Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:10 - ಕನ್ನಡ ಸತ್ಯವೇದವು J.V. (BSI)

10 ಆದರೆ ಈ ಜನರು ತಮಗೆ ಗೊತ್ತಿಲ್ಲದ ಎಲ್ಲವನ್ನೂ ದೂಷಿಸುತ್ತಾರೆ, ಮತ್ತು ತಾವು ವಿವೇಕಶೂನ್ಯಪಶುಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೆ, ಈ ಜನರು ತಮಗೆ ಅರ್ಥವಾಗದ ಎಲ್ಲವನ್ನೂ ದೂಷಿಸುತ್ತಾರೆ. ವಿಚಾರ ಶೂನ್ಯ ಪ್ರಾಣಿಗಳಂತೆ ಸಹಜ ಪ್ರವೃತ್ತಿಯಿಂದ ಏನನ್ನು ತಿಳಿದುಕೊಳ್ಳುತ್ತಾರೋ ಅದರಿಂದಲೇ ನಾಶವಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಈ ಜನರು ತಮಗೆ ಅರ್ಥವಾಗದ್ದನ್ನೂ ಟೀಕಿಸುತ್ತಾರೆ. ಅವರಿಗೂ ಸ್ವಲ್ಪ ಅರ್ಥವಾಗುತ್ತದೆ. ಆದರೆ ಅವರು ವಿವೇಕಶೂನ್ಯ ಪ್ರಾಣಿಗಳಂತೆ ಸಹಜಪ್ರವೃತ್ತಿಯಿಂದ ಅವುಗಳನ್ನು ಅರ್ಥಮಾಡಿಕೊಳ್ಳುತ್ತಾರೆಯೇ ಹೊರತು ವಿವೇಚನೆಯಿಂದ ಅರ್ಥಮಾಡಿಕೊಳ್ಳುವುದಿಲ್ಲ. ಇವುಗಳೇ ಅವರನ್ನು ನಾಶಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ. ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ಹಿ ಲೊಕಾ ಅಪ್ನಾಕ್ ಗೊತ್ತ್ ನಸಲ್ಲ್ಯಾ ವಿಶಯಾತ್ ನಿಂದ್ಯಾ ಕರ್ತಾತ್, ಅನಿ ಅಪ್ನಿಬಿ ಬುದ್ದ್ ನಸಲ್ಲ್ಯಾ ಜನಾವರಾ ಸಾರ್ಕೆ ಕಸೆ ಹಾಯ್ ತಸೆ ಕಾಯ್ಬಿ ಕಳ್ವುನ್ ಘೆತ್ಯಾತ್, ಅನಿ ತೆಚ್ಯಾ ವೈನಾ ಅಪ್ನಾಕ್ನಿಚ್ ಜಾಳ್ವುನ್ ನಾಸ್ ಕರುನ್ ಘೆತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:10
4 ತಿಳಿವುಗಳ ಹೋಲಿಕೆ  

ಆದರೆ ಸ್ವಾಭಾವಿಕವಾಗಿ ಬೇಟೆಗೂ ಕೊಲೆಗೂ ಹುಟ್ಟಿರುವ ವಿವೇಕಶೂನ್ಯ ಪಶುಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಹೇಳುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಕೆಟ್ಟುಹೋಗಿ ತಮ್ಮ ದುಷ್ಪ್ರವರ್ತನೆಗೆ ಸರಿಯಾದ ದುಷ್ಫಲವನ್ನು ಹೊಂದುವರು.


ಧರ್ಮಶಾಸ್ತ್ರವಿಲ್ಲದ ಅನ್ಯಜನರು ಸ್ವಾಭಾವಿಕವಾಗಿ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ನಡೆದರೆ ಅವರು ಧರ್ಮಶಾಸ್ತ್ರವಿಲ್ಲದವರಾಗಿದ್ದರೂ ತಾವೇ ತಮಗೆ ಧರ್ಮಪ್ರಮಾಣವಾಗಿದ್ದಾರೆ;


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು, ಅವರು ಪ್ರಪಂಚದ ಕಾರ್ಯಗಳ ಮೇಲೆ ಮನಸ್ಸಿಡುವವರು. ನಾವಾದರೋ ಪರಲೋಕಸಂಸ್ಥಾನದವರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು