Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:23 - ಕನ್ನಡ ಸತ್ಯವೇದವು J.V. (BSI)

23 ಅದನ್ನು ವಧಿಸಿದ ನಂತರ ಮೋಶೆ ಅದರ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಆರೋನನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದನ್ನು ವಧಿಸಿದ ನಂತರ ಮೋಶೆ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದನ್ನು ವಧಿಸಿದ ನಂತರ ಮೋಶೆ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಅವನ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಮೋಶೆ ಟಗರನ್ನು ವಧಿಸಿ ಅದರ ಸ್ವಲ್ಪ ರಕ್ತವನ್ನು ಆರೋನನ ಬಲಗಿವಿಯ ತುದಿಗೂ ಅವನ ಬಲಗೈಯ ಹೆಬ್ಬೆರಳಿಗೂ ಅವನ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಮೋಶೆಯು ಅದನ್ನು ವಧಿಸಿ, ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಆರೋನನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:23
18 ತಿಳಿವುಗಳ ಹೋಲಿಕೆ  

ಅದನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ಆರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಸೋಂಕಿಸಿ ವಿುಕ್ಕ ರಕ್ತವನ್ನು ಯಜ್ಞವೇದಿಯ ನಾಲ್ಕು ಕಡೆಗಳಿಗೆ ಚೆಲ್ಲಬೇಕು.


ಅವನು ತನ್ನ ಕೈಯಲ್ಲಿರುವ ವಿುಕ್ಕ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತ ಯಜ್ಞಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಿ


ಆಗ ಯಾಜಕನು ಆ ಪ್ರಾಯಶ್ಚಿತ್ತಯಜ್ಞಪಶುವಿನ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷ, ನಿಮ್ಮೆಲ್ಲರ ಕೂಡ ಸಂತೋಷ.


ಹೇಗಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯದೆ; ಹಾಗೆಯೇ ಆಗುವದೆಂದು ಭರವಸವುಂಟು.


ನೀವು ನಿಮ್ಮ ಸ್ವಂತ ಸೊತ್ತಲ್ಲ; ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು; ಆದಕಾರಣ ನಿಮ್ಮ ದೇಹದಲ್ಲಿ ದೇವರ ಪ್ರಭಾವವನ್ನು ಪ್ರಕಾಶಪಡಿಸಿರಿ.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಸೊಸ್ಥೆನನೂ ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತೇಸುವಿನಲ್ಲಿ ಪ್ರತಿಷ್ಠಿತರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ನಮಗೂ ಸಮಸ್ತ ದೇವಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರು ಎಲ್ಲಿದ್ದರೂ


ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು.


ನಿಮ್ಮ ನರಭಾವದ ಬಲಹೀನತೆಯ ದೆಸೆಯಿಂದ ಲೋಕರೀತಿಯಾಗಿ ಮಾತಾಡುತ್ತೇನೆ. ಅಧರ್ಮಮಾಡುವದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ ಅಧರ್ಮಕ್ಕೂ ದಾಸರನ್ನಾಗಿ ಒಪ್ಪಿಸಿಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.


ಇದು ಮಾತ್ರವಲ್ಲದೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು ದುಷ್ಟತ್ವವನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು ನಿಮ್ಮ ಅಂಗಗಳನ್ನು ನೀತಿ ಕೃತ್ಯಗಳನ್ನು ನಡಿಸುವ ಸಾಧನಗಳನ್ನಾಗಿ ಆತನಿಗೆ ಸಮರ್ಪಿಸಿರಿ.


ಮತ್ತು ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.


ಹೀಗೆ ಆತನು ಮಗನಾಗಿದ್ದರೂ ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು.


ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ ಆತನು ಬಹು ಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾಕರ್ತನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.


ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.


ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ ಅಭಿಷೇಕತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿವಿುಕಿಸಬೇಕು. ಹೀಗೆ ಅವನೂ ಅವನ ಮಕ್ಕಳೂ ಅವರ ವಸ್ತ್ರಗಳು ಸಹಿತವಾಗಿ ಪರಿಶುದ್ಧರಾಗುವರು.


ಸರ್ವಾಂಗಹೋಮ, ಧಾನ್ಯನೈವೇದ್ಯ, ದೋಷಪರಿಹಾರಕಯಜ್ಞ, ಪ್ರಾಯಶ್ಚಿತ್ತಯಜ್ಞ, ಯಾಜಕ ಪ್ರತಿಷ್ಠೆ, ಸಮಾಧಾನ ಯಜ್ಞ ಎಂಬಿವುಗಳ ವಿಷಯದಲ್ಲಿ ಮೇಲೆ ಕಂಡದ್ದೆ ವಿಧಿ.


ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ವಧಿಸಿದ ನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು