Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:6 - ಕನ್ನಡ ಸತ್ಯವೇದವು J.V. (BSI)

6 ನೀವು ಮಾಡಬೇಕೆಂದು ಯೆಹೋವನು ಆಜ್ಞಾಪಿಸಿದ್ದು ಇದೇ; ಅದರಂತೆ ನಡೆದರೆ ಯೆಹೋವನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಮೋಶೆ ಅವರಿಗೆ, “ನೀವು ಏನು ಮಾಡಬೇಕೆಂದು ಯೆಹೋವನು ಆಜ್ಞಾಪಿಸಿದ್ದು ಇದೇ; ಅದರಂತೆ ನಡೆದರೆ ಯೆಹೋವನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೋಶೆ ಅವರಿಗೆ, “ನೀವು ಇವುಗಳನ್ನೆಲ್ಲ ಮಾಡಬೇಕೆಂದು ಸರ್ವೇಶ್ವರ ಸ್ವಾಮಿಯೇ ಆಜ್ಞಾಪಿಸಿದ್ದಾರೆ; ಅದರಂತೆ ನೀವು ನಡೆದುಕೊಂಡರೆ ಸರ್ವೇಶ್ವರನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮೋಶೆ, “ಯೆಹೋವನು ಆಜ್ಞಾಪಿಸಿದವುಗಳನ್ನು ನೀವು ಮಾಡಿದರೆ ಯೆಹೋವನ ಮಹಿಮೆಯು ನಿಮಗೆ ಪ್ರತ್ಯಕ್ಷವಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮೋಶೆ ಅವರಿಗೆ, “ಯೆಹೋವ ದೇವರು ಆಜ್ಞಾಪಿಸಿದ ಸಂಗತಿಯು ಇದೇ. ಇದನ್ನು ನೀವು ಮಾಡಿರಿ. ಯೆಹೋವ ದೇವರ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:6
9 ತಿಳಿವುಗಳ ಹೋಲಿಕೆ  

ತರುವಾಯ ಮೋಶೆಯೂ ಆರೋನನೂ ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.


ಇಗೋ, ಇಸ್ರಾಯೇಲಿನ ದೇವರ ತೇಜಸ್ಸು ಮೂಡಣ ಮಾರ್ಗವಾಗಿ ಬಂತು; ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ತೇಜಸ್ಸಿನಿಂದ ಭೂವಿುಯು ಬೆಳಗಿತು.


ಯೆಹೋವನ ತೇಜಸ್ಸು ಸೀನಾಯಿ ಬೆಟ್ಟದ ಮೇಲೆ ನಿಂತಿತು, ಮತ್ತು ಆ ಮೇಘವು ಆರು ದಿನಗಳವರೆಗೂ ಬೆಟ್ಟವನ್ನು ಮುಚ್ಚಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿಂದ ಕೂಗಿ ಮೋಶೆಯನ್ನು ಕರೆದನು.


ಆರೋನನು ಇಸ್ರಾಯೇಲ್ಯರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ ಅವರು ಅರಣ್ಯದ ಕಡೆಗೆ ನೋಡಲಾಗಿ ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.


ಮೋಶೆ ಆಜ್ಞಾಪಿಸಿದ ಮೇರೆಗೆ ಅವರು ದೇವದರ್ಶನದ ಗುಡಾರದ ಹತ್ತಿರಕ್ಕೆ ತಂದರು. ಸಮೂಹದವರೆಲ್ಲರೂ ಹತ್ತಿರಕ್ಕೆ ಬಂದು ಯೆಹೋವನ ಸನ್ನಿಧಿಯಲ್ಲಿ ನಿಂತಿರಲಾಗಿ ಮೋಶೆ ಅವರಿಗೆ -


ಅಲ್ಲಿಯೇ ನಾನು ಇಸ್ರಾಯೇಲ್ಯರಿಗೆ ದರ್ಶನವನ್ನು ಕೊಡುವೆನು; ಅಲ್ಲಿ ಕಾಣಿಸುವ ನನ್ನ ಪ್ರಭಾವದಿಂದ ಆ ಸ್ಥಳವು ಪರಿಶುದ್ಧವಾಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು