Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:3 - ಕನ್ನಡ ಸತ್ಯವೇದವು J.V. (BSI)

3 ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನಮಾಡುತ್ತಿದ್ದಾಗ ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪ್ರಿಯ ಸಹೋದರರೇ, ನಮ್ಮೆಲ್ಲರಿಗೂ ಲಭಿಸಿರುವ ಜೀವೋದ್ಧಾರವನ್ನು ಕುರಿತು ಬರೆಯಲು ಅತ್ಯಾಸಕ್ತನಾಗಿದ್ದೆನು. ಆದರೆ, ದೇವಜನರಿಗೆ ಒಮ್ಮೆಗೇ ಶಾಶ್ವತವಾಗಿ ಕೊಡಲಾಗಿರುವ ವಿಶ್ವಾಸವನ್ನು ಕಾಪಾಡಿಕೊಳ್ಳುವುದಕ್ಕಾಗಿ ಹೋರಾಡಬೇಕೆಂದು ನಿಮ್ಮನ್ನು ಪ್ರೋತ್ಸಾಹಿಸಿ ಬರೆಯುವುದು ಅವಶ್ಯವೆಂದು ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪ್ರಿಯ ಸ್ನೇಹಿತರೇ, ನಾವು ಹಂಚಿಕೊಳ್ಳುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಜಾಗ್ರತೆಯಿಂದ ಪ್ರಯತ್ನ ಮಾಡುತ್ತಿದ್ದಾಗ, ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲಾದ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಾಜ್ಯಾ ಪ್ರೆಮಾಚ್ಯಾನು, ಅಮಿ ಸಗ್ಳೆ ವಾಟುನ್ ಘೆಟಲ್ಲ್ಯಾ ಸುಟ್ಕೆಚ್ಯಾ ವಿಶಯಾತ್ ತುಮ್ಕಾ ಲಿವ್ಚೆ ಮನುನ್ ಮಿಯಾ ಉಮ್ಮೆದಿನ್ ತಯಾರಿ ಕರ್ತಾನಾ, ಸಗ್ಳ್ಯಾ ದೆವಾಚ್ಯಾ ಲೊಕಾಕ್ನಿ ಲೈ ತರಾಸಾನ್ ಎಗ್ದಾಚ್ ದಿಲ್ಲ್ಯಾ ವಿಶ್ವಾಸಾಚ್ಯಾ ವಿಶಯಾತ್ ತುಮ್ಚ್ಯಾಕ್ಡೆ ವಿನಂತಿ ಕರ್ತಲೆ ಗರ್ಜೆಚೆ ಮನುನ್ ಮಾಕಾ ದಿಸ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:3
44 ತಿಳಿವುಗಳ ಹೋಲಿಕೆ  

ಕ್ರಿಸ್ತ ನಂಬಿಕೆಯುಳ್ಳವರು ಮಾಡತಕ್ಕ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿ ದೇವರು ನಿನ್ನನ್ನು ಕರೆದನು, ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರಮಾಡಿಕೊಂಡು ಭಕ್ತಿಯಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾ ಪವಿತ್ರಾತ್ಮ ಪ್ರೇರಿತರಾಗಿ ಪ್ರಾರ್ಥನೆಮಾಡುತ್ತಾ


ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು.


ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥಬೋಧನಾವಾಕ್ಯಗಳನ್ನು ಮಾದರಿಮಾಡಿಕೊಂಡು ಅನುಸರಿಸು.


ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳನ್ನು ನಾನು ನೆನಸಿ - ನೀನು ಅವುಗಳಿಂದ ಧೈರ್ಯಗೊಂಡು ಕ್ರೈಸ್ತರ ದಿವ್ಯಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪನೆಮಾಡುತ್ತೇನೆ.


ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆ ಹೊತ್ತಾದರೂ ಸಮ್ಮತಿಪಡಲಿಲ್ಲ.


ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.


ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರಾಗ ಮಾಡಿದನು.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ.


ಆಗ ಯೆಹೋವನು ತನ್ನ ಕೈಯಿಂದಲೇ ಬರೆದು ಆ ಎರಡು ಕಲ್ಲಿನ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನು. ನೀವು ಸಭೆಕೂಡಿದ ದಿನದಲ್ಲಿ ಯೆಹೋವನು ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಿಗೆಗಳಲ್ಲಿದ್ದವು.


ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನೂ ನೀವೇ ಬಲ್ಲಿರಿ.


ನಾನು ನಿಮಗೆ ತಿಳಿಸಿದ ಮೊದಲನೆಯ ಸಂಗತಿಗಳೊಳಗೆ ಒಂದು ಸಂಗತಿಯನ್ನು ನಿಮಗೆ ತಿಳಿಸಿಕೊಟ್ಟೆನು. ಅದು ನಾನು ಸಹ ಕಲಿತುಕೊಂಡದ್ದೇ. ಅದೇನಂದರೆ ಶಾಸ್ತ್ರದಲ್ಲಿ ಮುಂತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಕ್ಕುವದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಡಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.


ಅವನು ಹೋಗಿ ಯೇಸುವೇ ಕ್ರಿಸ್ತನೆಂದು ಶಾಸ್ತ್ರಾಧಾರದಿಂದ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದ್ದವರಿಗೆ ಬಹಳ ಸಹಾಯಮಾಡಿದನು.


ಆಯಾ ವಚನಗಳ ಅರ್ಥವನ್ನು ಬಿಚ್ಚಿ - ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು ಎದ್ದುಬರುವದು ಅಗತ್ಯವೆಂತಲೂ ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ ಸ್ಥಾಪಿಸಿದನು.


ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ -


ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಾನು ಸಂಕ್ಷೇಪವಾಗಿ ಬರೆದು ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.


ಕೊಲೊಸ್ಸೆಯಲ್ಲಿರುವ ದೇವಜನರಿಗೆ ಅಂದರೆ ಕ್ರಿಸ್ತನಲ್ಲಿರುವ ನಂಬಿಗಸ್ತರಾದ ಸಹೋದರರಿಗೆ ಬರೆಯುವದೇನಂದರೆ - ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು ಫಿಲಿಪ್ಪಿಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಅವರಲ್ಲಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ ಬರೆಯುವದೇನಂದರೆ -


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವದೇನಂದರೆ -


ಇಗೋ, ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರಗಳಲ್ಲಿ ನಿಮಗೆ ಬರೆಯುತ್ತಾ ಇದ್ದೇನೆ.


ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು ಎಂದು ಹೇಳಿದನು.


ಯಾಕಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದೆನು.


ಸುಳ್ಳಾಡುವದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬೊಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ; ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ಅನ್ನುತ್ತಾನೆ.


ಇಸ್ರಾಯೇಲಿಗೋ ಯೆಹೋವನಿಂದ ಶಾಶ್ವತರಕ್ಷಣೆ ದೊರೆಯುವದು; ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವದಿಲ್ಲ, ಮಾನಭಂಗಪಡುವದಿಲ್ಲ.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.


ಕೋಪಗೊಂಡು ಅವರನ್ನು ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು -


ಆಗ ಆ ರಕ್ತಾಪರಾಧವು ಕ್ಷವಿುಸಲ್ಪಡುವದು. ಹೀಗೆ ಯೆಹೋವನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡುವದರಿಂದ ನೀವೇ ಅನ್ಯಾಯವಾದ ನರಹತ್ಯದೋಷವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವಿರಿ.


ಮತ್ತು ದೇವರ ವಾಕ್ಯವು ಪ್ರಬಲವಾಯಿತು. ಶಿಷ್ಯರ ಸಂಖ್ಯೆಯು ಯೆರೂಸಲೇವಿುನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತನಂಬಿಕೆಗೆ ಒಳಗಾಗುತ್ತಾ ಇದ್ದರು.


ಅದಕ್ಕೆ ಅನನೀಯನು - ಕರ್ತನೇ, ಆ ಮನುಷ್ಯನು ಯೆರೂಸಲೇವಿುನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ;


ಆದರೆ ಪ್ರಿಯರೇ, ಈ ರೀತಿಯಾಗಿ ನಾವು ಮಾತಾಡಿದರೂ ನೀವು ಇದಕ್ಕಿಂತ ಉತ್ತಮವಾಗಿಯೂ ರಕ್ಷಣಕರವಾಗಿಯೂ ಇರುವ ಸ್ಥಿತಿಯಲ್ಲಿದ್ದೀರೆಂದು ದೃಢವಾಗಿ ನಂಬಿದ್ದೇನೆ.


ಅವರು ನೀತಿ ಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದಿದ್ದರೆ ಮೇಲಾಗಿತ್ತು.


ಯೇಸು ಕ್ರಿಸ್ತನ ದಾಸನೂ ಯಾಕೋಬನ ತಮ್ಮನೂ ಆಗಿರುವ ಯೂದನು ತಂದೆಯಾದ ದೇವರಲ್ಲಿ ಪ್ರಿಯರಾದವರೂ ಯೇಸು ಕ್ರಿಸ್ತನಿಗಾಗಿ ಕಾಯಲ್ಪಟ್ಟವರೂ ಆಗಿರುವವರಿಗೆ ಬರೆಯುವದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು