Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:30 - ಕನ್ನಡ ಸತ್ಯವೇದವು J.V. (BSI)

30 ಆಗ ಮೋಶೆ ಅಭಿಷೇಕತೈಲದಲ್ಲಿಯೂ ಯಜ್ಞವೇದಿಯ ಮೇಲಿದ್ದ ರಕ್ತದಲ್ಲಿಯೂ ಸ್ವಲ್ಪ ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿವಿುಕಿಸಿದನು. ಹೀಗೆ ಆರೋನನನ್ನೂ ಅವನ ವಸ್ತ್ರಗಳನ್ನೂ ಅವನ ಮಕ್ಕಳನ್ನೂ ಅವರ ವಸ್ತ್ರಗಳನ್ನೂ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಮೋಶೆ ಅಭಿಷೇಕತೈಲದಲ್ಲಿ ಮತ್ತು ಯಜ್ಞವೇದಿಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಹಾಗೂ ಅವನ ವಸ್ತ್ರಗಳ ಮೇಲೆಯೂ, ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಿದನು. ಹೀಗೆ ಆರೋನನನ್ನು ಅವನ ವಸ್ತ್ರಗಳನ್ನು, ಅವನ ಮಕ್ಕಳನ್ನು ಮತ್ತು ಅವರ ವಸ್ತ್ರಗಳನ್ನು ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಬಳಿಕ ಮೋಶೆ ಅಭಿಷೇಕ ಎಣ್ಣೆಯಿಂದಲೂ ಬಲಿಪೀಠದ ಮೇಲಿದ್ದ ರಕ್ತದಿಂದಲೂ ಸ್ವಲ್ಪ ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೂ ಚಿಮುಕಿಸಿದನು. ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಮೋಶೆ ಸ್ವಲ್ಪ ಅಭಿಷೇಕತೈಲವನ್ನು ಮತ್ತು ವೇದಿಕೆಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮೇಲೆ ಮತ್ತು ಅವನ ಯಾಜಕವಸ್ತ್ರದ ಮೇಲೆ ಚಿಮಿಕಿಸಿದನು; ಆರೋನನ ಜೊತೆ ಇದ್ದ ಅವನ ಪುತ್ರರ ಮೇಲೆ ಮತ್ತು ಅವರ ಬಟ್ಟೆಗಳ ಮೇಲೆ ಚಿಮಿಕಿಸಿದನು. ಹೀಗೆ ಮೋಶೆಯು ಆರೋನನನ್ನೂ ಅವನ ಯಾಜಕವಸ್ತ್ರವನ್ನೂ ಅವನ ಪುತ್ರರನ್ನೂ ಅವರ ಯಾಜಕ ವಸ್ತ್ರಗಳನ್ನೂ ಪವಿತ್ರಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಮೋಶೆಯು ಅಭಿಷೇಕ ತೈಲವನ್ನೂ, ಬಲಿಪೀಠದ ಮೇಲಿರುವ ರಕ್ತವನ್ನೂ ತೆಗೆದುಕೊಂಡು, ಆರೋನನ ಮೇಲೆಯೂ, ಅವನ ಉಡುಪುಗಳ ಮೇಲೆಯೂ ಅವನೊಂದಿಗೆ ಅವನ ಪುತ್ರರ ಮೇಲೆಯೂ, ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು. ಆರೋನನನ್ನೂ, ಅವನ ಉಡುಪುಗಳನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಅವನ ಪುತ್ರರ ಉಡುಪುಗಳನ್ನೂ ಪವಿತ್ರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:30
15 ತಿಳಿವುಗಳ ಹೋಲಿಕೆ  

ಇವರೇ ಯಾಜಕೋದ್ಯೋಗವನ್ನು ನಡಿಸುವದಕ್ಕಾಗಿ ಅಭಿಷೇಕದಿಂದ ಪ್ರತಿಷ್ಠಿತರಾದವರು.


ಅದಲ್ಲದೆ ಆರೋನನೂ ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನು ಅಭಿಷೇಕಿಸಿ ಪ್ರತಿಷ್ಠಿಸಬೇಕು.


ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ ಅಭಿಷೇಕತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿವಿುಕಿಸಬೇಕು. ಹೀಗೆ ಅವನೂ ಅವನ ಮಕ್ಕಳೂ ಅವರ ವಸ್ತ್ರಗಳು ಸಹಿತವಾಗಿ ಪರಿಶುದ್ಧರಾಗುವರು.


ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶ ಮಾಡುವದು ಅವಶ್ಯವಿಲ್ಲ. ಆತನು ಮಾಡಿದ ಅಭಿಷೇಕವು ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥದಾಗಿದ್ದು ಸತ್ಯವಾಗಿದೆ, ಸುಳ್ಳಲ್ಲ. ಅದು ನಿಮಗೆ ಉಪದೇಶ ಮಾಡಿದ ಪ್ರಕಾರ ಆತನಲ್ಲಿ ನೆಲೆಗೊಂಡಿರ್ರಿ.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಯಾಕಂದರೆ ಪವಿತ್ರ ಮಾಡುವಾತನಿಗೂ ಪವಿತ್ರರಾಗುವವರೆಲ್ಲರಿಗೂ ಒಬ್ಬನೇ ತಂದೆ ಇದ್ದಾನೆ. ಈ ಕಾರಣದಿಂದ ಪವಿತ್ರ ಮಾಡುವಾತನು ಪವಿತ್ರರಾಗುವವರನ್ನು ಸಹೋದರರೆನ್ನುವದಕ್ಕೆ ನಾಚಿಕೆಪಡದೆ -


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


ಆಗ ಮೋಶೆ ಆರೋನನಿಗೆ - ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ - ನಾನು ಪರಿಶುದ್ಧನೆಂಬದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬದೇ ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ನಿನ್ನ ಅಣ್ಣನಾದ ಆರೋನನಿಗೆ ತಕ್ಕ ಗೌರವವೂ ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.


ಇಸ್ರಾಯೇಲ್ಯರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಯೆಹೋವನು [ಮೋಶೆಯ ಕೈಯಿಂದ] ಅವರನ್ನು ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲಿ ಅಪ್ಪಣೆಮಾಡಿದನು.


ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. [ಮೋಶೆ] ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು.


ಅದರಲ್ಲಿ ಸ್ವಲ್ಪವನ್ನು ಆರೋನನ ತಲೆಯ ಮೇಲೆ ಹೊಯಿದು ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು