Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:17 - ಕನ್ನಡ ಸತ್ಯವೇದವು J.V. (BSI)

17 ಇಸ್ರಾಯೇಲ್ ವಂಶವೂ ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡದ್ದರಿಂದ ನಿನ್ನನ್ನು ನಾಟಿದ ಸೇನಾಧೀಶ್ವರನಾದ ಯೆಹೋವನು ನಿನಗೆ ಕೆಡುಕಾಗಲಿ ಎಂದು ಶಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, “ನಿನಗೆ ಕೆಡುಕಾಗಲಿ” ಎಂದು ಶಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಸರ್ವಶಕ್ತ ಸರ್ವೇಶ್ವರನಾದ ನಾನೇ ಈ ಇಸ್ರಯೇಲನ್ನೂ ಜುದೇಯವನ್ನೂ ನೆಟ್ಟಿ ಬೆಳೆಸಿದೆ. ಆದರೆ ಈಗ ‘ನಿನಗೆ ಕೇಡು,’ ಎಂದು ಶಪಿಸುತ್ತಿದ್ದೇನೆ. ಏಕೆಂದರೆ ಬಾಳನಿಗೆ ಧೂಪಾರತಿಯೆತ್ತಿ, ನನ್ನನ್ನು ಕೆಣಕಿ, ತಮಗೇ ಕೆಡುಕನ್ನು ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸರ್ವಶಕ್ತನಾದ ಯೆಹೋವನು ನಿಮ್ಮನ್ನು ನೆಟ್ಟನು. ನಿಮಗೆ ಕೇಡು ಬರುವದೆಂದು ಆತನು ಸಾರಿರುವನು. ಏಕೆಂದರೆ ಇಸ್ರೇಲ್ ವಂಶವೂ ಯೆಹೂದ ವಂಶವೂ ದುಷ್ಕೃತ್ಯಗಳನ್ನು ಮಾಡಿವೆ. ಬಾಳನಿಗೆ ಹೋಮವನ್ನರ್ಪಿಸಿ ನನಗೆ ಕೋಪ ಬರುವಂತೆ ಮಾಡಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇಸ್ರಾಯೇಲಿನ ವಂಶವೂ ಯೆಹೂದದ ವಂಶವೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ, ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ, ನಿನ್ನನ್ನು ನೆಟ್ಟ ಸೇನಾಧೀಶ್ವರ ಯೆಹೋವ ದೇವರು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:17
33 ತಿಳಿವುಗಳ ಹೋಲಿಕೆ  

ಅವನು ಅದನ್ನು ಅಗತೆಮಾಡಿ ಕಲ್ಲುಗಳನ್ನು ತೆಗೆದುಹಾಕಿ ಒಳ್ಳೊಳ್ಳೇ ದ್ರಾಕ್ಷೆಯ ಸಸಿಗಳನ್ನು ನೆಟ್ಟು ಮಧ್ಯದಲ್ಲಿ ಬುರುಜನ್ನು ಕಟ್ಟಿ ದ್ರಾಕ್ಷೆಯ ತೊಟ್ಟಿಯನ್ನು ಕೊರೆಯಿಸಿ ಮಾಡಿಕೊಂಡು ತೋಟವು [ಒಳ್ಳೇ] ದ್ರಾಕ್ಷೆಯ ಹಣ್ಣನ್ನು ಕೊಡುವದೆಂದು ಎದುರುನೋಡುತ್ತಿರಲು ಅದು ಹೊಲಸುಹಣ್ಣನ್ನು ಬಿಟ್ಟಿತು.


ನೀನು ಅವರನ್ನು ನಾಟಿದ್ದೀ, ಅವರು ಬೇರೂರಿ ಬೆಳೆದು ಹಣ್ಣುಬಿಟ್ಟಿದ್ದಾರೆ; ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.


ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೇಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷೇಬಳ್ಳಿಯ ಕೆಟ್ಟ ರೆಂಬೆಗಳಾದದ್ದೇನು?


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ಈ ಪಟ್ಟಣದವರೂ ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು ಎಂದು ಸಮಸ್ತ ಜನರಿಗೆ ಸಾರಿದನು.


ಆಮೇಲೆ - ಅದು ಆ [ದೇವದಾರು ಇದ್ದ] ದೇಶದ ಒಂದು ಬೀಜವನ್ನು ತೆಗೆದುಕೊಂಡು ಫಲವತ್ತಾದ ನೀರಾವರಿಯ ಭೂವಿುಯಲ್ಲಿ ನೆಟ್ಟು ನೀರವಂಜಿಯ ಹಾಗೆ ಬೆಳೆಯಿಸಿತು.


ಯೆಹೋವನ ಈ ವಾಕ್ಯವನ್ನು ಕೇಳು - ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.


ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.


ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ - ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು;


ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪರೋಷಗಳು ಅಪಾರವಾಗಿವೆ ಎಂದು ಅಪ್ಪಣೆಕೊಟ್ಟನು.


ಇಗೋ, ನಾನು ಯೆಹೂದ್ಯರಿಗೂ ಯೆರೂಸಲೇವಿುನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾವಿುಯೂ ಇಸ್ರಾಯೇಲ್ಯರ ದೇವರೂ ಆದ ಯೆಹೋವನು ಅನ್ನುತ್ತಾನೆ.


ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ [ಇವನನ್ನು ಕೊಂದುಹಾಕಿ] ನಮಗೆ ದೊಡ್ಡ ಕೇಡನ್ನು ಉಂಟುಮಾಡಿಕೊಳ್ಳುವವರಾಗಿದ್ದೇವೆ ಎಂಬದಾಗಿ ಸಕಲಜನ ಸಮೂಹಕ್ಕೆ ಹೇಳಿದರು.


ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡಿರಿ; ಹಾಗಾದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.


ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರಿಗಿ ಬರಮಾಡುವೆನು; ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ.


ನಾನು ದಂಡನೆ ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.


ಆದಕಾರಣ ಯೆಹೋವನೆಂಬ ನಾನು ಹೀಗನ್ನುತ್ತೇನೆ - ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.


ನೀವು ಕಳವು ಕೊಲೆ ಹಾದರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ ಬಾಳನಿಗೆ ಹೋಮವನ್ನರ್ಪಿಸಿ ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ನಿನ್ನ ಬಲಗೈ ನೆಟ್ಟು ಸಾಕಿ ಬೆಳಸಿದ ಸಸಿಯನ್ನು ಕಾಪಾಡು.


ನೀನು ಐಗುಪ್ತದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು ಜನಾಂಗಗಳನ್ನು ಹೊರಗೆ ಹಾಕಿ ಅದನ್ನು ನೆಟ್ಟಿ.


ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ ನಮ್ಮ ಪಿತೃಗಳನ್ನೇ ನೆಲೆಗೊಳ್ಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.


ನನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಿಸುವರು.


ಆಗ ಯೆಹೋವನು ನನಗೆ ಹೀಗೆ ಹೇಳಿದನು - ಈ ದೇಶನಿವಾಸಿಗಳೆಲ್ಲರ ಮೇಲೆ ಬಡಗಲಿಂದ ಕೇಡು ಉಕ್ಕಿ ಬರುವದು.


ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.


ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು; ಯೆರೂಸಲೇವಿುನ ಬೀದಿಗಳೆಷ್ಟೋ ತುಚ್ಫದೇವತೆಯಾದ ಬಾಳನಿಗೆ ಹೋಮಮಾಡುವದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.


ಮತ್ತು ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಯಿಕ್ಕಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.


ಇಸ್ರಾಯೇಲ್ ವಂಶವೂ ಯೆಹೂದ ವಂಶವೂ ತಮ್ಮ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ; ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ. ಇದು ಯೆಹೋವನ ನುಡಿ.


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡಿಸುತ್ತಾ ನನ್ನನ್ನು ಕೆಣಕುವದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪದೂಷಣೆಗಳಿಗೆ ಗುರಿಯಾಗುವಿರಿ.


ಅನ್ಯದೇವತೆಗಳಿಗೆ ಧೂಪಹಾಕುವದಕ್ಕಾಗಿ ಯೆಹೂದದ ಎಲ್ಲಾ ಪಟ್ಟಣಗಳಲ್ಲಿಯೂ ಪೂಜಾಸ್ಥಳಗಳನ್ನು ಏರ್ಪಡಿಸಿದನು. ಹೀಗೆ ತನ್ನ ಪಿತೃಗಳ ದೇವರಾದ ಯೆಹೋವನನ್ನು ರೇಗಿಸಿದನು.


ನನ್ನ ಜನರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ ಸರಿಯಲ್ಲದ ಸೀಳುದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.


ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ.


ಅನ್ಯದೇವತೆಗಳಿಗೆ ಧೂಪಹಾಕುವದನ್ನು ನಿಲ್ಲಿಸಲಿಲ್ಲ, ತಮ್ಮ ದುರಾಚಾರವನ್ನು ಬಿಡಲಿಲ್ಲ.


ಇಸ್ರಾಯೇಲು ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣು ಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂವಿುಯು ಎಷ್ಟು ಒಳ್ಳೆಯದೋ ಅಷ್ಟು ಒಳ್ಳೆಯ ವಿಗ್ರಹಸ್ತಂಭಗಳನ್ನು ಮಾಡಿಕೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು