Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:11 - ಕನ್ನಡ ಸತ್ಯವೇದವು J.V. (BSI)

11 ಆದಕಾರಣ ಯೆಹೋವನೆಂಬ ನಾನು ಹೀಗನ್ನುತ್ತೇನೆ - ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದಕಾರಣ ಯೆಹೋವನೆಂಬ ನಾನು ಹೀಗೆನ್ನುತ್ತೇನೆ, ‘ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದಕಾರಣ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ : ಇಗೋ, ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ಬರಮಾಡುವೆನು. ಇವರು ನನಗೆ ಮೊರೆಯಿಟ್ಟರೂ ನಾನೂ ಕಿವಿಗೊಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಹೇಳುತ್ತಾನೆ, “ನಾನು ಶೀಘ್ರವಾಗಿ ಯೆಹೂದದ ಜನರಿಗೆ ಏನಾದರೊಂದು ಭಯಂಕರ ಅನಾಹುತ ಸಂಭವಿಸುವಂತೆ ಮಾಡುತ್ತೇನೆ. ಅವರು ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಅವರು ಪಶ್ಚಾತ್ತಾಪಪಡುವರು. ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಅವರ ಮೊರೆಯನ್ನು ಕೇಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ಅವರು ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ತರುವೆನು. ಅವರು ನನಗೆ ಕೂಗಿದರೂ ನಾನು ಅವರನ್ನು ಕೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:11
35 ತಿಳಿವುಗಳ ಹೋಲಿಕೆ  

ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸೆನು, ಉಳಿಸೆನು; ಅವರು ಕೂಗಿಕೊಳ್ಳುವ ಮಹಾಶಬ್ದವು ನನ್ನ ಕಿವಿಗೆ ಬಿದ್ದರೂ ಲಾಲಿಸೆನು.


ನೀವು [ನನ್ನ ಕಡೆಗೆ] ಕೈಯೆತ್ತುವಾಗ ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು, ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರ ಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.


ಆಗ ಸೇನಾಧೀಶ್ವರ ಯೆಹೋವನು ಇಂತೆಂದನು - ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವದಿಲ್ಲ;


ಇಷ್ಟೆಲ್ಲಾ ನಡಿಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು; ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವನು.


ಇವರು ಉಪವಾಸ ಮಾಡುವಾಗ ಇವರ ಮೊರೆಯನ್ನು ಕೇಳೆನು; ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು; ಖಡ್ಗ ಕ್ಷಾಮ ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು ಎಂದು ಹೇಳಿದನು.


ಆತನು - ಈ ದೇಶದ ಮೇಲೆಯೂ ಜನರ ಮೇಲೆಯೂ ಯೆಹೂದದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಿಕ್ಷೆಯನ್ನು ಬರಮಾಡುವೆನು.


ಇಸ್ರಾಯೇಲ್ ವಂಶವೂ ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡದ್ದರಿಂದ ನಿನ್ನನ್ನು ನಾಟಿದ ಸೇನಾಧೀಶ್ವರನಾದ ಯೆಹೋವನು ನಿನಗೆ ಕೆಡುಕಾಗಲಿ ಎಂದು ಶಪಿಸಿದ್ದಾನೆ.


ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ ನನ್ನ ಧರ್ಮಬೋಧನೆಯನ್ನು ಅಸಡ್ಡೆ ಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.


ಭೂನಿವಾಸಿಯೇ, ಭಯವೂ ಗುಂಡಿಯೂ ಬಲೆಯೂ ನಿನಗೆ ಕಾದಿವೆ.


ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಸಿಂಹದ ಕಡೆಯಿಂದ ಓಡಿದವನಿಗೆ ಕರಡಿಯು ಎದುರುಬಿದ್ದಂತಾಗುವದು; ಅವನು ಮನೆಗೆ ಓಡಿಬಂದು ಕೈಯನ್ನು ಗೋಡೆಯ ಮೇಲೆ ಊರಲು ಹಾವು ಕಚ್ಚಿದ ಹಾಗಾಗುವದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಕೇಡು, ಎಂದೂ ಕಾಣದ ಕೇಡು, ಇಗೋ ಬಂತು!


ಇವನೂ ಇವನ ಸಂತತಿಯವರೂ ಸೇವಕರೂ ನಡಿಸಿದ ಅಧರ್ಮಕ್ಕಾಗಿ ಇವರನ್ನು ದಂಡಿಸುವೆನು. ನಾನು ಇವರನ್ನೂ ಯೆರೂಸಲೇವಿುನವರನ್ನೂ ಯೆಹೂದ್ಯರನ್ನೂ ನಿಮಗೆ ಬಹು ಕೇಡಾಗುವದೆಂದು ಎಚ್ಚರಿಸಿದರೂ ಇವರುಗಳು ಕೇಳಲಿಲ್ಲವಾದ್ದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು.


ಇಗೋ, ನಾನು ಯೆಹೂದ್ಯರಿಗೂ ಯೆರೂಸಲೇವಿುನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾವಿುಯೂ ಇಸ್ರಾಯೇಲ್ಯರ ದೇವರೂ ಆದ ಯೆಹೋವನು ಅನ್ನುತ್ತಾನೆ.


ಆದಕಾರಣ ಅವರ ಮಾರ್ಗವು ಕತ್ತಲಲ್ಲಿ ಜಾರಿಬೀಳುವ ಇಳುಮೇಡುಗಳಿಗೆ ಸಮಾನವಾಗುವದು; ಅವರು ಅಟ್ಟಲ್ಪಟ್ಟು ಅಂಧಕಾರದಲ್ಲಿ ಬಿದ್ದುಹೋಗುವರು; ನಾನು ಅವರ ಮೇಲೆ ಕೇಡನ್ನು, ದಂಡನೆಯ ವರುಷದ ಕೇಡನ್ನು ಬರಮಾಡುವೆನು. ಇದು ಯೆಹೋವನ ನುಡಿ.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ಈ ಪಟ್ಟಣದವರೂ ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು ಎಂದು ಸಮಸ್ತ ಜನರಿಗೆ ಸಾರಿದನು.


ಯೆಹೂದದ ಅರಸರೇ, ಯೆರೂಸಲೇವಿುನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಮೊರ್ರೆನ್ನುವವು.


ನೀನು ಅವರಿಗೆ - ಮರಣವ್ಯಾಧಿಗೆ ಗೊತ್ತಾದವರು ಮರಣವ್ಯಾಧಿಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ, ಕ್ಷಾಮಕ್ಕೆ ಗೊತ್ತಾದವರು ಕ್ಷಾಮಕ್ಕೆ, ಸೆರೆಗೆ ಗೊತ್ತಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ ಎಂದು ಹೇಳು.


ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ; ಅವರು ತಮ್ಮ ಕೇಡಿನ ನಿವಿುತ್ತ ನನಗೆ ಮೊರೆಯಿಡುವಾಗ ನಾನು ಕೇಳೆನು.


ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ ಸ್ವಾವಿುಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.


ಆತನು - ಈ ದೇಶದ ಮೇಲೆಯೂ ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;


ದೇವರು ಪೊಳ್ಳುಮಾತಿಗೆ ಕಿವಿಗೊಡುವದೇ ಇಲ್ಲ, ಸರ್ವಶಕ್ತನು ಅದನ್ನು ಎಂದಿಗೂ ಲಕ್ಷಿಸುವದಿಲ್ಲ.


ಯೆಹೂದವು ದುಃಖಿಸುತ್ತದೆ, ಅದರ ಊರುಗಳವರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇವಿುನವರ ಗೋಳಾಟವು ಕೇಳಿಸುತ್ತದೆ.


ಈಗ ನೀನು ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಈ ಮಾತನ್ನು ಹೇಳು - ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ನಿಮಗೆ ವಿರುದ್ಧವಾಗಿ ಯೋಚಿಸಿ ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


ಕುರುಬರು ಓಡಿಹೋಗುವದಕ್ಕೆ ಮಾರ್ಗವು ಸಿಕ್ಕದು, ಮಂದೆಯ ಹಿರಿಯ ಮಣಿಗಳು ತಪ್ಪಿಸಿಕೊಳ್ಳುವದಕ್ಕೆ ಆಸ್ಪದ ದೊರೆಯದು.


ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು ನನ್ನ ಸುತ್ತುಮುತ್ತಲು ಕರೆಯಿಸಿದ್ದೀ; ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ; ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ.


ನರಪುತ್ರನೇ, ಇವರು ತಮ್ಮ ಬೊಂಬೆಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ ತಮಗೆ ಪಾಪಕಾರಿಯಾದ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವದು ಯುಕ್ತವೋ? ಎಂದಿಗೂ ಅಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು