Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:22 - ಕನ್ನಡ ಸತ್ಯವೇದವು J.V. (BSI)

22 ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು, ಅವರ ಗಂಡು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರ ವಿಷಯವಾಗಿ ಸರ್ವೇಶ್ವರ, “ಇಗೋ ಅವರನ್ನು ನಾನು ದಂಡಿಸಿಯೇ ತೀರುವೆನು. ಅವರ ಯುವಕರು ಕತ್ತಿಗೆ ತುತ್ತಾಗುವರು. ಅವರ ಗಂಡುಹೆಣ್ಣು ಮಕ್ಕಳು ಕ್ಷಾಮದಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸರ್ವಶಕ್ತನಾದ ಯೆಹೋವನು, “ನಾನು ಕೂಡಲೇ ಅನಾತೋತಿನ ಜನರನ್ನು ದಂಡಿಸುವೆನು. ಅವರ ಯುವಕರೆಲ್ಲ ಯುದ್ಧದಲ್ಲಿ ಮಡಿದು ಹೋಗುವರು. ಅವರ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಹಸಿವಿನಿಂದ ಸತ್ತುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಖಡ್ಗದಿಂದ ಸಾಯುವರು. ಅವರ ಪುತ್ರಪುತ್ರಿಯರು ಹಸಿವೆಯಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:22
9 ತಿಳಿವುಗಳ ಹೋಲಿಕೆ  

ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡಿರು ಮಕ್ಕಳನ್ನು ನೀಗಿಕೊಂಡು ವಿಧವೆಯರಾಗಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ;


ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ ಕನ್ಯೆಯರನ್ನೂ ಮುದುಕರನ್ನೂ ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.


ಯುವಕವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣೀ ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಹತಿಸಿದಿ.


ಏಕಂದರೆ ಬೀದಿಗಳಲ್ಲಿ ಮಕ್ಕಳೂ ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿದೆ.


ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರಿಯೆಂಬ ವನಕ್ಕೆ ಬೆಂಕಿಹಚ್ಚುವೆನು, ಅದು ಸುತ್ತುಮುತ್ತಣದನ್ನೆಲ್ಲಾ ನುಂಗಿಬಿಡುವದು.


ನಾನು ಯೆರೂಸಲೇವಿುನವರನ್ನು ಖಡ್ಗಕ್ಷಾಮವ್ಯಾಧಿಗಳಿಂದ ದಂಡಿಸಿದಂತೆ ಐಗುಪ್ತದಲ್ಲಿ ವಾಸಿಸುವವರನ್ನೂ ದಂಡಿಸುವೆನು;


ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.


ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮಗೆ ಕಳುಹಿಸಿದೆನು; ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಅಶ್ವಗಳನ್ನು ಸೂರೆಮಾಡಿಸಿದೆನು; ನಿಮ್ಮ ದಂಡಿನ ಗಬ್ಬು ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು