Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:3 - ಕನ್ನಡ ಸತ್ಯವೇದವು J.V. (BSI)

3 ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಲಿನ ಹತ್ತಿರಕ್ಕೆ ಕರಿಸು ಎಂದು ಆಜ್ಞಾಪಿಸಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕರೆದುಕೊಂಡು ಬಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಜನಸಮೂಹವನ್ನೆಲ್ಲ ದೇವದರ್ಶನದ ಗುಡಾರದ ಬಾಗಿಲ ಬಳಿಗೆ ಕರೆಯಿಸು,” ಎಂದು ಆಜ್ಞೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮತ್ತು ಜನರನ್ನು ಒಟ್ಟಾಗಿ ದೇವದರ್ಶನಗುಡಾರದ ಬಾಗಿಲಿಗೆ ಎದುರಿನಲ್ಲಿ ಸೇರಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಎಲ್ಲಾ ಸಭೆಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:3
16 ತಿಳಿವುಗಳ ಹೋಲಿಕೆ  

ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರು ಏಕಮನಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿದ್ದರು.


ಹೀಗೆ ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನಾಚರಿಸುವದಕ್ಕಾಗಿ ಯೆರೂಸಲೇವಿುನಲ್ಲಿ ಕೂಡಿದರು; ಆ ಕೂಟವು ಮಹಾಸಮೂಹವಾಗಿತ್ತು.


ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.


ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಲಿನ ಮುಂದಿನ ಬೈಲಿನಲ್ಲಿ ಒಟ್ಟಾಗಿ ಕೂಡಿಬಂದು - ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲ್ಯರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕು ಎಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು.


ಯೆಹೂದ್ಯರ ಸರ್ವಸಮೂಹದವರೂ ಯಾಜಕರೂ ಲೇವಿಯರೂ ಇಸ್ರಾಯೇಲ್‍ಪ್ರಾಂತಗಳಿಂದ ನೆರೆದುಬಂದವರೆಲ್ಲರೂ ಇಸ್ರಾಯೇಲ್ ಯೆಹೂದ ಪ್ರಾಂತಗಳಲ್ಲಿದ್ದ ಪ್ರವಾಸಿಗಳೂ ಈ ಉತ್ಸವದಲ್ಲಿ ಪಾಲುಗಾರರಾಗಿದ್ದರು.


ಯಾಜಕರಲ್ಲಿ ತಕ್ಕಷ್ಟು ಮಂದಿ ತಮ್ಮನ್ನು ಶುದ್ಧಪಡಿಸಿಕೊಂಡಿರಲಿಲ್ಲವಾದದರಿಂದಲೂ ಜನರು ಯೆರೂಸಲೇವಿುನಲ್ಲಿ ಇನ್ನೂ ಕೂಡಿರಲಿಲ್ಲವಾದದರಿಂದಲೂ ಕೂಡಲೆ ಪಸ್ಕವನ್ನು ಆಚರಿಸಲಾಗದೆಂದು ಅರಸನೂ ಅವನ ಸರದಾರರೂ ಯೆರೂಸಲೇವಿುನ ಸರ್ವಸಂಘದವರೂ ತಿಳಿದು


ಅರಸನಾದ ಸೊಲೊಮೋನನೂ ಅಲ್ಲಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.


ಅನಂತರ ಸೊಲೊಮೋನನು ದಾವೀದ ನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವದಕ್ಕಾಗಿ ಇಸ್ರಾಯೇಲ್ಯರ ಹಿರಿಯರು ಕುಲಾಧಿಪತಿಗಳು ಇವರೇ ಮೊದಲಾದ ಎಲ್ಲಾ ಇಸ್ರಾಯೇಲ್ ಪ್ರಧಾನಪುರುಷರನ್ನು ಯೆರೂಸಲೇವಿುಗೆ ಕರಿಸಿಕೊಂಡನು.


ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವದಕ್ಕೋಸ್ಕರ ಎಲ್ಲಾ ಇಸ್ರಾಯೇಲ್ಯರನ್ನು ಯೆರೂಸಲೇವಿುಗೆ ಕರಸಿದನು.


ಆಗ ದಾವೀದನು ದೇವಮಂಜೂಷವನ್ನು ಕಿರ್ಯತ್ಯಾರೀವಿುನಿಂದ ತರುವದಕ್ಕೋಸ್ಕರ ಐಗುಪ್ತದ ಶೀಹೋರ್ ಹಳ್ಳದಿಂದ ಹಮಾತಿನ ದಾರಿಯವರೆಗೂ ವಾಸಿಸುತ್ತಿದ್ದ ಎಲ್ಲಾ ಇಸ್ರಾಯೇಲ್ಯರನ್ನೂ ಕೂಡಿಸಿ


ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಜನರನ್ನು ಕೂಡಿಸಿಕೋ, ನಾನು ಅವರಿಗೆ ಜಲಾಧಾರವನ್ನುಂಟುಮಾಡಿ ಕೊಡುವೆನು ಎಂದು ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವಾದದ್ದೇ.


ಯೆಹೋವನು ಹೇಳಿದಂತೆಯೇ ಮೋಶೆ ಮಾಡಿದನು. ಜನಸಮೂಹವೆಲ್ಲಾ ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಕೂಡಿದಾಗ ಮೋಶೆ ಅವರಿಗೆ -


ಆಗ ನೀನು ಅವರನ್ನು ದೇವದರ್ಶನದ ಗುಡಾರದ ಮುಂದೆ ಕರಕೊಂಡು ಬಂದು ಇಸ್ರಾಯೇಲ್ಯರ ಸಮೂಹವನ್ನೆಲ್ಲಾ ಕೂಡ ಕರಿಸಿ


ಶುದ್ಧಿಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನದ ಗುಡಾರದ ಬಾಗಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು