Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:25 - ಕನ್ನಡ ಸತ್ಯವೇದವು J.V. (BSI)

25 ಅವನು ಆ ಟಗರಿನ ಕೊಬ್ಬನ್ನೂ ಅಂದರೆ ಬಾಲದ ಕೊಬ್ಬು, ಕರುಳುಗಳ ಮೇಲಣ ಎಲ್ಲಾ ಕೊಬ್ಬು, ಕಾಳಿಜದ ಹತ್ತಿರವಿರುವ ಕೊಬ್ಬು, ಎರಡು ಹುರುಳಿಕಾಯಿಗಳು, ಅವುಗಳ ಮೇಲಿದ್ದ ಕೊಬ್ಬು ಇವುಗಳನ್ನೂ ಬಲದೊಡೆಯನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವನು ಆ ಟಗರಿನ ಕೊಬ್ಬನ್ನು ಅಂದರೆ ಬಾಲದ ಕೊಬ್ಬು, ಕರುಳುಗಳ ಮೇಲಣ ಎಲ್ಲಾ ಕೊಬ್ಬು, ಕಳಿಜದ ಹತ್ತಿರವಿರುವ ಕೊಬ್ಬು, ಎರಡು ಮೂತ್ರಪಿಂಡಗಳು, ಅವುಗಳ ಮೇಲಿದ್ದ ಕೊಬ್ಬನ್ನು ಮತ್ತು ಬಲತೊಡೆಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹಾಗೆಯೆ ಮೋಶೆ ಆ ಟಗರಿನ ಕೊಬ್ಬನ್ನು, ಅಂದರೆ ಬಾಲದ ಕೊಬ್ಬು, ಕರುಳುಗಳ ಸುತ್ತಲಿನ ಕೊಬ್ಬು, ಕಾಳಿಜದ ಹತ್ತಿರವಿರುವ ಕೊಬ್ಬು, ಮೂತ್ರಪಿಂಡಗಳು ಅವುಗಳ ಮೇಲಿರುವ ಕೊಬ್ಬು, ಇವುಗಳನ್ನು ಮತ್ತು ಬಲದೊಡೆಯನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಕೊಬ್ಬನ್ನು ಅಂದರೆ ಬಾಲದ ಮೇಲಿರುವ ಕೊಬ್ಬನ್ನೂ ಒಳಗಿನ ಭಾಗಗಳ ಮೇಲಿರುವ ಕೊಬ್ಬೆಲ್ಲವನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ಮತ್ತು ಬಲ ತೊಡೆಯನ್ನೂ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವನು ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲದೊಡೆಯನ್ನೂ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:25
9 ತಿಳಿವುಗಳ ಹೋಲಿಕೆ  

ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;


ಕಂದಾ, ನನ್ನ ಕಡೆಗೆ ಮನಸ್ಸುಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.


ಆ ಸಮಾಧಾನಯಜ್ಞಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನೂ ವಪೆಯನ್ನೂ


ಅದನ್ನು ಹಸಿಯಾಗಿಯೂ ನೀರಿನಲ್ಲಿ ಬೇಯಿಸಿಯೂ ತಿನ್ನಕೂಡದು; ಅದನ್ನೆಲ್ಲಾ ತಲೆ ತೊಡೆ ಹೊಟ್ಟೆಯೊಳಗಣವುಗಳು ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ತಿನ್ನಬೇಕು.


ಅದರ ವಪೆಯನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು.


ಆಗ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು ಆ ರಕ್ತದಲ್ಲಿ ಸ್ವಲ್ಪವನ್ನು ಅವರವರ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ ಉಳಿದ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಿದನು.


ಯೆಹೋವನ ಸನ್ನಿಧಿಯಲ್ಲಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಭಕ್ಷ್ಯಗಳಲ್ಲಿ ಒಂದು ರೊಟ್ಟಿಯನ್ನೂ ಎಣ್ಣೆ ವಿುಶ್ರವಾದ ಒಂದು ಹೋಳಿಗೆಯನ್ನೂ ಒಂದು ಕಡುಬನ್ನೂ ತೆಗೆದುಕೊಂಡು ಈ ಭಕ್ಷ್ಯಗಳನ್ನು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು