Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:13 - ಕನ್ನಡ ಸತ್ಯವೇದವು J.V. (BSI)

13 ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇವರು ಸಮುದ್ರದಲ್ಲಿನ ಭೀಕರವಾದ ಅಲೆಗಳಂತಿದ್ದಾರೆ. ಈ ಅಲೆಗಳು ನೊರೆಯನ್ನು ಕಾರುವಂತೆ ಇವರು ನಾಚಿಕೆಯಿಲ್ಲದ ಕೆಲಸಗಳನ್ನು ಮಾಡುತ್ತಾರೆ. ಈ ಜನರು ಆಕಾಶದಲ್ಲಿ ಅಲೆಯುವ ನಕ್ಷತ್ರಗಳಂತಿದ್ದಾರೆ. ಇವರಿಗಾಗಿ ಶಾಶ್ವತವಾದ ಕಾರ್ಗತ್ತಲಿನ ಸ್ಥಳವನ್ನು ಕಾದಿರಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲಕ್ಕೆ ಇಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನಿ ಅಪ್ನಾಚಿ ಮರ್ಯಾದ್ಗೆಡಿ ಕಾಮಾಚ್ಯಾ ವೈನಾ ಸಮುಂದರಾಚ್ಯಾ ಮೊಟ್ಯಾ ಭಯಾನಕ್ ಭುರುಕ್ ಭರಲ್ಲ್ಯಾ ಲಾಟಾಂಚ್ಯಾ ಸಾರ್ಕೆ,ತೆಂಚ್ಯಾಸಾಟಿ ದೆವಾನ್ ಸದಾ ಸರ್ವತಾಕ್ ಎಕ್ ದಾಟ್ ಕಾಳ್ಕಾತ್ ಜಾಗೊ ರಾಕುನ್ ಥವಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:13
12 ತಿಳಿವುಗಳ ಹೋಲಿಕೆ  

ಇವರು ನೀರಿಲ್ಲದ ಬಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮಂಜೂ ಆಗಿದ್ದಾರೆ; ಇಂಥವರ ಪಾಲಿಗೆ ಕಾರ್ಗತ್ತಲೆ ಇಟ್ಟಿರುವದು.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು, ಅವರು ಪ್ರಪಂಚದ ಕಾರ್ಯಗಳ ಮೇಲೆ ಮನಸ್ಸಿಡುವವರು. ನಾವಾದರೋ ಪರಲೋಕಸಂಸ್ಥಾನದವರು;


ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ; ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ ಬುರುದೆಯನ್ನೂ ಕಾರುತ್ತಲಿರುತ್ತವೆ.


ಸಮುದ್ರತರಂಗಗಳ ಘೋಷವನ್ನು ತಡೆಯುವವನೂ ಜನಾಂಗಗಳ ದೊಂಬಿಯನ್ನು ಶಾಂತಿಪಡಿಸುವವನೂ ಆಗಿದ್ದೀ.


ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.


ಆದರೆ ದುಷ್ಟರೂ ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ತಮ್ಮ ದೊರೆತನವನ್ನು ಕಾಪಾಡದೆ ತಮಗೆ ತಕ್ಕ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದಲ್ಲಿ ಆಗುವ ದಂಡನೆಯ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಇಟ್ಟಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು