Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:1 - ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ ವಂಶದವರೇ, ಯೆಹೋವನು ನಿಮಗೆ ನುಡಿಯುವ ಮಾತನ್ನು ಕೇಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲ್ ವಂಶದವರೇ, ಯೆಹೋವನು ನಿಮಗೆ ನುಡಿಯುವ ಮಾತನ್ನು ಕೇಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲ್ ವಂಶದವರೇ, ಸರ್ವೇಶ್ವರ ಸ್ವಾಮಿ ನಿಮಗೆ ನುಡಿಯುವ ಮಾತನ್ನು ಕೇಳಿರಿ; ಅವರು ಹೇಳುವುದು ಇದು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲ್ ವಂಶದವರೇ, ಯೆಹೋವನ ಮಾತುಗಳನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲಿನ ವಂಶದವರೇ, ಯೆಹೋವ ದೇವರು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:1
16 ತಿಳಿವುಗಳ ಹೋಲಿಕೆ  

ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನವ್ಮಿುಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ನಿಜವಾಗಿ ದೇವರ ವಾಕ್ಯವೇ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.


ಈಗ ಯೆಹೋವನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ವಿರುದ್ಧವಾಗಿ ಪ್ರವಾದನೆ ಮಾಡಬೇಡ, ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯೆತ್ತಬೇಡ ಎಂದು ನೀನು ಹೇಳಿದ ಕಾರಣ


ಇಸ್ರಾಯೇಲ್ಯರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದಹಾಕಿದ್ದಾನೆ. ಏಕಂದರೆ ಪ್ರೀತಿ ಸತ್ಯತೆ ದೇವಜ್ಞಾನಗಳು ದೇಶದಲ್ಲಿಲ್ಲ;


ಯೆಹೂದ್ಯರಲ್ಲಿ ಉಳಿದವರೇ, ಯೆಹೋವನ ವಾಕ್ಯವನ್ನು ಈಗ ಕೇಳಿರಿ; ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀವು ಐಗುಪ್ತಕ್ಕೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವದಾದರೆ


ದಾವೀದನ ಸಿಂಹಾಸನಾರೂಢನಾದ ಯೆಹೂದದ ಅರಸನೇ, ಯೆಹೋವನ ಮಾತನ್ನು ಕೇಳು; ನಿನ್ನ ಸೇವಕರೂ ಈ ಬಾಗಿಲುಗಳಲ್ಲಿ ಸೇರುವ ನಿನ್ನ ಪ್ರಜೆಗಳೂ ಕೇಳಲಿ.


ಯಾಕೋಬನ ಮನೆತನವೇ, ಇಸ್ರಾಯೇಲ್ ವಂಶದ ಸಕಲ ಗೋತ್ರಗಳೇ, ಯೆಹೋವನ ವಾಕ್ಯವನ್ನು ಕೇಳಿರಿ;


ಆದಕಾರಣ ಯೆರೂಸಲೇವಿುನ ಈ ಜನರನ್ನಾಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ,


ಸೊದೋವಿುನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ!


[ಆತನು ಆಜ್ಞಾಪಿಸುವದೇನಂದರೆ - ] ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ, ಕೇಳಿರಿ.


ಅದಕ್ಕೆ ಮೀಕಾಯೆಹುವು - ಅದಿರಲಿ, ಯೆಹೋವನ ವಾಕ್ಯವನ್ನು ಕೇಳು. ಯೆಹೋವನು ತನ್ನ ಸಿಂಹಾಸನದ ಮೇಲೆ ಕೂತುಕೊಂಡದ್ದನ್ನೂ ಪರಲೋಕ ಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆನು.


ಏಕಂದರೆ ಸಕಲಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು ಎಂದು ಯೆಹೋವನು ಅನ್ನುತ್ತಾನೆ.


ಯೆಹೋವನು ಹೀಗೆ ಹೇಳುತ್ತಾನೆ - ಜನಾಂಗಗಳ ಆಚರಣೆಯನ್ನು ಅಭ್ಯಾಸಿಸದಿರಿ, ಜನಾಂಗಗಳು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿರಿ.


ಹೀಗಿರಲು ದೇವರನ್ನು ಯಾರಿಗೆ ಹೋಲಿಸೀರಿ? ಯಾವ ರೂಪವನ್ನು ಆತನಿಗೆ ಸಮಮಾಡೀರಿ?


ಇಸ್ರಾಯೇಲ್ಯರ ಅರಸನೂ ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಆದಿ, ಅಂತವೂ ನಾನೇ; ನಾನು ಹೊರತು ಯಾವ ದೇವರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು