Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:5 - ಕನ್ನಡ ಸತ್ಯವೇದವು J.V. (BSI)

5 ಮೋಶೆ ಆಜ್ಞಾಪಿಸಿದ ಮೇರೆಗೆ ಅವರು ದೇವದರ್ಶನದ ಗುಡಾರದ ಹತ್ತಿರಕ್ಕೆ ತಂದರು. ಸಮೂಹದವರೆಲ್ಲರೂ ಹತ್ತಿರಕ್ಕೆ ಬಂದು ಯೆಹೋವನ ಸನ್ನಿಧಿಯಲ್ಲಿ ನಿಂತಿರಲಾಗಿ ಮೋಶೆ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೋಶೆ ಆಜ್ಞಾಪಿಸಿದ ಮೇರೆಗೆ ಅವರು ಅವುಗಳನ್ನೆಲ್ಲಾ ದೇವದರ್ಶನ ಗುಡಾರದ ಹತ್ತಿರಕ್ಕೆ ತಂದರು. ಸರ್ವಸಮೂಹದವರೆಲ್ಲರೂ ಹತ್ತಿರಕ್ಕೆ ಬಂದು ಯೆಹೋವನ ಸನ್ನಿಧಿಯಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮೋಶೆಯ ಆಜ್ಞಾನುಸಾರ ಅವರು ಕಾಣಿಕೆಗಳನ್ನೆಲ್ಲ ದೇವದರ್ಶನದ ಗುಡಾರದ ಬಳಿಗೆ ತಂದರು. ಇಸ್ರಯೇಲ್ ಸಮಾಜದವರೆಲ್ಲರು ಹತ್ತಿರಕ್ಕೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ಜನರೆಲ್ಲರೂ ದೇವದರ್ಶನಗುಡಾರಕ್ಕೆ ಬಂದರು. ಮೋಶೆ ಆಜ್ಞಾಪಿಸಿದ ವಸ್ತುಗಳನ್ನು ಅವರು ತಂದರು. ಎಲ್ಲಾ ಜನರು ಯೆಹೋವನ ಸನ್ನಿಧಿಯಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಮೋಶೆಯು ಆಜ್ಞಾಪಿಸಿದವುಗಳನ್ನು ದೇವದರ್ಶನದ ಗುಡಾರದ ಮುಂದೆ ತಂದರು. ಸಮೂಹವೆಲ್ಲವೂ ಹತ್ತಿರ ಬಂದು ಯೆಹೋವ ದೇವರ ಮುಂದೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:5
7 ತಿಳಿವುಗಳ ಹೋಲಿಕೆ  

ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಲಿನ ಮುಂದಿನ ಬೈಲಿನಲ್ಲಿ ಒಟ್ಟಾಗಿ ಕೂಡಿಬಂದು - ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲ್ಯರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕು ಎಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು.


ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವದಕ್ಕೋಸ್ಕರ ಎಲ್ಲಾ ಇಸ್ರಾಯೇಲ್ಯರನ್ನು ಯೆರೂಸಲೇವಿುಗೆ ಕರಸಿದನು.


ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಪುರುಷರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯ ಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.


ದೇವದರ್ಶನಕ್ಕಾಗಿ ಮೋಶೆ ಜನರನ್ನು ಪಾಳೆಯದ ಹೊರಕ್ಕೆ ಬರಮಾಡಲು ಅವರು ಬೆಟ್ಟದ ಬುಡದಲ್ಲಿ ನಿಂತುಕೊಂಡರು.


ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನೂ ಟಗರನ್ನೂ ನೈವೇದ್ಯಕ್ಕಾಗಿ ಎಣ್ಣೆವಿುಶ್ರವಾದ ಪದಾರ್ಥವನ್ನೂ ತೆಗೆದುಕೊಂಡು ಬರಬೇಕೆಂದು ಆಜ್ಞಾಪಿಸು ಅಂದನು.


ನೀವು ಮಾಡಬೇಕೆಂದು ಯೆಹೋವನು ಆಜ್ಞಾಪಿಸಿದ್ದು ಇದೇ; ಅದರಂತೆ ನಡೆದರೆ ಯೆಹೋವನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು