Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:14 - ಕನ್ನಡ ಸತ್ಯವೇದವು J.V. (BSI)

14 ಎಲ್ಲರೂ ತಿಳುವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿವಿುತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದರ ಮುಂದೆ ತಿಳುವಳಿಕೆಯಿಲ್ಲದ ಪಶುಪ್ರಾಯರು ಜನರೆಲ್ಲರು. ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಅವನು ಎರಕ ಹೊಯ್ದ ವಿಗ್ರಹಗಳು ಟೊಳ್ಳು, ಶ್ವಾಸವಿಲ್ಲದವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಜನರು ಬುದ್ಧಿಗೇಡಿಗಳಾಗಿದ್ದಾರೆ. ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸಹೋಗುತ್ತಾರೆ. ಆ ವಿಗ್ರಹಗಳು ಕೇವಲ ಸುಳ್ಳಿನ ಕಂತೆಗಳು. ಅವುಗಳಲ್ಲಿ ಜೀವವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ. ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ. ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ, ಅವುಗಳಲ್ಲಿ ಉಸಿರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:14
20 ತಿಳಿವುಗಳ ಹೋಲಿಕೆ  

ಅವರೆಲ್ಲರೂ ಪಶುಪ್ರಾಯರು, ಮಂದರು; ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.


ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು ನೀವೇ ನಮ್ಮ ದೇವರುಗಳು ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.


ಮೂರ್ತಿಗಳನ್ನುಂಟುಮಾಡುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು, ಹೌದು, ಒಟ್ಟಿಗೆ ಅವಮಾನದಲ್ಲಿ ಮುಣುಗುವರು.


ವಿಗ್ರಹಗಳಲ್ಲಿ ಹಿಗ್ಗುವ ಮೂರ್ತಿಪೂಜಕರೆಲ್ಲಾ ತಲೆಬೊಗ್ಗಿಸಲಿ; ದೇವರುಗಳಿರಾ, ನೀವೆಲ್ಲರು ಆತನಿಗೆ ಅಡ್ಡಬೀಳಿರಿ.


ವಿಗ್ರಹಶರಣರೆಲ್ಲಾ ಆಶಾಭಂಗಪಡುವರು; ಅದನ್ನು ಕೆತ್ತಿದವರು ಮನುಷ್ಯಮಾತ್ರದವರೇ; ಅವರೆಲ್ಲರು ಕೂಡಿ ನಿಲ್ಲಲಿ, ಒಟ್ಟಿಗೆ ಹೆದರಿಕೊಂಡು ಲಜ್ಜೆಪಡುವರು.


ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ


ಪಶುಪ್ರಾಯನು ಅರಿಯನು; ಹುಚ್ಚನು ತಿಳಿಯನು.


ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; ಹುಚ್ಚರೇ, ನಿಮಗೆ ಬುದ್ಧಿಬರುವದು ಯಾವಾಗ?


ಇವನು ಇಥಿಯೇಲನಿಗೆ, ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು. ಮನುಷ್ಯರಲ್ಲಿ ನನ್ನಂಥ ಪಶುಪ್ರಾಯನು ಇಲ್ಲವಷ್ಟೆ! ಮಾನುಷವಿವೇಕವು ನನಗಿಲ್ಲ.


ಅವರು ಸತ್ಯದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿಕರ್ತನನ್ನು ಪೂಜಿಸದೆ ಸೃಷ್ಟಿವಸ್ತುಗಳನ್ನೇ ಪೂಜಿಸಿ ಸೇವಿಸುವವರಾದರು. ಸೃಷ್ಟಿಕರ್ತನೊಬ್ಬನೇ ನಿರಂತರ ಸ್ತುತಿಹೊಂದತಕ್ಕವನು. ಆಮೆನ್.


ಇಂಥಾ ಬೊಂಬೆಗಳು ಸೌತೆಯ ತೋಟದ ಬೆದರುಗಂಬದಂತಿವೆ, ಮಾತಾಡಲಾರವು; ಹೊತ್ತುಕೊಂಡುಹೋಗಬೇಕು, ನಡೆಯಲಾರವು. ಅವುಗಳಿಗೆ ಅಂಜಬೇಡಿರಿ, ಕೇಡುಮಾಡಲಾರವು, ಮೇಲುಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ.


ಮುಂದಿನ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆಯೂ ಕೈಗಳೂ ಕಡಿಯಲ್ಪಟ್ಟು ಹೊಸ್ತಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಯೆಹೋವನ ಮಂಜೂಷದ ಮುಂದೆ ಬಿದ್ದಿತ್ತು;


ನಾನು ನಿನ್ನ ಧರ್ಮವನ್ನು ಬೈಲಿಗೆ ತರುವೆನು, ನಿನ್ನ ಕಾರ್ಯಗಳೇನೋ ನಿನಗೆ ನಿಷ್ಪ್ರಯೋಜನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು