Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:15 - ಕನ್ನಡ ಸತ್ಯವೇದವು J.V. (BSI)

15 ಇಗೋ, ನಾನು ಬಡಗಣ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇವಿುನ ಊರು ಬಾಗಲುಗಳ ಎದುರಿನಲ್ಲಿಯೂ ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇಗೋ, ಉತ್ತರದ ರಾಜ್ಯಗಳನ್ನೆಲ್ಲಾ ನಾನು ಕರೆಯುವೆನು; ಅವರು ಬಂದು ಜೆರುಸಲೇಮಿನ ಊರಬಾಗಿಲುಗಳ ಎದುರಿನಲ್ಲೂ ಅದರ ಎಲ್ಲ ಪೌಳಿಗೋಡೆಗಳ ಸುತ್ತಲೂ ಜುದೇಯದ ಎಲ್ಲ ನಗರಗಳಲ್ಲೂ ತಮ್ಮ ತಮ್ಮ ಸಿಂಹಾಸನಗಳನ್ನು ಹಾಕಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸ್ವಲ್ಪ ಸಮಯದಲ್ಲಿಯೇ ನಾನು ಉತ್ತರ ರಾಜ್ಯಗಳ ಎಲ್ಲಾ ಜನರನ್ನು ಕರೆಯುತ್ತೇನೆ” ಎಂದನು. ಮತ್ತೆ ಯೆಹೋವನು ಹೀಗೆ ಹೇಳಿದನು: “ಆ ದೇಶಗಳ ರಾಜರು ಬರುವರು. ಅವರು ಜೆರುಸಲೇಮಿನ ಹೆಬ್ಬಾಗಿಲಿನ ಹತ್ತಿರ ತಮ್ಮ ಆಸನಗಳನ್ನು ಹಾಕುವರು. ಅವರು ಜೆರುಸಲೇಮಿನ ಎಲ್ಲಾ ಕೋಟೆಗೋಡೆಗಳಿಗೆ ಮುತ್ತಿಗೆಹಾಕುವರು. ಅವರು ಯೆಹೂದ ಪ್ರದೇಶದ ಎಲ್ಲಾ ನಗರಗಳ ಮೇಲೆ ಧಾಳಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ ನಾನು ಉತ್ತರದಲ್ಲಿರುವ ರಾಜ್ಯಗಳ ಕುಲಗಳನ್ನೆಲ್ಲಾ ಕರೆಯುತ್ತೇನೆ. “ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ, ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:15
24 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಮರೆಮಾಡಿಸಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಹಾಕಿಸುವೆನು; ಅವನು ಈ ಕಲ್ಲುಗಳ ಮೇಲೆಯೇ ತನ್ನ ರತ್ನಗಂಬಳಿಯನ್ನು ಹಾಸಿಸುವನು.


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ನಾನು ಯೆರೂಸಲೇಮನ್ನು ಹಾಳುದಿಬ್ಬಗಳನ್ನಾಗಿಯೂ ನರಿಗಳ ಹಕ್ಕೆಯನ್ನಾಗಿಯೂ ಗೈದು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂವಿುಯನ್ನಾಗಿ ಮಾಡುವೆನು [ಎಂದು ಯೆಹೋವನು ಹೇಳಿದ್ದಾನಲ್ಲಾ].


ಇಗೋ, ಜನಾಂಗಗಳಿಗೆ ಅರುಹಿರಿ, ಮುತ್ತುವವರು ದೂರದೇಶದಿಂದ ಯೆರೂಸಲೇವಿುಗೆ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರುದ್ಧವಾಗಿ ದನಿಗೈಯುತ್ತಾರೆ, ಎಂದು ಪ್ರಚುರಪಡಿಸಿರಿ.


ನೇರ್ಗಲ್‍ಸರೆಚರ್, ಸಮ್ಗರ್‍ನೆಬೋ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್‍ಸರೆಚರ್, ಅಂತು ಬಾಬೆಲಿನ ಅರಸನ ಸಕಲ ಸರದಾರರೂ ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಆಸೀನರಾದರು.


ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.


ನಿಮ್ಮ ಪ್ರಿಯವಾದ ತಗ್ಗುಗಳಲ್ಲಿ ರಥಗಳು ತುಂಬಿದವು, ರಾಹುತರು ಬಾಗಿಲೆದುರಿಗೆ ವ್ಯೂಹಕಟ್ಟಿದರು.


ಚೀಯೋನಿನ ಸತಿಯರನ್ನೂ ಯೆಹೂದದ ಊರುಗಳ ಯುವತಿಯರನ್ನೂ ಕೆಡಿಸಿದರು.


ಆದಕಾರಣ ನನ್ನ ಉಗ್ರರೋಷಾಗ್ನಿಯು ಸುರಿದು ಯೆಹೂದದ ಊರುಗಳಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳುಹಾಳಾಗಿವೆ.


ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರವಿುಸಿ ಬೆಂಕಿಯಿಂದ ಸುಟ್ಟುಬಿಡುವರು; ಮತ್ತು ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂವಿುಯನ್ನಾಗಿ ಮಾಡುವೆನು.


ಯೆಹೋವನು ಇಂತೆನ್ನುತ್ತಾನೆ - ಜನಪಶುಗಳಿಲ್ಲದೆ ಹಾಳಾಗಿದೆ ಎಂದು ನೀವೆನ್ನುವ ಈ ಸ್ಥಳದಲ್ಲಿ, ಅಂದರೆ ಜನಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇವಿುನ ಬೀದಿಗಳಲ್ಲಿ ಹರ್ಷಧ್ವನಿ,


ಅವರು ಒಂದು ವೇಳೆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ ಕುಡಿಯಲಿಕ್ಕೂ ಒಲ್ಲದಿದ್ದರೆ ನೀನು ಅವರಿಗೆ ಹೀಗೆ ಹೇಳು - ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ನೀವು ಕುಡಿಯಲೇಬೇಕು.


ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.


ಆಹಾ, ಬಡಗಲಿಂದ ಒಂದು ಜನಾಂಗವು ಬರುತ್ತದೆ, ಮಹಾ ಜನವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ.


ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು; ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.


ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಬಡಗಲಿಂದ ವಿಪತ್ತನ್ನೂ ಘೋರನಾಶನವನ್ನೂ ಬರಮಾಡುವೆನು.


[ಚೀಯೋನೇ] ಕಣ್ಣೆತ್ತು, ಬಡಗಲಿಂದ ಬರುವವರನ್ನು ನೋಡು; ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡು ಎಲ್ಲಿ?


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಣ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇವಿುಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -


ಐಗುಪ್ತವೆಂಬ ಯುವತಿಯು ಅವಮಾನಕ್ಕೆ ಗುರಿಯಾಗುವಳು; ಬಡಗಲವರ ಕೈವಶವಾಗುವಳು.


ಉತ್ತರದೇಶದ ಸಕಲಪ್ರಭುಗಳೂ ಸಮಸ್ತ ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೆಗೊಂಡು ಖಡ್ಗಹತರ ಮಧ್ಯೆ ಸುನ್ನತಿಹೀನರಾಗಿ ಬಿದ್ದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.


ನಾನು ಬಡಗಣ ದಂಡನ್ನು ನಿಮ್ಮ ಕಡೆಯಿಂದ ದೂರ ತೊಲಗಿಸಿ ಹಾಳು ಬೆಗ್ಗಾಡಿಗೆ ಓಡಿಸಿ ಅದರ ಮುಂಭಾಗವನ್ನು ಮೂಡಣ ಸಮುದ್ರಕ್ಕೂ ಹಿಂಭಾಗವನ್ನು ಪಡುವಣ ಸಮುದ್ರಕ್ಕೂ ತಳ್ಳಿಬಿಡುವೆನು; ಆಹಾ, ಮಹತ್ಕಾರ್ಯಗಳನ್ನು ಮಾಡಿತು, ಅದರ [ಹೆಣಗಳ] ದುರ್ವಾಸನೆಯು ಏರುವದು, ಗಬ್ಬು ನಾರುವದು.


ಅನಂತರ ಕಪ್ಪು ಕುದುರೆಗಳು ಉತ್ತರದೇಶಕ್ಕೆ ಹೊರಟವು. ಬಿಳಿ ಕುದುರೆಗಳು ಅವುಗಳನ್ನು ಹಿಂಬಾಲಿಸಿದವು. ಮಚ್ಚೆ ಮಚ್ಚೆಯ ಕುದುರೆಗಳು ದಕ್ಷಿಣದೇಶಕ್ಕೆ ಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು