ಯೂದನು 1:15 - ಕನ್ನಡ ಸತ್ಯವೇದವು J.V. (BSI)15 ಎಲ್ಲರಿಗೆ ನ್ಯಾಯತೀರಿಸುವದಕ್ಕೂ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನ್ನ ಮೇಲೆ ಹೇಳಿದ ಎಲ್ಲಾ ಕಠಿನವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವದಕ್ಕೂ ಬಂದನು ಎಂಬದಾಗಿ ಪ್ರವಾದಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಎಲ್ಲರಿಗೂ ನ್ಯಾಯತೀರಿಸುವುದಕ್ಕೂ, ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು” ಎಂಬುದಾಗಿ ಪ್ರವಾದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಭಕ್ತಿಹೀನರು ತಮಗೆ ವಿರುದ್ಧ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಬರುವರು,” ಎಂದು ಪ್ರವಾದಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಪ್ರಭುವು ಪ್ರತಿಯೊಬ್ಬರಿಗೂ ನ್ಯಾಯತೀರಿಸುತ್ತಾನೆ. ಭಕ್ತಿಹೀನರು ತನಗೆ ವಿರುದ್ಧವಾಗಿ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತನಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಆತನು ಬರುತ್ತಾನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಎಲ್ಲರಿಗೆ ನ್ಯಾಯತೀರಿಸುವುದಕ್ಕೆ ಬರುವರು. ಮಾತ್ರವಲ್ಲದೆ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರೋಧವಾಗಿ ಆಡಿದ ಎಲ್ಲಾ ದೂಷಣೆಗಳ ವಿಷಯವಾಗಿ ಅವರನ್ನು ಖಂಡಿಸಲು ಬರುವರು,” ಎಂಬುದಾಗಿ ಪ್ರವಾದಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ದೆವಸ್ಪಾನ್ ನಸಲ್ಲ್ಯಾ ವಾಟೆನ್ ಜಾವ್ನ್ ದೆವಸ್ಪಾನಾನ್ ನಸಲ್ಲಿ ಕಾಮಾ ಕರಲ್ಲ್ಯಾ ಹರ್ ಎಕ್ಲ್ಯಾಕ್, ಅನಿ ಅಪ್ನಾಚ್ಯಾ ವಿರೊದ್ ಬೊಲುನ್ ಕರಲ್ಲ್ಯಾ ಖಟೊರ್ ಕಾಮಾಚ್ಯಾ ಸಾಟ್ನಿ ತೊ ತೆಂಕಾ ಚುಕಿದಾರ್ ಮನುನ್ ಕರ್ತಾ. ಅಧ್ಯಾಯವನ್ನು ನೋಡಿ |
ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು; ಅಂದರೆ ಅದು ಅಧರ್ಮಿಗಳು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ದೇವಭಕ್ತಿಯಿಲ್ಲದವರು, ಪ್ರಾಪಂಚಿಕರು, ತಂದೆತಾಯಿಗಳನ್ನು ಹೊಡೆಯುವವರು, ನರಹತ್ಯಮಾಡುವವರು, ಜಾರರು, ಪುರುಷಗಾವಿುಗಳು, ನರಚೋರರು, ಸುಳ್ಳುಗಾರರು, ಅಬದ್ಧಪ್ರಮಾಣಿಕರು, ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆಯೇ ಹೊರತು ನೀತಿವಂತರಿಗೆ ನೇಮಕವಾಗಿಲ್ಲವೆಂದು ತಿಳಿದು ಉಪಯೋಗಿಸಬೇಕು.