭೂವಿುಯನ್ನು ಶಪಿಸುವದಿಲ್ಲ; ನಾನು ಎಲ್ಲಾ ಜೀವಿಗಳನ್ನೂ ಈಗ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವದಿಲ್ಲ.


ಅದನ್ನು ಹಸಿಯಾಗಿಯೂ ನೀರಿನಲ್ಲಿ ಬೇಯಿಸಿಯೂ ತಿನ್ನಕೂಡದು; ಅದನ್ನೆಲ್ಲಾ ತಲೆ ತೊಡೆ ಹೊಟ್ಟೆಯೊಳಗಣವುಗಳು ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ತಿನ್ನಬೇಕು.


ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮವಾಗಿದೆ.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆಸಿದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟು ಮಾಡುವ ಸರ್ವಾಂಗಹೋಮವಾಗಿದೆ.


ಅವನ ತಲೆಗೆ ಮುಂಡಾಸವನ್ನು ಇಟ್ಟು ಅದರ ಮುಂಭಾಗದಲ್ಲಿ ಬಂಗಾರದ ಪಟ್ಟವನ್ನು ಕಟ್ಟಿದನು; ಅದೇ ಅವನಿಗೆ ಪರಿಶುದ್ಧ ಕಿರೀಟವು.


ಆಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು ಅವರಿಗೆ ನಿಲುವಂಗಿಗಳನ್ನು ತೊಡಿಸಿ ನಡುಕಟ್ಟುಗಳನ್ನು ಸುತ್ತಿ ಮುಂಡಾಸಗಳನ್ನು ಇಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು