ಯೆರೆಮೀಯ 12:12 - ಕನ್ನಡ ಸತ್ಯವೇದವು J.V. (BSI)12 ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಕಂಡುಬಂದಿದ್ದಾರೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಜಡಾಡುತ್ತಿರುವುದು ಕಂಡು ಬರುತ್ತಿದೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾಡಿನ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಕೊಳ್ಳೆಗಾರರು ಕಾಡುಗುಡ್ಡೆಗಳ ಮೇಲೆಲ್ಲ ಕಂಡುಬಂದಿದ್ದಾರೆ. ಕಬಳಿಸಿಬಿಡುವುದು ನನ್ನ ಖಡ್ಗ ಯಾರಿಗು ನೆಮ್ಮದಿಯಿಲ್ಲದ ಹಾಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅನೇಕ ಸೈನಿಕರು ಆ ಬೋಳುಬೆಟ್ಟಗಳನ್ನು ತುಳಿದುಕೊಂಡು ಹೋದರು. ಆ ಸೈನ್ಯಗಳಿಂದ ಯೆಹೋವನು ಆ ದೇಶವನ್ನು ದಂಡಿಸಿದನು. ಆ ದೇಶದ ಒಂದು ತುದಿಯಿಂದ ಇನ್ನೊಂದು ತುದಿಯವರೆಗೆ ವಾಸಿಸಿದ ಎಲ್ಲಾ ಜನರನ್ನು ದಂಡಿಸಲಾಯಿತು. ಯಾರೂ ಸುರಕ್ಷಿತವಾಗಿ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮರುಭೂಮಿಯಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ನಾಶಮಾಡುವವರು ಬಂದಿದ್ದಾರೆ. ಏಕೆಂದರೆ, ಯೆಹೋವ ದೇವರ ಖಡ್ಗವು ದೇಶದ ಒಂದು ಕಡೆಯಿಂದ ದೇಶದ ಇನ್ನೊಂದು ಕಡೆಯವರೆಗೂ ನುಂಗಿಬಿಡುತ್ತದೆ. ಯಾವ ಮನುಷ್ಯನೂ ಸುರಕ್ಷಿತವಾಗಿ ಉಳಿಯುವುದಿಲ್ಲ. ಅಧ್ಯಾಯವನ್ನು ನೋಡಿ |
ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.