ಯೆರೆಮೀಯ 11:5 - ಕನ್ನಡ ಸತ್ಯವೇದವು J.V. (BSI)5 ನಾನು ನಿಮ್ಮ ದೇವರಾಗಿದ್ದು ಹಾಲೂ ಜೇನೂ ಹರಿಯುವ ದೇಶವನ್ನು ಕೊಡುವದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು ಎಂದು ಹೇಳಿದೆನಷ್ಟೆ; ಆ ನನ್ನ ಮಾತು ಈಗ ಕೈಗೂಡಿದೆ. ನಾನು ಅವರಿಗೆ ವಿಧಿಸಿದ ನಿಬಂಧನವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ ಎಂಬದಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನುಡಿಯುತ್ತಾನೆಂದೇ ಸಾರಬೇಕು. ಆಗ ನಾನು - ಅಪ್ಪಣೆಯಂತಾಗಲಿ, ಯೆಹೋವನೇ, ಎಂದು ಉತ್ತರಕೊಟ್ಟೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾನು ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದೆನಷ್ಟೆ. ಆ ನನ್ನ ಮಾತು ಈಗ ಕೈಗೂಡಿದೆ” ಎಂದು ಸಾರಬೇಕು ಎಂದನು. ಆಗ ನಾನು, “ಅಪ್ಪಣೆಯಂತಾಗಲಿ, ಯೆಹೋವನೇ” ಎಂದು ಉತ್ತರಕೊಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹಾಲೂ ಜೇನೂ ಹರಿಯುವ ನಾಡನ್ನು, ಅಂದರೆ ಇಂದು ನೀವಿರುವ ನಾಡನ್ನು, ಕೊಡುವುದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಯೇಲಿನ ದೇವರಾದ ಸರ್ವೇಶ್ವರ ಹೇಳುವ ಮಾತು.” ಆಗ ನಾನು, “ತಮ್ಮ ಅಪ್ಪಣೆಯಂತಾಗಲಿ, ಸರ್ವೇಶ್ವರಾ,” ಎಂದು ಉತ್ತರಕೊಟ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ನಾನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಲು ನಾನು ಇದೆಲ್ಲವನ್ನು ಮಾಡಿದೆ. ನಾನು ಅವರಿಗೆ ಫಲವತ್ತಾದ ಭೂಮಿಯನ್ನೂ ಹಾಲು ಮತ್ತು ಜೇನು ಹರಿಯುವ ಪ್ರದೇಶವನ್ನೂ ಕೊಡುವ ವಾಗ್ದಾನ ಮಾಡಿದ್ದೆ. ನೀವು ಈಗ ಈ ಪ್ರದೇಶದಲ್ಲಿ ವಾಸಮಾಡುತ್ತಿದ್ದೀರಿ.” ನಾನು, “ಯೆಹೋವನೇ ನಿನ್ನ ಅಪ್ಪಣೆಯಂತಾಗಲಿ” ಎಂದು ಉತ್ತರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹಾಲು ಜೇನು ಹರಿಯುವ ನಾಡನ್ನು, ಎಂದರೆ ಇಂದು ನೀವಿರುವ ನಾಡನ್ನು ಕೊಡುವುದಾಗಿ ನಿಮ್ಮ ಮೂಲ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವ ಮಾತು.” “ಓ ಯೆಹೋವ ದೇವರೇ, ಹಾಗೆಯೇ ಆಗಲಿ,” ಎಂದೆನು. ಅಧ್ಯಾಯವನ್ನು ನೋಡಿ |