Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:2 - ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಹೀಗೆ ಹೇಳುತ್ತಾನೆ - ಜನಾಂಗಗಳ ಆಚರಣೆಯನ್ನು ಅಭ್ಯಾಸಿಸದಿರಿ, ಜನಾಂಗಗಳು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು, “ಜನಾಂಗಗಳ ಆಚರಣೆಯನ್ನು ಅಭ್ಯಾಸ ಮಾಡಿಕೊಳ್ಳಬೇಡಿರಿ, ಜನಾಂಗಗಳು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಅನ್ಯಜನಾಂಗಗಳ ಆಚರಣೆಯನ್ನು ಅನುಸರಿಸಬೇಡಿ ಅವರು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಹೀಗೆ ಹೇಳುತ್ತಾನೆ: “ಬೇರೆ ಜನಾಂಗಗಳಂತೆ ಜೀವಿಸಬೇಡಿ. ಆಕಾಶದಲ್ಲಿ ಕಾಣುವ ವಿಶೇಷ ಉತ್ಪಾತಗಳಿಗೆ ಹೆದರಬೇಡಿರಿ. ಆಕಾಶದಲ್ಲಿ ಕಾಣುವ ಉತ್ಪಾತಗಳಿಗೆ ಬೇರೆ ಜನಾಂಗಗಳು ಹೆದರುತ್ತವೆ. ಆದರೆ ನೀವು ಅವುಗಳಿಗೆ ಹೆದರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಹೀಗೆ ಹೇಳುತ್ತಾರೆ: ಬೇರೆ ಜನಾಂಗಗಳ ಆಚರಣೆಗಳನ್ನು ಅನುಸರಿಸಬೇಡಿರಿ. ಅವರು ಆಕಾಶದ ಗುರುತುಗಳಿಗೆ ಹೆದರುತ್ತಾರೆ. ನೀವು ಅವುಗಳಿಗೆ ಹೆದರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:2
10 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಎದುರಿನಿಂದ ಹೊರಡಿಸುವ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದದರಿಂದ ನನಗೆ ಹೇಸಿಗೆಯಾದರು.


ನೀವು ವಾಸವಾಗಿದ್ದ ಐಗುಪ್ತದೇಶದ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಬರಮಾಡುವ ಕಾನಾನ್‍ದೇಶದ ಆಚರಣೆಗಳನ್ನೂ ನೀವು ಅನುಸರಿಸಬಾರದು; ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಬಾರದು.


ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟುಮಾತ್ರವೂ ಸಾಗದು.


ಬಳಿಕ ದೇವರು - ಆಕಾಶಮಂಡಲದಲ್ಲಿ ಬೆಳಕುಗಳು ಉಂಟಾಗಲಿ; ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ; ಇದಲ್ಲದೆ ಅವು ಗುರುತುಗಳಾಗಿದ್ದು ಸಮಯಗಳನ್ನೂ ದಿನಸಂವತ್ಸರಗಳನ್ನೂ ತೋರಿಸಲಿ;


ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ ಎಂಬದೇ ಅಂದನು.


ಇಸ್ರಾಯೇಲ್ ವಂಶದವರೇ, ಯೆಹೋವನು ನಿಮಗೆ ನುಡಿಯುವ ಮಾತನ್ನು ಕೇಳಿರಿ;


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಹೇಸಿಗೆ ಕೆಲಸಗಳನ್ನು ಅನುಸರಿಸಲೇಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು