Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:6 - ಕನ್ನಡ ಸತ್ಯವೇದವು J.V. (BSI)

6 ಯೆಹೋವನು ನನಗೆ ಹೀಗೆ ಹೇಳಿದನು - ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು - ಈ ನಿಬಂಧನವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ನನಗೆ, “ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು, ‘ಈ ನಿಬಂಧನ ವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ನನಗೆ : “ಜುದೇಯದ ನಗರಗಳಲ್ಲೂ ಜೆರುಸಲೇಮಿನ ಹಾದಿಬೀದಿಗಳಲ್ಲೂ ಈ ಸಮಾಚಾರವನ್ನು ಹರಡು - ಈ ಒಡಂಬಡಿಕೆಯ ವಚನಗಳನ್ನು ಕೇಳಿ ಅದರಂತೆ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ನನಗೆ, “ಯೆರೆಮೀಯನೇ, ಯೆಹೂದದ ಪಟ್ಟಣಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಈ ಸಂದೇಶವನ್ನು ಸಾರು. ಈ ಒಡಂಬಡಿಕೆಯಲ್ಲಿನ ಮಾತುಗಳನ್ನು ಕೇಳಿ ಅನುಸರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ತರುವಾಯ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯ ಬೀದಿಗಳಲ್ಲಿಯೂ ಸಾರಿ ಹೇಳು. ‘ಹೇಗೆಂದರೆ, ಈ ಒಡಂಬಡಿಕೆಯ ಮಾತುಗಳನ್ನು ಕೇಳಿ, ಅವುಗಳನ್ನು ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:6
13 ತಿಳಿವುಗಳ ಹೋಲಿಕೆ  

ವಾಕ್ಯದ ಪ್ರಕಾರ ನಡೆಯುವವರಾಗಿರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಬೇಡಿರಿ.


ಧರ್ಮಶಾಸ್ತ್ರ ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.


ನೀವು ಇದನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ಬೋಕಿಯ ಬಾಗಿಲಿನ ಸಮೀಪದಲ್ಲಿರುವ ಬೆನ್‍ಹಿನ್ನೋಮ್ ತಗ್ಗಿಗೆ ಹೋಗಿ ನಾನು ನಿನಗೆ ತಿಳಿಸುವ ಮಾತುಗಳನ್ನು ಸಾರು -


ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು - ಯೆಹೋವನಿಗೆ ಅಡ್ಡಬೀಳುವದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.


ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು; ನಾನು ಕೋಪ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.


ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ ನೆಮ್ಮದಿಯಾಗಿಯೂ ಇದ್ದು ದಕ್ಷಿಣಪ್ರಾಂತದಲ್ಲಿಯೂ ಇಳಕಲಿನ ಪ್ರದೇಶದಲ್ಲಿಯೂ ಪ್ರಜೆಯು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಬಾರದೋ?


ಗಂಟಲೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ದನಿಗೈದು ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು, ಯಾಕೋಬವಂಶದವರಿಗೆ ಅವರ ಪಾಪಗಳನ್ನು ಅರುಹು.


ಅವನು ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಯ ಕೇಡಿಗಾಗಿ ಲಂಚತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವದಿಲ್ಲ.


ನೀನು ಹೋಗಿ ಯೆರೂಸಲೇವಿುನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ನೀನು ಯೌವನದಲ್ಲಿ [ನನ್ನ ಮೇಲೆ] ಇಟ್ಟಿದ್ದ ಪ್ರೀತಿಯನ್ನೂ ವಿವಾಹ ಕಾಲದ ನಿನ್ನ ಪ್ರೇಮವನ್ನೂ ಬೀಜಬಿತ್ತಿಯೇ ಇಲ್ಲದ ಅರಣ್ಯದಲ್ಲಿ ನೀನು ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.


ಇಸ್ರಾಯೇಲ್ಯರೇ, ಕೇಳಿರಿ; ನೀವು ಬದುಕಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಂತೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು