ಯೂದನು 1:16 - ಕನ್ನಡ ಸತ್ಯವೇದವು J.V. (BSI)16 ಇವರು ಗುಣುಗುಟ್ಟುವವರೂ ತಮ್ಮ ಗತಿಯನ್ನು ನಿಂದಿಸುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಬರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಈ ದುರ್ಬೋಧಕರಾದರೋ ಗುಣುಗುಟ್ಟುವವರೂ ತಪ್ಪು ಹುಡುಕುವವರೂ ದುರಾಶೆಗಳಿಗೆ ಬಲಿಯಾದವರೂ ಬಡಾಯಿಕೊಚ್ಚುವವರೂ ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇವರು ಗೊಣಗುಟ್ಟುವವರೂ ದೂರುವವರೂ ತಮ್ಮ ದುರಾಶೆಗಳನ್ನು ಅನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಉದುರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಹಿ ಚುಕ್ ಶಿಕಾಪಾ ಶಿಕ್ವುತಲಿ ಲೊಕಾ ದುಸ್ರ್ಯಾಕ್ನಿ ದೊಶ್ ದಿತ್ಯಾತ್, ತೆನಿ ಅಪ್ನಾಚ್ಯಾ ಬುರ್ಶ್ಯಾ ಆಶಾಂಚ್ಯಾ ಸಾರ್ಕೆ ಚಲ್ತಾತ್ ಅನಿ ಅಪ್ನಾಚ್ಯಾ ಫಾಯ್ದ್ಯಾ ಸಾಟ್ನಿ ದುಶ್ರ್ಯಾಂಚಿ ಬಡಾಯ್ ಬೊಲುನ್ ದಾಕ್ವುತ್ಯಾತ್. ಅಧ್ಯಾಯವನ್ನು ನೋಡಿ |