Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:10 - ಕನ್ನಡ ಸತ್ಯವೇದವು J.V. (BSI)

10 ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಶಾಶ್ವತರಾಜನೂ ಆಗಿದ್ದಾನೆ; ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:10
69 ತಿಳಿವುಗಳ ಹೋಲಿಕೆ  

ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ನೀನು ಮಹಾಭಯಂಕರನು; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?


ಆತನ ಸಿಟ್ಟಿಗೆ ಯಾರು ತಡೆದಾರು? ಆತನ ರೋಷಾಗ್ನಿಗೆ ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ, ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.


ನನ್ನ ಮನಸ್ಸು ದೇವರಿಗಾಗಿ, ಚೈತನ್ಯ ಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?


ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಇನ್ನು ಕಾಣಿಸದ ಹಾಗಾದವು.


ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಕೆಯುಳ್ಳ ದೇವರೇ, ನನ್ನನ್ನು ವಿಮೋಚಿಸಿದ್ದೀ.


ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.


ಆಗ ಆತನಿಗೆ ಸಿಟ್ಟೇರಿದ್ದರಿಂದ ಭೂವಿುಯು ಗಡಗಡನೆ ಕಂಪಿಸಿತು; ಪರ್ವತಗಳ ಬುಡಗಳು ನಡುಗಿ ಕದಲಿದವು.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವದು ಭಯಂಕರವಾದದ್ದು.


ಸರ್ವಯುಗಗಳ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಏಕದೇವರಿಗೆ ಯುಗಯುಗಾಂತರಗಳಲ್ಲಿಯೂ ಮಾನಪ್ರಭಾವಗಳಿರಲಿ. ಆಮೆನ್.


ನಾವು ನಿಮ್ಮಲ್ಲಿಗೆ ಬಂದಾಗ ನೀವು ಎಂಥ ಮನಸ್ಸಿನಿಂದ ನಮ್ಮ ಬೋಧನೆಯನ್ನು ಕೇಳಿದಿರೋ ಅದನ್ನು ಕುರಿತು ಅಲ್ಲಿಯ ಜನರು ತಾವೇ ಹೇಳುತ್ತಾರೆ. ಅದು ಮಾತ್ರವಲ್ಲದೆ ನೀವು ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂತಲೂ


ಜನರೇ, ನೀವು ಮಾಡುವದು ಇದೇನು? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ ಅಗಸನ ಚೌಳಿಗೂ ಸಮಾನನಾಗಿದ್ದಾನೆ;


ಆತನು ನಿಂತುಕೊಳ್ಳಲು ಭೂವಿುಯು ಕಂಪಿಸುತ್ತದೆ; ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಗಳು ಕುಸಿದುಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವದು.


ಬೆಂಕಿಗೆ ಕರಗಿದ ಮೇಣದಂತೆಯೂ ಜರಿಯಲ್ಲಿ ಹೊಯ್ದ ನೀರಿನ ಹಾಗೂ ಪರ್ವತಗಳು ಆತನ ಹೆಜ್ಜೆಗೆ ಕರಗಿ ಹರಿಯುತ್ತವೆ, ತಗ್ಗುಗಳು ಸೀಳಿಹೋಗುತ್ತವೆ.


ಭೂವಿು, ಆಕಾಶ, ಸಾಗರ, ಚರಾಚರ ಇವುಗಳನ್ನು ನಿರ್ಮಿಸಿದವನೂ ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ


ನಿನ್ನ ರಾಜ್ಯವು ಶಾಶ್ವತವಾಗಿದೆ; ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವದು.


ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು.


ಆತನು ದೃಷ್ಟಿಸಿದ ಮಾತ್ರದಿಂದಲೇ ಭೂವಿುಯು ಕಂಪಿಸುತ್ತದೆ; ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ.


ಆತನ ವಿುಂಚುಗಳು ಲೋಕವನ್ನು ಬೆಳಗಿಸಿದವು; ಭೂವಿುಯು ಅದನ್ನು ಕಂಡು ನಡುಗಿತು.


ಪೂರ್ವದಿಂದಲೂ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಅನಾದಿಯಿಂದ ನೀನು ಇದ್ದೀ.


ನಿನ್ನ ಕೋಪದ ಬಲವನ್ನೂ ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?


ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. [ಆದರೆ ಈಗ] ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿ ಮಾಡುತ್ತೇನೆ.


ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ವಿುಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂವಿುಯು ಅಲ್ಲಾಡಿ ಕಂಪಿಸಿತು.


ಭೂಲೋಕವನ್ನು ಸ್ಥಳದೊಳಗಿಂದ ಕದಲಿಸಿ ಅದರ ಸ್ತಂಭಗಳನ್ನು ನಡುಗಿಸುತ್ತಾನೆ.


ಇಸ್ರಾಯೇಲ್ಯರಿಗೆ ಬಹುಕಾಲದವರೆಗೆ ನಿಜವಾದ ದೇವರೂ ಬೋಧಿಸುವ ಯಾಜಕರೂ ಧರ್ಮಶಾಸ್ತ್ರವೂ ಇರಲಿಲ್ಲ.


ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು - ಯೆಹೋವನೇ ದೇವರು, ಯೆಹೋವನೇ ದೇವರು ಎಂದು ಕೂಗಿದರು.


ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.


ದಾವೀದನು - ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಸಿಕ್ಕುವದೇನೆಂದು ಹೇಳಿದಿರಿ ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಲು


ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶದಿಂದ ಹನಿ ಬಿದ್ದಿತು; ಮೇಘಮಂಡಲವು ಮಳೆಗರೆಯಿತು.


ಬೆಂಕಿಯ ಜ್ವಾಲೆಯೊಳಗಿಂದ ಮಾತಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಬೇರೆ ಯಾರು ಕೇಳಿ ಬದುಕಿದರು? ಹೀಗಿರುವದರಿಂದ ನಾವು ಯಾಕೆ ಸಾಯಬೇಕು?


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ಆಗ ಮಹಾಯಾಜಕನು - ನಿನಗೆ ಜೀವಸ್ವರೂಪನಾದ ದೇವರ ಆಣೆಯನ್ನು ಇಡುತ್ತೇನೆ; ನೀನು ದೇವಕುಮಾರನಾದ ಕ್ರಿಸ್ತನು ಹೌದೋ ಅಲ್ಲವೋ ಎಂಬದನ್ನು ನಮಗೆ ಹೇಳಬೇಕು ಎಂದು ಅನ್ನಲಾಗಿ ಯೇಸು -


ನೀನು ಬರಬೇಕಾಗಿರುವ ಕ್ರಿಸ್ತನು, ಜೀವಸ್ವರೂಪನಾದ ದೇವರ ಕುಮಾರನು ಎಂದು ಉತ್ತರಕೊಟ್ಟನು.


ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತವೆ; ಅತಿವೃಷ್ಟಿಯು ಹೊಯ್ದುಕೊಂಡು ಹೋಗುತ್ತದೆ; ಸಾಗರವು ಆರ್ಭಟಿಸಿ ಕೈಗಳನ್ನು ಮೇಲಕ್ಕೆತ್ತುತ್ತದೆ.


ಯೆಹೋವನು ತನ್ನ ಸೈನ್ಯದ ಮುಂದೆ ದನಿಗೈಯುತ್ತಾನೆ; ಆತನ ದಂಡು ಬಹು ದೊಡ್ಡದು; ತನ್ನ ಮಾತನ್ನು ನೆರವೇರಿಸಿಕೊಳ್ಳುವಾತನು ಬಲಿಷ್ಟನಾಗಿದ್ದಾನೆ; ಯೆಹೋವನ ದಿನವು ಮಹತ್ತರವೂ ಅತಿ ಭಯಂಕರವೂ ಆಗಿದೆ; ಅದನ್ನು ತಾಳಿಕೊಳ್ಳುವವರು ಯಾರು?


ಸಕಲಜನಾಂಗ ಕುಲಭಾಷೆಗಳವರು ಅವನನ್ನು ಸೇವಿಸಲೆಂದು ಅವನಿಗೆ ದೊರೆತನವೂ ಘನತೆಯೂ ರಾಜ್ಯವೂ ಕೊಡೋಣವಾದವು; ಅವನ ಆಳಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು; ಅವನ ರಾಜ್ಯವು ಎಂದಿಗೂ ಅಳಿಯದು.


ನಾನಾಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯ ಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳಿಕೆಯು ಶಾಶ್ವತವಾಗಿರುವದು;


ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. ಆಗ ನಾನು ಪರಾತ್ಪರನನ್ನು ಕೊಂಡಾಡಿ ಸದಾ ಜೀವಿಸುವಾತನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ನಿಲ್ಲುವದು;


ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳಿಕೆಯು ತಲತಲಾಂತರಕ್ಕೂ ನಿಲ್ಲುವದು.


ಯೆಹೋವನ ಭಾರ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಭಾರವಾಗಿರುವದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆಕೆಳಗು ಮಾಡಿದ್ದೀರಷ್ಟೆ.


ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.


ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.


ಕರ್ತನು ನುಡಿದನು; ಶುಭವಾರ್ತೆಯನ್ನು ಪ್ರಸಿದ್ಧಪಡಿಸುವ ಸ್ತ್ರೀ ಸಮೂಹವು ಎಷ್ಟೋ ದೊಡ್ಡದು.


ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲವೃಕ್ಷವನ್ನು ನೆಟ್ಟು ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.


ಭೂಲೋಕದ ಜನರೆಲ್ಲರೂ ಯೆಹೋವನ ಹೊರತು ಬೇರೆ ದೇವರಿಲ್ಲವೆಂಬದನ್ನು ತಿಳಿದುಕೊಳ್ಳುವಂತೆ ಆತನು ಅವಶ್ಯವಿರುವಾಗೆಲ್ಲಾ ತನ್ನ ಸೇವಕನ ಮತ್ತು ಪ್ರಜೆಗಳಾದ ಇಸ್ರಾಯೇಲ್ಯರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.


ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿದ್ದನು; ಆತನು ಸದಾಕಾಲವೂ ಅರಸನಾಗಿ ಕೂತಿರುವನು.


ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂವಿುಯು ಕಂಪಿಸಿತು; ಮೇಘಮಂಡಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿಬೆಟ್ಟವು ಕದಲಿತು.


ಬೆಟ್ಟಗಳು ಉಂಟಾಗುವದಕ್ಕಿಂತ, ಭೂವಿುಯೂ ಅದರ ದೇಶಗಳೂ ನಿರ್ಮಾಣವಾಗುವದಕ್ಕಿಂತ ಮುಂಚಿನಿಂದ ಯುಗಯುಗಾಂತರಗಳಲ್ಲಿಯೂ ನೀನೇ ದೇವರು.


ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದುದುರುವ ತುಂತುರಿನಂತೆಯೂ ತ್ರಾಸಿನ ತಟ್ಟೆಯ ದೂಳಿನ ಹಾಗೂ ಇರುತ್ತವೆ; ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ.


ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತುಹೋಗಿರುವವಾದದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಮೇಲೆ ಆಣೆಯಿಡುವನು.


ಯೆಹೋವನ ಜೀವದಾಣೆ ಎಂದು ಸತ್ಯನ್ಯಾಯ ಧರ್ಮಾನುಸಾರವಾಗಿ ನೀನು ಪ್ರಮಾಣಮಾಡಿದರೆ ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು.


ಪರ್ವತಗಳನ್ನು ನೋಡಿದೆನು, ಆಹಾ, ನಡುಗುತ್ತಿದ್ದವು, ಎಲ್ಲಾ ಗುಡ್ಡಗಳೂ ಅಲ್ಲಕಲ್ಲೋಲವಾಗಿದ್ದವು.


ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂವಿುಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ.


ದೇಶವೆಲ್ಲಾ ನೊಂದು ನಡುಗುತ್ತದೆ; ಏಕಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.


ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿರುತ್ತಾನೆಂಬದೂ ಆತನು ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು ಇವರನ್ನೆಲ್ಲಾ ನಿಮ್ಮ ಮುಂದೆ ತಪ್ಪದೆ ಹೊರಡಿಸುವನೆಂಬದೂ


ಯೆಹೋವಾ, ಮಹಿಮಪ್ರತಾಪ ವೈಭವ ಪರಾಕ್ರಮಪ್ರಭಾವಗಳು ನಿನ್ನವು; ಭೂಮ್ಯಾಕಾಶಗಳಲ್ಲಿರುವದೆಲ್ಲಾ ನಿನ್ನದೇ. ಯೆಹೋವನೇ, ರಾಜ್ಯವು ನಿನ್ನದು; ನೀನು ಮಹೋನ್ನತನಾಗಿ ಸರ್ವವನ್ನೂ ಆಳುವವನಾಗಿರುತ್ತೀ.


ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯತೀರಿಸುವವನು; ಆತನು ಜನಾಂಗಗಳಿಗೆ ಸತ್ಯವಾಗಿಯೇ ತೀರ್ಪುಕೊಡುವನು.


ದೇವರೇ, ನೀನು ಮೊದಲಿಂದಲೂ ನನ್ನ ಅರಸನೂ ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡಿಸಿದಾತನೂ ಆಗಿದ್ದೀಯಲ್ಲವೇ?


ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು. ಆತನ ಪ್ರಜೆಯೂ ಆತನು ಪಾಲಿಸುವ ಹಿಂಡೂ ಆಗಿದ್ದೇವೆ.


ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ ಭೂವಿುಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ; ಆತನು ದಣಿದು ಬಳಲುವದಿಲ್ಲ; ಆತನ ವಿವೇಕವು ಪರಿಶೋಧನೆಗೆ ಅಗಮ್ಯ.


ಆತನು ಉದ್ಧರಿಸುವವನೂ ರಕ್ಷಿಸುವವನೂ ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡಿಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಕೈಯಿಂದ ತಪ್ಪಿಸಿದನು.


ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂವಿುಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲವೂ ತಲ್ಲಣಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು