Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:8 - ಕನ್ನಡ ಸತ್ಯವೇದವು J.V. (BSI)

8 ಹೀಗಿದ್ದರೂ ಈ ಜನರು ಸ್ವಪ್ನಾವಸ್ಥೆಯಲ್ಲಿರುವವರಂತೆ ಅದೇ ರೀತಿಯಾಗಿ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ, ಮಹಾಪದವಿಯವರನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ದುರ್ಬೋಧಕರು ಕೂಡ ಹಾಗೆಯೇ ವರ್ತಿಸುತ್ತಾರೆ. ಕನಸು ಕಾಣುವವರಂತೆ ತಮ್ಮ ಶರೀರವನ್ನು ಪಾಪಕಳಂಕದಿಂದ ಮಲಿನವಾಗಿಸಿಕೊಳ್ಳುತ್ತಾರೆ. ಪ್ರಭುವಿನ ಅಧಿಕಾರವನ್ನು ಅಸಡ್ಡೆಮಾಡುತ್ತಾರೆ. ಸ್ವರ್ಗನಿವಾಸಿಗಳನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿಮ್ಮ ಸಭೆಯಲ್ಲಿ ಪ್ರವೇಶಿಸಿರುವ ಜನರಿಗೂ ಇದೇ ರೀತಿಯಾಗುವುದು. ಅವರ ಕನಸುಗಳೇ ಅವರಿಗೆ ಮಾರ್ಗದರ್ಶಿಯಾಗಿವೆ. ಅವರು ಪಾಪಗಳಿಂದಲೇ ತಮ್ನನ್ನು ಮಲಿನ ಮಾಡಿಕೊಳ್ಳುತ್ತಾರೆ. ಅವರು ಪ್ರಭುವಿನ ಅಧಿಕಾರವನ್ನು ತಿರಸ್ಕರಿಸುತ್ತಾರೆ; ಪ್ರಭಾವದಿಂದ ಕೂಡಿದ ದೇವದೂತರ ವಿರುದ್ಧ ಕೆಟ್ಟದ್ದನ್ನು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹಾಗೆಯೇ ಈ ದುಃಸ್ವಪ್ನದವರೂ ಶರೀರವನ್ನು ಮಲಿನಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆಮಾಡುವವರೂ ದೇವದೂತರುಗಳನ್ನು ದೂಷಿಸುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಸೆಚ್ ತೆಂಚಿ ದರ್ಶನಾಚ್ ತೆಂಕಾ ವಾಟ್ ದಾಕ್ವುತ್ಯಾತ್ ಅಪ್ಲ್ಯಾ ಪಾಪಾನಿಚ್ ಅಪ್ನಾಕ್ ಅಶುದ್ದ್ ಕರುನ್ ಘೆತಾತ್. ತೆನಿ ಧನಿಯಾಚೊ ಅಧಿಕಾರ್ ತಿರಸ್ಕಾರ್ ಕರ್ತಾತ್, ಮೊಟ್ಯಾ ಮಹಿಮೆಚ್ಯಾ ದೆವಾಚ್ಯಾ ದುತಾಂಚ್ಯಾ ವಿರೊದ್ ಹೊವ್ನ್ ಬುರ್ಶೆಚ್ ಸಾಂಗ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:8
23 ತಿಳಿವುಗಳ ಹೋಲಿಕೆ  

ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.


ನೀವು ದೇವರ ದಾಸರಾಗಿದ್ದೀರಲ್ಲಾ. ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಸನ್ಮಾನಿಸಿರಿ.


ಪೌಲನು - ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿಯಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ ಅಂದನು.


ಮನಸ್ಸಿನಲ್ಲಿಯೂ ರಾಜನನ್ನು ದೂಷಿಸದಿರು, ಮಲಗುವ ಮನೆಯಲ್ಲಿಯೂ ಧನಿಕನನ್ನು ಬಯ್ಯದಿರು; ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸೀತು; ಪಕ್ಷಿಯು ಆ ವಿಷಯವನ್ನು ತಿಳಿಸೀತು.


ದೇವರನ್ನು ದೂಷಿಸಬಾರದು; ನಿಮ್ಮ ಜನರಲ್ಲಿ ಅಧಿಪತಿಯಾಗಿರುವವನನ್ನು ಶಪಿಸಬಾರದು.


ಯಾವನಾದರೂ ದೇವರ ಆಲಯವನ್ನು ಕೆಡಿಸಿದರೆ ದೇವರು ಅವನನ್ನು ಕೆಡಿಸುವನು. ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.


ಹೀಗಿರಲು ಈ ಮಾತನ್ನು ತಾತ್ಸಾರ ಮಾಡುವವನು ಮನುಷ್ಯನನ್ನು ತಿರಸ್ಕರಿಸುವದು ಮಾತ್ರವಲ್ಲದೆ ಪವಿತ್ರಾತ್ಮವರವನ್ನು ನಿಮಗೆ ದಯಪಾಲಿಸುವ ದೇವರನ್ನೂ ತಿರಸ್ಕರಿಸುತ್ತಾನೆ.


ಆದರೆ ನಮ್ಮ ಪಿತೃಗಳು ಅವನ ಮಾತುಗಳನ್ನು ಕೇಳುವದಕ್ಕೆ ಮನಸ್ಸಿಲ್ಲದವರಾಗಿ ಅವನನ್ನು ತಳ್ಳಿ ಬಿಟ್ಟು ತಿರಿಗಿ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು.


ಆದರೆ ತನ್ನ ಸ್ವಕುಲದವನಿಗೆ ಅನ್ಯಾಯಮಾಡುತ್ತಿದ್ದವನು - ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?


ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ಇವನು ನಮ್ಮ ಮೇಲೆ ದೊರೆತನಮಾಡುವದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದರು.


ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು ಧಿಕ್ಕರಿಸುವವನ ಕಣ್ಣನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.


ತಾಯಿಗೆ ಶುಭವನ್ನು ಕೋರದೆ ತಂದೆಯನ್ನು ಶಪಿಸುವ ಒಂದು ತರದವರುಂಟು.


ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಆರೋನರ ಬಳಿಗೆ ಬಂದು ಅವರಿಗೆ - ನಿವ್ಮಿುಂದ ಸಾಕಾಯಿತು; ಈ ಸಮೂಹದವರಲ್ಲಿ ಪ್ರತಿಯೊಬ್ಬನೂ ದೇವರಿಗೆ ಪ್ರತಿಷ್ಠಿತನೇ; ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನಲ್ಲವೇ; ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವದೇನು ಎಂದು ಹೇಳಿದರು.


ನೀವು ಇದರ ಹಣ್ಣನ್ನು ತಿಂದಾಗಲೇ ನಿಮ್ಮ ಕಣ್ಣುಗಳು ತೆರೆಯುವವು; ನೀವು ದೇವರಂತೆ ಆಗಿ ಒಳ್ಳೇದರ ಕೆಟ್ಟದ್ದರ ಭೇದವನ್ನು ಅರಿತವರಾಗುವಿರಿ; ಇದು ದೇವರಿಗೆ ಚೆನ್ನಾಗಿ ಗೊತ್ತುಂಟು ಅಂದಿತು.


ಅವರು ನಿಮ್ಮನ್ನು ಸಭಾಮಂದಿರಗಳ ಅಧ್ಯಕ್ಷರ ಮುಂದಕ್ಕೂ ಅಧಿಕಾರಿಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ಹಿಡುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರಕೊಡಬೇಕು? ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ.


ಆ ಮನೆ ಗುಡಿಸಿ ಅಲಂಕರಿಸಿದ್ದಾಗಿರುವದನ್ನು ಕಂಡು ಹೊರಟುಹೋಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು