Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:2 - ಕನ್ನಡ ಸತ್ಯವೇದವು J.V. (BSI)

2 ಯೆಹೂದದ ಅರಸನೂ ಆಮೋನನ ಮಗನೂ ಆದ ಯೋಷೀಯನ ಆಳಿಕೆಯ ಹದಿಮೂರನೆಯ ವರುಷದಲ್ಲಿ ಯೆಹೋವನ ವಾಕ್ಯವು ಇವನಿಗೆ ಒದಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೂದದ ಅರಸನೂ, ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜುದೇಯದ ಅರಸನೂ ಅಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರುಷದಲ್ಲಿ ಸರ್ವೇಶ್ವರ ಸ್ವಾಮಿಯ ವಾಣಿ ಇವನಿಗೆ ಕೇಳಿಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೂದದಲ್ಲಿ ಆಮೋನನ ಮಗನಾದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನೊಂದಿಗೆ ಮಾತನಾಡಲು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೂದದ ಅರಸನೂ ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವ ದೇವರ ವಾಕ್ಯವು ಇವನಿಗೆ ಕೇಳಿಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:2
18 ತಿಳಿವುಗಳ ಹೋಲಿಕೆ  

ಯೆಹೂದದ ಅರಸನಾದ ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇವಿುನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕಂಡುಬಂದ ಯೆಹೋವನ ವಾಕ್ಯ.


ಯೆಹೋವನು ಅವಿುತ್ತೈಯ ಮಗನಾದ ಯೋನನಿಗೆ -


ಯೆಹೂದದ ಅರಸನಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ದಯಪಾಲಿಸಿದ ವಾಕ್ಯವು.


ಇದಲ್ಲದೆ ಯೆಹೋವನು - ಯೆರೆಮೀಯನೇ, ಏನು ನೋಡುತ್ತೀ ಎಂದು ನನ್ನನ್ನು ಕೇಳಿದನು, ಅದಕ್ಕೆ ನಾನು - ಚಚ್ಚರ ಮರದ ರೆಂಬೆಯನ್ನು ನೋಡುತ್ತೇನೆ ಅಂದೆನು.


ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


ಅವರು ಊಟಮಾಡುತ್ತಿರುವಾಗ ದೇವರ ಮನುಷ್ಯನನ್ನು ಹಿಂದಕ್ಕೆ ಕರತಂದ ಪ್ರವಾದಿಗೆ ಯೆಹೋವನು ಒಂದು ವಾಕ್ಯವನ್ನು ದಯಪಾಲಿಸಿದನು.


ನೀನು ಗ್ರಂಥ ಬರೆಯತಕ್ಕ ಸುರಳಿಯನ್ನು ತೆಗೆದುಕೊಂಡು ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು, ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.


ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳಿಕೆಯ ಹದಿಮೂರನೆಯ ವರುಷದಿಂದ ಈ ದಿನದವರೆಗೆ, ಇಪ್ಪತ್ತುಮೂರು ವರುಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸುತ್ತಿದ್ದಾನೆ; ಅದನ್ನು ನಿಮಗೆ ಸಾವಕಾಶಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.


ಆದರೆ ದೇಶದ ಜನರು ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.


ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ವೇದಿಯನ್ನು ಕುರಿತು - ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬೊಬ್ಬನು ಹುಟ್ಟುವನು; ಅವನು ನಿನ್ನ ಮೇಲೆ ಧೂಪಸುಡುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ ಅಂದನು.


ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಮೋನನು ಅರಸನಾದನು.


ಯೋಷೀಯನು ತನ್ನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ಅಚಲ್ಯನ ಮಗನೂ ಮೆಷುಲ್ಲಾಮನ ಮೊಮ್ಮಗನೂ ಆದ ಶಾಫಾನನೆಂಬ ಲೇಖಕನನ್ನು ಕರೆದು ಅವನಿಗೆ -


ಮತ್ತೆ ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು - ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೋಡಿದಿಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ಸೂಳೆಯಾಗಿ ನಡೆದಳಷ್ಟೆ.


ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದ ಮೇಲೆ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -


ಪೆತೂವೇಲನ ಮಗನಾದ ಯೋವೇಲನಿಗೆ ಯೆಹೋವನು ದಯಪಾಲಿಸಿದ ವಾಕ್ಯವು.


ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಕಾಲದಲ್ಲಿ ಕೂಷಿಯ ಮಗನೂ ಗೆದಲ್ಯನ ಮೊಮ್ಮಗನೂ ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವನು ದಯಪಾಲಿಸಿದ ವಾಕ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು