ಯಾಜಕಕಾಂಡ 9:15 - ಕನ್ನಡ ಸತ್ಯವೇದವು J.V. (BSI)15 ತರುವಾಯ ಜನಸಮೂಹವು ಸಮರ್ಪಿಸುವ ಪಶುಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕವಾದ ಹೋತವನ್ನು ಮೊದಲನೆಯ ಪಶುವಿನಂತೆ ವಧಿಸಿ ಅವರಿಗೋಸ್ಕರ ದೋಷಪರಿಹಾರಕ್ಕಾಗಿ ಸಮರ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ತರುವಾಯ ಜನಸಮೂಹವು ಸಮರ್ಪಿಸುವ ಪಶುಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕ ಹೋತವನ್ನು ಮೊದಲನೆಯ ಪಶುವಿನಂತೆ ವಧಿಸಿ ಅವರಿಗೋಸ್ಕರ ದೋಷಪರಿಹಾರಕ್ಕಾಗಿ ಅದನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದಾದ ಮೇಲೆ ಜನರು ಸಮರ್ಪಿಸಿದ ಪ್ರಾಣಿಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕವಾದ ಹೋತವನ್ನು ಮೊದಲನೆಯ ಬಲಿಪ್ರಾಣಿಯಾಗಿ ವಧಿಸಿ ಜನರ ದೋಷಪರಿಹಾರಾರ್ಥವಾಗಿ ಸಮರ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ತರುವಾಯ ಆರೋನನು ಜನರು ಅರ್ಪಿಸುವ ಪಶುಗಳನ್ನು ತರಿಸಿದನು. ಅವನು ಜನರಿಗಾಗಿ ಪಾಪಪರಿಹಾರಕ ಯಜ್ಞಕ್ಕಾಗಿ ಹೋತವನ್ನು ವಧಿಸಿದನು. ಅವನು ಮೊದಲಿನ ಪಶುವನ್ನು ಸಮರ್ಪಿಸಿದ ರೀತಿಯಲ್ಲಿ ಪಾಪಪರಿಹಾರಕ್ಕಾಗಿ ಹೋತವನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅದಾದ ಮೇಲೆ ಆರೋನನು ಜನರಿಗಾಗಿ ಅರ್ಪಿಸಿದ ಬಲಿಯನ್ನು ತಂದು, ಹೋತವನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಪರಿಹಾರದ ಬಲಿಯಾಗಿರುವುದನ್ನು ವಧಿಸಿ, ಮೊದಲನೆಯದರ ಹಾಗೆ ಅದನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿ |