ಯೆರೆಮೀಯ 1:5 - ಕನ್ನಡ ಸತ್ಯವೇದವು J.V. (BSI)5 ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವದಕ್ಕೆ ಮುಂಚೆ ನಿನ್ನನ್ನು ತಿಳಿದಿದ್ದೆನು; ನೀನು ಉದರದಿಂದ ಬರುವದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು; ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇವಿುಸಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ನಿನ್ನನ್ನು ತಾಯಿಯ ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆಯೇ ನಿನ್ನನ್ನು ನಾನು ತಿಳಿದಿದ್ದೇ; ನೀನು ಉದರದಿಂದ ಹೊರಬರುವುದಕ್ಕೆ ಮೊದಲೇ ನಿನ್ನನ್ನು ಪವಿತ್ರೀಕರಿಸಿದ್ದೇ; ನಿನ್ನನ್ನು ರಾಷ್ಟ್ರಗಳಿಗೆ ಪ್ರವಾದಿಯನ್ನಾಗಿ ನೇಮಿಸಿದ್ದೇನೆ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ನಾನು ನಿನ್ನನ್ನು ನಿನ್ನ ತಾಯಿಯ ಗರ್ಭದಲ್ಲಿ ರೂಪಿಸುವ ಮುಂಚೆಯೇ ನಿನ್ನನ್ನು ಬಲ್ಲವನಾಗಿದ್ದೆನು. ನೀನು ಹುಟ್ಟುವದಕ್ಕಿಂತ ಮುಂಚೆಯೇ ನಾನು ನಿನ್ನನ್ನು ಒಂದು ವಿಶೇಷವಾದ ಕೆಲಸಕ್ಕೆ ಅಂದರೆ ಜನಾಂಗಗಳಿಗೆ ಪ್ರವಾದಿಯನ್ನಾಗಿ ಆರಿಸಿಕೊಂಡಿದ್ದೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ನಾನು ನಿನ್ನನ್ನು ತಾಯಿಯ ಗರ್ಭದಲ್ಲಿ ನಿರ್ಮಿಸುವುದಕ್ಕಿಂತ ಮುಂಚೆಯೇ ನಿನ್ನನ್ನು ತಿಳಿದಿದ್ದೆನು. ನೀನು ಹುಟ್ಟುವುದಕ್ಕಿಂತ ಮುಂಚೆ ನಿನ್ನನ್ನು ಪ್ರತಿಷ್ಠಿಸಿದ್ದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯಾಗಿ ನೇಮಿಸಿದ್ದೇನೆ.” ಅಧ್ಯಾಯವನ್ನು ನೋಡಿ |