Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:6 - ಕನ್ನಡ ಸತ್ಯವೇದವು J.V. (BSI)

6 ಆಗ ಮೋಶೆ ಆರೋನನನ್ನೂ ಅವನ ಮಕ್ಕಳನ್ನೂ ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಮೋಶೆ ಆರೋನನನ್ನು ಮತ್ತು ಅವನ ಮಕ್ಕಳನ್ನು ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಳಿಕ ಮೋಶೆ ಆರೋನನನ್ನೂ ಅವನ ಪುತ್ರರನ್ನೂ ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ತರುವಾಯ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಕರೆದನು. ಅವನು ಅವರಿಗೆ ನೀರಿನಿಂದ ಸ್ನಾನ ಮಾಡಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಕರೆದುಕೊಂಡು ಬಂದು, ಸ್ನಾನಮಾಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:6
19 ತಿಳಿವುಗಳ ಹೋಲಿಕೆ  

ಆತನು ಅದನ್ನು ಪ್ರತಿಷ್ಠೆಪಡಿಸುವದಕ್ಕಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಲ್ಲಿಯೂ ತೊಳೆದುಕೊಂಡಿರಿ, ದೇವಜನರಾದಿರಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.


ಆಗ ಆರೋನನನ್ನೂ ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಲಿಗೆ ಕರಕೊಂಡು ಬಂದು ನೀರಿನಲ್ಲಿ ಸ್ನಾನ ಮಾಡಿಸಿ


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ನಿಮ್ಮನ್ನು ತೊಳೆದುಕೊಳ್ಳಿರಿ, ಶುದ್ಧಿಮಾಡಿಕೊಳ್ಳಿರಿ, ನನ್ನ ಕಣ್ಣೆದುರಿನ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿರಿ;


ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮುಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗಿರುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.


ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ ನನ್ನನ್ನು ಶುದ್ಧಗೊಳಿಸು.


ಯೆಹೋವನೇ, ನಾನು ನಿಷ್ಕಳಂಕನೆಂದು ಕೈಗಳನ್ನು ತೊಳೆದುಕೊಂಡವನಾಗಿ


ಅದಲ್ಲದೆ ಆರೋನನನ್ನೂ ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಲಿನ ಹತ್ತಿರಕ್ಕೆ ಬರಮಾಡಿ ಅವರನ್ನು ಸ್ನಾನಮಾಡಿಸಿ


ಆರೋನನೂ ಅವನ ಮಕ್ಕಳೂ ಅದರಿಂದ ಕೈಕಾಲುಗಳನ್ನು ತೊಳೆದುಕೊಳ್ಳಬೇಕು.


ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.


ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ.


ಅನ್ನಪಾನಾದಿಗಳೂ ವಿವಿಧ ಸ್ನಾನಗಳೂ ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾದವು ಎಂಬದು.


ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು.


ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗೆಲ್ಲಾ ಆ ನೀರಿನಿಂದ ಕೈಕಾಲುಗಳನ್ನು ತೊಳೆದುಕೊಂಡು ಹೋಗಬೇಕು; ತೊಳೆಯದೆ ಹೋದರೆ ಸತ್ತಾರು. ಹಾಗೆಯೇ ಅವರು ದೇವರ ಸೇವೆಯನ್ನು ನಡಿಸುವವರಾಗಿ ಯೆಹೋವನಿಗೆ ಹೋಮಸಮರ್ಪಣೆಗಾಗಿ ಯಜ್ಞವೇದಿಯ ಬಳಿಗೆ ಬರುವಾಗಲೂ ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು;


ನಾನು ಈಗ ಮಾಡುವ ಕಾರ್ಯವು ಯೆಹೋವನು ಆಜ್ಞಾಪಿಸಿದ್ದು ಎಂದು ಹೇಳಿದನು.


ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು ನಾರಿನ ಚಡ್ಡಿಯನ್ನು ಹಾಕಿಕೊಂಡು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ತಲೆಗೆ ಮುಂಡಾಸವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವದಕ್ಕೆ ಮುಂಚೆ ಸ್ನಾನಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು