Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:11 - ಕನ್ನಡ ಸತ್ಯವೇದವು J.V. (BSI)

11 ನೀವು ಅವುಗಳಿಗೆ - ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂವಿುಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಭೂಮ್ಯಾಕಾಶಗಳನ್ನು ಸೃಷ್ಟಿಸದ ದೇವರುಗಳು ಭೂಮಿಯ ಮೇಲಿಂದಲೂ ಆಕಾಶದ ಕೆಳಗಿನಿಂದಲೂ ಅಳಿದುಹೋಗುವುವು” ಎಂದು ನೀವು ಆ ಜನಾಂಗಗಳಿಗೆ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಹೇಳುತ್ತಾನೆ, “ಈ ಸಂದೇಶವನ್ನು ಆ ಜನರಿಗೆ ಹೇಳು: ‘ಆ ಸುಳ್ಳುದೇವರುಗಳು ಭೂಲೋಕವನ್ನೂ ಪರಲೋಕವನ್ನೂ ಸೃಷ್ಟಿ ಮಾಡಿಲ್ಲ. ಆ ಸುಳ್ಳುದೇವರುಗಳನ್ನು ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನೀವು ಅವರಿಗೆ ಹೀಗೆ ಹೇಳಬೇಕು: ‘ಆಕಾಶಗಳನ್ನೂ ಭೂಮಿಯನ್ನೂ ಉಂಟು ಮಾಡದ ದೇವರುಗಳು, ಭೂಮಿಯ ಮೇಲಿನಿಂದಲೂ ಈ ಆಕಾಶದ ಕೆಳಗಿನಿಂದಲೂ ನಾಶವಾಗುವುವು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:11
14 ತಿಳಿವುಗಳ ಹೋಲಿಕೆ  

ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.


ವಿಗ್ರಹಗಳು ಸಂಪೂರ್ಣವಾಗಿ ಹೋಗಿಬಿಡುವವು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬಾರವು; ಅಲ್ಲದೆ ಪ್ರವಾದಿಗಳನ್ನೂ ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.


ಯೆಹೋವನು ಅವರಿಗೆ ಭಯಂಕರವಾಗುವನು; ಲೋಕದ ದೇವರುಗಳನ್ನೆಲ್ಲಾ ಕ್ಷಯಿಸಿಬಿಡುವನು; ಸಮಸ್ತ ಜನರು, ಅಂದರೆ ಸಮುದ್ರ ಪ್ರಾಂತದ ನಿವಾಸಿಗಳಾದ ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ನೀನು ಕೋಪಗೊಂಡು ಅವರನ್ನು ಹಿಂದಟ್ಟಿ ಅವರು ನಿನ್ನ ಕೈಕೆಲಸವಾಗಿರುವ ಆಕಾಶದ ಕೆಳಗೆ ಉಳಿಯದಂತೆ ಅಳಿಸಿಬಿಡುವಿ.


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದು ಹೋಗುವವು;


ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧನದಲ್ಲಿಟ್ಟನು.


ಮುಂದಿನ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆಯೂ ಕೈಗಳೂ ಕಡಿಯಲ್ಪಟ್ಟು ಹೊಸ್ತಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಯೆಹೋವನ ಮಂಜೂಷದ ಮುಂದೆ ಬಿದ್ದಿತ್ತು;


ನಾನು ನಿನ್ನ ಧರ್ಮವನ್ನು ಬೈಲಿಗೆ ತರುವೆನು, ನಿನ್ನ ಕಾರ್ಯಗಳೇನೋ ನಿನಗೆ ನಿಷ್ಪ್ರಯೋಜನ.


ನಾನು ಐಗುಪ್ತದ ದೇವಾಲಯಗಳಲ್ಲಿ ಬೆಂಕಿಹೊತ್ತಿಸುವೆನು, ಅವನು ಅವುಗಳನ್ನು ಸುಟ್ಟು ದೇವತೆಗಳನ್ನು ಸೆರೆ ಒಯ್ಯುವನು; ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ ಅವನು ಐಗುಪ್ತದೇಶವನ್ನು ಸುತ್ತಿಕೊಳ್ಳುವನು; ಸಮಾಧಾನವಾಗಿ ಅಲ್ಲಿಂದ ಹೊರಟು ಹೋಗುವನು.


ಐಗುಪ್ತದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ ಐಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು.


ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಜದೆ ಹೀಗೆ ಸಾರಿರಿ - ಬಾಬೆಲ್ ಶತ್ರುವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನೋಫಿನ ಬೊಂಬೆಗಿಂಬೆಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತದೇಶದಲ್ಲಿ ಇನ್ನು ಯಾವ ಪ್ರಭುವೂ ಇರನು; ನಾನು ಆ ದೇಶಕ್ಕೆ ಭಯವನ್ನೊಡ್ಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು