Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:27 - ಕನ್ನಡ ಸತ್ಯವೇದವು J.V. (BSI)

27 ಎಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವದಕ್ಕೆ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ಅವೆಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವುದಕ್ಕೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ನಿವಾಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇವೆಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವುದಕ್ಕಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಳಿಕ ಮೋಶೆ ಅವೆಲ್ಲವುಗಳನ್ನು ಆರೋನನ ಮತ್ತು ಅವನ ಪುತ್ರರ ಕೈಗಳಲ್ಲಿ ಇಟ್ಟು, ತುಂಡುಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅದೆಲ್ಲವನ್ನೂ ಆರೋನನ ಕೈಗಳಿಗೆ ಮತ್ತು ಅವನ ಪುತ್ರರ ಕೈಗಳಿಗೆ ಕೊಟ್ಟು, ಯೆಹೋವ ದೇವರ ಮುಂದೆ ಸಮರ್ಪಣೆಗಾಗಿ ಅವುಗಳನ್ನು ನೈವೇದ್ಯ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:27
6 ತಿಳಿವುಗಳ ಹೋಲಿಕೆ  

ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು; ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು; ನನ್ನನ್ನು ಸಮೀಪಿಸುವದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.


ಆಮೇಲೆ ಮೋಶೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯಲ್ಲಿ ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಹೋಮಮಾಡಿದನು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುಗಂಧಕರವಾದ ಪಟ್ಟಾಭಿಷೇಕಯಜ್ಞವಾಗಿತ್ತು.


ಆ ಟಗರುಗಳಲ್ಲಿ ಒಂದನ್ನೂ ಆ ಸೇರು ಎಣ್ಣೆಯನ್ನೂ ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು; ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು