ಯೆರೆಮೀಯ 1:16 - ಕನ್ನಡ ಸತ್ಯವೇದವು J.V. (BSI)16 ನನ್ನ ಜನರು ನನ್ನನ್ನು ಬಿಟ್ಟದ್ದು, ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದ್ದಕ್ಕೆ ಅಡ್ಡಬಿದ್ದದ್ದು, ಈ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನನ್ನ ಸ್ವಜನರು ನನ್ನನ್ನೆ ತೊರೆದುಬಿಟ್ಟು, ಅನ್ಯದೇವತೆಗಳಿಗೆ ಬಲಿಯರ್ಪಿಸಿ, ತಮ್ಮ ಕೈಯಿಂದ ನಿರ್ಮಿಸಿದ ಮೂರ್ತಿಗಳಿಗೆ ಆರಾಧನೆ ಮಾಡುತ್ತಿದ್ದಾರೆ; ಇಂಥ ಅಧರ್ಮಕ್ಕೆಲ್ಲ ನಾನು ಅವರಿಗೆ ವಿಧಿಸುವ ದಂಡನೆಗಳನ್ನು ತಿಳಿಸುವೆನು, ಕೇಳು : ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ನನ್ನ ಜನರ ವಿರುದ್ಧ ನನ್ನ ನ್ಯಾಯನಿರ್ಣಯವನ್ನು ಘೋಷಿಸುವೆನು. ಅವರು ಕೆಟ್ಟ ಜನರು, ಅವರು ನನ್ನ ವಿರೋಧಿಗಳಾಗಿದ್ದಾರೆ. ನನ್ನ ಜನರು ನನ್ನನ್ನು ತ್ಯಜಿಸಿದ್ದಾರೆ. ಅವರು ನನ್ನನ್ನು ಹೇಗೆ ತ್ಯಜಿಸಿದರು? ಅವರು ಅನ್ಯದೇವರುಗಳಿಗೆ ಹೋಮ ಮಾಡಿದರು. ಅವರು ತಮ್ಮ ಕೈಗಳಿಂದಲೇ ಮಾಡಿದ ವಿಗ್ರಹಗಳನ್ನು ಪೂಜಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯುವೆನು. ಅಧ್ಯಾಯವನ್ನು ನೋಡಿ |