Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:17 - ಕನ್ನಡ ಸತ್ಯವೇದವು J.V. (BSI)

17 ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪ್ರಿಯರೇ, ನಮ್ಮ ಪ್ರಭುವಾದ ಕ್ರಿಸ್ತಯೇಸುವಿನ ಪ್ರೇಷಿತರು. ನಿಮಗೆ ಮುಂಚಿತವಾಗಿ ತಿಳಿಸಿದ ಮಾತುಗಳನ್ನು ನೆನಪುಮಾಡಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪ್ರಿಯ ಸ್ನೇಹಿತರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಅಪೊಸ್ತಲರು ಮುಂಚೆ ಏನು ಹೇಳಿದರೆಂಬುದನ್ನು ನೆನಪು ಮಾಡಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪ್ರಿಯ ಸ್ನೇಹಿತರೇ, ನೀವಾದರೋ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾಜ್ಯಾ ಪ್ರಿತಿಚ್ಯಾನು, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಅಪೊಸ್ತಲಾನಿ ತುಮ್ಕಾ ಅದ್ದಿ ಕಾಯ್ ಸಾಂಗಲ್ಲ್ಯಾನಿ ಮನ್ತಲೆ ಯಾದ್ ಕರುನ್ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:17
8 ತಿಳಿವುಗಳ ಹೋಲಿಕೆ  

ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ಸರಳ ಮನಸ್ಸನ್ನು ಪ್ರೇರಿಸಿದ್ದೇನೆ.


ನಾವಂತೂ ದೇವರಿಂದ ಹುಟ್ಟಿದವರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಂದ ಹುಟ್ಟದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯವನ್ನು ಬೋಧಿಸುವ ಆತ್ಮ, ಅದು ಸುಳ್ಳನ್ನು ಬೋಧಿಸುವ ಆತ್ಮ ಎಂದು ಇದರಿಂದಲೇ ತಿಳುಕೊಳ್ಳುತ್ತೇವೆ.


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸೌವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವೂ ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು - ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯವೆಂಬದಾಗಿ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು ಅಂದನು.


ನನ್ನ ಸೇವಕನಾದ ಮೋಶೆಯ ಧರ್ಮಶಾಸ್ತ್ರವನ್ನು ಅಂದರೆ ನಾನು ಹೋರೇಬ್ ಬೆಟ್ಟದಲ್ಲಿ ಎಲ್ಲಾ ಇಸ್ರಾಯೇಲ್ಯರಿಗೋಸ್ಕರ ಮೋಶೆಗೆ ನೇವಿುಸಿದ ನಿಯಮವಿಧಿಗಳನ್ನು ಜ್ಞಾಪಕಮಾಡಿಕೊಳ್ಳಿರಿ.


ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ.


ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು;


ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನಮಾಡುತ್ತಿದ್ದಾಗ ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು