ಯೆರೆಮೀಯ 11:21 - ಕನ್ನಡ ಸತ್ಯವೇದವು J.V. (BSI)21 ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ - ನಮ್ಮ ಕೈಯಿಂದ ನೀನು ಸಾಯಬಾರದಾಗಿದ್ದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ, “ನಮ್ಮ ಕೈಯಿಂದ ನೀನು ಸಾಯಬಾರದೆಂದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹೀಗಿರಲು, “ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಬೇಡ, ಮಾಡಿದರೆ ನಮ್ಮ ಕೈಯಿಂದಲೆ ನೀನು ಸಾಯುವೆ,” ಎಂದು ಅನಾತೋತಿನವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅನಾತೋತಿನ ಜನರು ಯೆರೆಮೀಯನನ್ನು ಕೊಲೆ ಮಾಡಬೇಕೆಂದು ಯೋಚಿಸುತ್ತಿದ್ದರು. ಆ ಜನರು ಯೆರೆಮೀಯನಿಗೆ, “ಯೆಹೋವನ ಹೆಸರಿನಿಂದ ನೀನು ಪ್ರವಾದಿಸಬೇಡ, ನೀನು ಹಾಗೆ ಮಾಡಿದರೆ ನಾವು ನಿನ್ನ ಕೊಲೆ ಮಾಡುವೆವು” ಎಂದರು. ಅನಾತೋತಿನ ಆ ಜನರ ಬಗ್ಗೆ ಯೆಹೋವನು ಒಂದು ನಿರ್ಣಯವನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದ್ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ ನೀನು, “ನಮ್ಮ ಕೈಯಿಂದ ಸಾಯದ ಹಾಗೆ ಯೆಹೋವ ದೇವರ ಹೆಸರಿನಲ್ಲಿ ಪ್ರವಾದನೆ ಹೇಳಬೇಡ,” ಅನ್ನುವವರಿಗೆ ಯೆಹೋವ ದೇವರು ಹೇಳುವುದೇನೆಂದರೆ, ಅಧ್ಯಾಯವನ್ನು ನೋಡಿ |