ಯೆರೆಮೀಯ 10:3 - ಕನ್ನಡ ಸತ್ಯವೇದವು J.V. (BSI)3 ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಬಾಚಿಯಿಂದ ರೂಪಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆ ಜನಾಂಗಗಳ ಧಾರ್ಮಿಕ ಪದ್ಧತಿಗಳು ಶೂನ್ಯ. ಅರಣ್ಯದ ಮರಗಳನ್ನು ಅವರು ಕತ್ತರಿಸುತ್ತಾರೆ ಬಡಗಿಯ ಕೈಯಿಂದ, ಅವನ ಉಳಿಯಿಂದ, ಅದನ್ನು ರೂಪಿಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಬೇರೆ ಜನರ ಸಂಪ್ರದಾಯಗಳು ನಿಷ್ಪ್ರಯೋಜಕವಾದವುಗಳಾಗಿವೆ. ಅವರ ವಿಗ್ರಹಗಳು ಅರಣ್ಯದ ಮರವಲ್ಲದೆ ಮತ್ತೇನಲ್ಲ. ಅವರ ವಿಗ್ರಹಗಳು ಬಡಗಿಯು ಉಳಿಯಿಂದ ಮಾಡಲ್ಪಟ್ಟವುಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಜನಾಂಗಗಳ ಪದ್ಧತಿಗಳು ವ್ಯರ್ಥವಾಗಿವೆ. ಹೇಗೆಂದರೆ, ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ. ಅದು ಕೊಡಲಿಯಿಂದ ಕಡಿದ ಬಡಿಗೆಯವನ ಕೈಕೆಲಸವೇ. ಅಧ್ಯಾಯವನ್ನು ನೋಡಿ |