Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:9 - ಕನ್ನಡ ಸತ್ಯವೇದವು J.V. (BSI)

9 ಆದರೆ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದಮಾಡಿದಾಗ ಅವನು ಸೈತಾನನ ಮೇಲೆ ದೂಷಣಾಭಿಪ್ರಾಯವನ್ನು ಹೇಳುವದಕ್ಕೆ ಧೈರ್ಯಗೊಳ್ಳದೆ - ಕರ್ತನು ನಿನ್ನನ್ನು ಖಂಡಿಸಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪ್ರಧಾನ ದೇವದೂತ ಮಿಕಾಯೇಲನೂ ಇಂಥ ದೂಷಣೆಯನ್ನು ಆಡಲಿಲ್ಲ. ಮೋಶೆಯ ಪಾರ್ಥಿವ ಶರೀರದ ವಿಷಯದಲ್ಲಿ ಸೈತಾನನೊಡನೆ ವಾಗ್ವಾದ ಮಾಡಿದಾಗಲೂ ಅಂಥ ದೂಷಣೆಯನ್ನು ಆಡಲು ಧೈರ್ಯಗೊಳ್ಳದೆ, “ಸರ್ವೇಶ್ವರ ನಿನ್ನನ್ನು ಖಂಡಿಸಲಿ,” ಎಂದಷ್ಟೇ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪ್ರಧಾನ ದೇವದೂತನಾದ ಮಿಕಾಯೇಲನೂ ಸಹ ಹೀಗೆ ಮಾಡಲಿಲ್ಲ. ಮೋಶೆಯ ದೇಹವು ಯಾರಿಗೆ ಸೇರಬೇಕೆಂಬುದರ ಬಗ್ಗೆ ಮಿಕಾಯೇಲನು ಸೈತಾನನ ಬಗ್ಗೆ ದೂಷಣೆ ಮಾಡಲು ಧೈರ್ಯಗೊಳ್ಳದೆ, “ಪ್ರಭುವು ನಿನ್ನನ್ನು ದಂಡಿಸುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು, ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ, ಅವನು ಸೈತಾನನನ್ನು ದೂಷಿಸುವುದಕ್ಕೆ ಧೈರ್ಯಗೊಳ್ಳದೆ, “ಕರ್ತದೇವರು ನಿನ್ನನ್ನು ಗದರಿಸಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮುಖ್ಯ್ ದೆವಾಚ್ಯಾ ದುತಾ ಮಿಂಗೆಲಾನ್ ಮೊಯ್ಜೆಚ್ಯಾ ಮಡ್ಯಾಚ್ಯಾ ವಿಶಯಾತ್ ಸೈತಾನಾಚ್ಯಾ ವಾಂಗ್ಡಾ ವಾದ್ ಖೆಳ್ತಾನಾ, ತೆನಿ ತೆಕಾ ಬರೆ ಬುರ್ಶೆ ಬೊಲುನ್ ತೆಕಾ ತೆಚಿ ಮರ್ಯಾದ್ ಕಾಡುಕ್ ಧೈರೊ ಕರುಕ್ ನಾ, ತೆನಿ ತೆಕಾ,“ಧನಿ ತುಕಾ ಗದ್ಮುಂದಿತ್,” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:9
16 ತಿಳಿವುಗಳ ಹೋಲಿಕೆ  

ಆಗ ಯೆಹೋವನ ದೂತನು ಸೈತಾನನಿಗೆ - ಸೈತಾನನೇ, ಯೆಹೋವನು ನಿನ್ನನ್ನು ಖಂಡಿಸಲಿ, ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ ಎಂದು ಹೇಳಿದನು.


ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಮಹಾಪದವಿಯವರ ಮೇಲೆ ದೂಷಣಾಭಿಪ್ರಾಯವನ್ನು ಹೇಳುವದಿಲ್ಲವಲ್ಲಾ.


ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪನ ಮೇಲೆ ಯುದ್ಧಮಾಡುವದಕ್ಕೆ ಹೊರಟರು. ಘಟಸರ್ಪನೂ ಅವನ ದೂತರೂ ಯುದ್ಧಮಾಡಿ ಸೋತುಹೋದರು,


ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ಮೀಕಾಯೇಲನು ಆ ಕಾಲದಲ್ಲಿ ಏಳುವನು; ಮೊಟ್ಟ ಮೊದಲು ಜನಾಂಗವು ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದಂಥ ಸಂಕಟವು ಸಂಭವಿಸುವದು; ಆಗ ನಿನ್ನ ಜನರೊಳಗೆ ಯಾರ ಹೆಸರುಗಳು [ಜೀವಬಾಧ್ಯರ] ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


ಮೋವಾಬ್ಯರ ದೇಶದಲ್ಲಿ ಬೇತ್ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ [ಯೆಹೋವನು] ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನವರೆಗೆ ಯಾರಿಗೂ ತಿಳಿಯದು.


(ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು.) ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನು ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ.


ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿವಸ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜನ ಸಂಗಡ [ಹೋರಾಡಿ]


ಅಪಕಾರಕ್ಕೆ ಅಪಕಾರವನ್ನು ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ಪ್ರಧಾನದೂತನ ಶಬ್ದದೊಡನೆಯೂ ದೇವರ ತುತೂರಿಧ್ವನಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು.


ಅಲ್ಲಿ ಹಾದುಹೋಗುವವರು ತಲೇ ಆಡಿಸಿ ಆಹಾ, ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ,


ದೇವರನ್ನು ದೂಷಿಸಬಾರದು; ನಿಮ್ಮ ಜನರಲ್ಲಿ ಅಧಿಪತಿಯಾಗಿರುವವನನ್ನು ಶಪಿಸಬಾರದು.


ನೀವು ಸ್ನೇಹಭಾವದಿಂದ ಸಹಾಯಮಾಡುವದಕ್ಕಾಗಿ ನನ್ನ ಬಳಿಗೆ ಬಂದಿರುವದಾದರೆ ನಿಮ್ಮೊಡನೆ ನನಗೆ ಐಕ್ಯಭಾವವಿರುವದು; ನಿರಪರಾಧಿಯಾದ ನನ್ನನ್ನು ನನ್ನ ವಿರೋಧಿಗಳಿಗೆ ಒಪ್ಪಿಸುವ ಕುಯುಕ್ತಿಯಿಂದ ಬಂದಿರುವದಾದರೆ ನಮ್ಮ ಪಿತೃಗಳ ದೇವರು ನಿಮ್ಮನ್ನು ನೋಡಿ ದಂಡಿಸಲಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು