Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:8 - ಕನ್ನಡ ಸತ್ಯವೇದವು J.V. (BSI)

8 ಅವರಿಗೆ ಅಂಜಬೇಡ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರಿಗೆ ಅಂಜಬೇಡ; ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗೆ ಇರುತ್ತೇನೆ; ಇದು ಸರ್ವೇಶ್ವರನಾದ ನನ್ನ ಮಾತು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಾರಿಗೂ ನೀನು ಹೆದರಬೇಡ, ನಾನೇ ನಿನ್ನ ಜೊತೆ ಇದ್ದೇನೆ. ನಾನು ನಿನ್ನನ್ನು ಕಾಪಾಡುತ್ತೇನೆ. ಈ ಮಾತನ್ನು ಯೆಹೋವನಾದ ನಾನೇ ಹೇಳುತ್ತಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರಿಗೆ ಭಯಪಡಬೇಡ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಎಂದು ಯೆಹೋವ ದೇವರಾದ ನಾನು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:8
31 ತಿಳಿವುಗಳ ಹೋಲಿಕೆ  

ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನು.


ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುತ್ತಾನೆ ಎಂದು ಹೇಳಿದನು.


ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ. ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವದು, ಹುಳವು ಅವರನ್ನು ಉಣ್ಣೆಯಂತೆ ಮೆದ್ದುಬಿಡುವದು;


ನೀವು ಶೂರರಾಗಿ ಧೈರ್ಯದಿಂದಿರ್ರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವದಿಲ್ಲ, ಅಪಜಯಕ್ಕೆ ಗುರಿಪಡಿಸುವದೇ ಇಲ್ಲ ಎಂದು ಹೇಳಿದನು.


ಪೇತ್ರ ಯೋಹಾನರು ಧೈರ್ಯದಿಂದ ಮಾತಾಡುವದನ್ನು ಆ ಸಭಿಕರು ನೋಡಿ ಅವರು ಶಾಸ್ತ್ರಾಭ್ಯಾಸ ಮಾಡದ ಸಾಧಾರಣರೆಂದು ತಿಳಿದು ಆಶ್ಚರ್ಯಪಟ್ಟರು.


ಯೆಹೋವನು ತಾನೇ ನಿನ್ನ ಮುಂದುಗಡೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವದೇ ಇಲ್ಲ, ಕೈಬಿಡುವದಿಲ್ಲ; ಅಂಜಬೇಡ, ಧೈರ್ಯದಿಂದಿರು ಎಂದು ಹೇಳಿದನು.


ಅದಕ್ಕೆ ದೇವರು - ನಾನೇ ನಿನ್ನ ಸಂಗಡ ಇರುವೆನು; ಮತ್ತು ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ; ನಿನ್ನನ್ನು ಕಳುಹಿಸಿದವನು ನಾನೇ ಎಂಬದಕ್ಕೆ ಇದೇ ನಿನಗೆ ಗುರುತಾಗಿರುವದು ಅಂದನು.


ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡು ಮಾಡುವದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ ಎಂದು ಹೇಳಿದನು.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು; ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಣುಗಿಸವು; ಉರಿಯಲ್ಲಿ ನಡೆಯುವಾಗ ನೀನು ಕಂದದಿರುವಿ, ಜ್ವಾಲೆಯು ನಿನ್ನನ್ನು ದಹಿಸದು.


ನಾನು ನಿನ್ನನ್ನು ಇಸ್ರಾಯೇಲ್ ಜನರ ಕೈಯೊಳಗಿಂದಲೂ ಅನ್ಯಜನರ ಕೈಯೊಳಗಿಂದಲೂ ಬಿಡಿಸುವೆನು.


ಕರ್ತನೇ, ಈಗ ನೀನು ಅವರ ಬೆದರಿಸುವಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ಉಂಟಾಗುವಂತೆ ನಿನ್ನ ಕೈ ಚಾಚುತ್ತಿರುವಲ್ಲಿ ನಿನ್ನ ದಾಸರು ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು ಅಂದರು.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ಮರೆಯಾಗಿರುವ ಯಾವದೂ ವ್ಯಕ್ತವಾಗದೆ ಇರುವದಿಲ್ಲ; ಹೊರಪಡದ ರಹಸ್ಯವೂ ಇಲ್ಲ.


ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು; ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತಾವಮಾನಕ್ಕೆ ಒಳಗಾಗುವರು.


ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಕಂಗೆಡಬೇಡ; ಕಂಗೆಟ್ಟರೆ ನಾನೂ ನಿನ್ನನ್ನು ಅವರ ಮುಂದೆ ಕಂಗೆಡಿಸುವೆನು.


ನಾನೇ, ನಾನೇ ನಿನ್ನನ್ನು ಸಂತೈಸುವವನಾಗಿರುವಲ್ಲಿ ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ಆ ಸತ್ಯಾರ್ಥದ ನಿವಿುತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ, ಅದರ ವಿಷಯದಲ್ಲಿ ಧೈರ್ಯವಾಗಿ ಮಾತಾಡುವ ಹಂಗಿನಲ್ಲಿದ್ದೇನೆ; ಹಾಗೆಯೇ ನಾನು ಮಾತಾಡಬೇಕೆಂದು ನನಗೋಸ್ಕರ ಬೇಡಿಕೊಳ್ಳಿರಿ.


ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು.


ಯಾರೂ ಅದನ್ನು ಹೆದರಿಸರು. ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿ ಚದರಿಸಿದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು, ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ವಿುತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವದಿಲ್ಲ.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ -


ನೀವು ಹೆದರಿರುವ ಬಾಬೆಲಿನ ಅರಸನಿಗೆ ಹೆದರಬೇಡಿರಿ; ಅವನಿಗೆ ಅಂಜದಿರಿ; ನಾನು ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಿಮ್ಮೊಂದಿಗಿದ್ದೇನಲ್ಲಾ. ಇದು ಯೆಹೋವನಾದ ನನ್ನ ನುಡಿ.


ಅರಸೇ, ನಾವು ಸೇವಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಆವಿಗೆಯೊಳಗಿಂದ, ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.


ಅದಕ್ಕೆ ಅವನು - ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು